Site icon Vistara News

Karnataka Weather : ಆಯುಧ ಪೂಜೆಗೆ ಅಡ್ಡಿಯಾಗುತ್ತಾ ಮಳೆ? ಎಲ್ಲೆಲ್ಲಿ ಅಲರ್ಟ್

Men and women walking in Road with rain

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ (Karnataka Weather Forecast) ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಭಾಗವಾದ ದಕ್ಷಿಣ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ: Guest Lecturer : ಅತಿಥಿ ಉಪನ್ಯಾಸಕರಿಗೆ 2 ತಿಂಗಳ ಗೌರವಧನ ಬಿಡುಗಡೆ; ಷರತ್ತು ಅನ್ವಯ!

ಉಷ್ಣಾಂಶಗಳ ಎಚ್ಚರಿಕೆ

ಕರಾವಳಿಯ ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರಗಿ , ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನೂ ರಾಜ್ಯದಲ್ಲಿ ಶನಿವಾರದಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆಯಿಂದ ಕೂಡಿತ್ತು. ಮಣಿ, ಪುತ್ತೂರು ಎಚ್‌ಎಂಎಸ್ ತಲಾ 4 ಹಾಗೂ ಮಂಗಳೂರಲ್ಲಿ 3, ಸುಳ್ಯ 2, ಉಪ್ಪಿನಂಗಡಿ, ಪಣಂಬೂರು, ಮಾಲೂರು, ಕೋಲಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 36.6 ಡಿ.ಸೆ ಹಾಗೂ ಕಡಿಮೆ ಉಷ್ಣಾಂಶ 17. 1ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version