Site icon Vistara News

Rain News | ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಸಾಧಾರಣ ಮಳೆ

Rain News

ಬೆಂಗಳೂರು: ರಾಜ್ಯದಲ್ಲಿ ನವೆಂಬರ್‌ ೬ರವರೆಗೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಜಿಟಿ ಜಿಟಿಯಿಂದ ಸಾಧಾರಣ ಮಳೆಯಾದರೆ (Rain News), ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ ಎರಡು ದಿನ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಅಲ್ಲದೆ, ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಬೆಂಗಳೂರು ನಗರ, ತುಮಕೂರು ಜಿಲ್ಲೆಯ ಪಾವಗಡದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ಉಷ್ಣಾಂಶ 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ | Chinese Rocket | ನಿಯಂತ್ರಣ ತಪ್ಪಿ ಭೂಮಿಗೆ ಅಪ್ಪಳಿಸಲಿದೆ ಚೀನಾದ 22 ಸಾವಿರ ಕೆಜಿ ರಾಕೆಟ್‌, ಜಗತ್ತಿನೆಲ್ಲೆಡೆ ತಲ್ಲಣ

Exit mobile version