Site icon Vistara News

Mid-day Meal : ಶಾಲೆ ಬಿಸಿಯೂಟದಲ್ಲಿ ಸಿಕ್ಕಿತು ಬೆಂದುಹೋದ ಹಲ್ಲಿ; ಹಲವು ವಿದ್ಯಾರ್ಥಿಗಳು ಅಸ್ವಸ್ಥ

lizard in midday meal

ರಾಯಚೂರು: ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ (Mid-day Meal) ಹಲ್ಲಿ ಪತ್ತೆಯಾದ ಘಟನೆ ರಾಯಚೂರು (Raichur news) ಗ್ರಾಮೀಣ ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ (Primary school) ನಡೆದಿದೆ. ಈ ಆಹಾರ ಸೇವಿಸಿದ ಮೂವರು ಮಕ್ಕಳು ಅಸ್ವಸ್ಥರಾಗಿದ್ದಾರೆ.

ಮಧ್ಯಾಹ್ನ ಬಿಸಿಯೂಟಕ್ಕೆ ಇಲ್ಲಿನ ಸಿಬ್ಬಂದಿ ಉಪ್ಪಿಟ್ಟು ಮಾಡಿದ್ದರು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿತ್ತು. ಪಾತ್ರೆಯ ಅಡಿಯಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಯಿತು. ಈ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಯಿತು.

ಶಾಲೆ ಬಳಿ ಸೇರಿದ ಹೆತ್ತವರು

ಬಳಿಕ ಕೆಲವು ಮಕ್ಕಳು ವಾಂತಿ ಮಾಡಲು ಶುರು ಮಾಡಿದರು. ಅವರ ಪೈಕಿ ಮೂರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಶಾಲೆಯಲ್ಲಿ ಇಬ್ಬರು ಅಡುಗೆ ಸಿಬ್ಬಂದಿ ಇದ್ದು ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆಪಾದಿಸಲಾಗಿದೆ. ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವುದು

ಶಾಲೆಯ ಆವರಣದಲ್ಲಿ ವೈದ್ಯರು ಮೊಕ್ಕಾಂ ಹೂಡಿದ್ದು, ಶಾಲೆಯ ಕ್ಯಾಂಪಸ್‌ನಲ್ಲಿ ಪೋಷಕರು ಕೂಡಾ ಜಮಾಯಿಸಿದ್ದಾರೆ. ಎಲ್ಲ ಮಕ್ಕಳ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿರುವುದಾಗಿ ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Anna bhagya Rice: ಅವೈಜ್ಞಾನಿಕ ಗೋದಾಮಿನಿಂದಾಗಿ ಟನ್‌ಗಟ್ಟಲೆ ಅನ್ನಭಾಗ್ಯ ಅಕ್ಕಿ ವೇಸ್ಟ್‌!

ಅಂಗನವಾಡಿಯಲ್ಲಿ ಆಡುತ್ತಿದ್ದ ಬಾಲಕಿ ಮೇಲೆ ಬಿತ್ತು ಕಾಂಕ್ರೀಟ್‌ ಬಾಗಿಲು

ಅಂಗನವಾಡಿ ಆವರಣದಲ್ಲಿ ಪಕ್ಕದಲ್ಲಿದ್ದ ಮನೆಯವರು ಬಾಗಿಲ ಚೌಕಟ್ಟನ್ನು ಇಟ್ಟಿದ್ದರು. ಈ ವೇಳೆ ಭೂಮಿಕಾ ಆಟುವಾಡುತ್ತಾ ಬಾಗಿಲ ಚೌಕಟ್ಟಿನ ಬಳಿ ಹೋಗಿದ್ದಾಳೆ. ಈ ವೇಳೆ ಈಕೆಯ ತಲೆ ಮೇಲೆ ಏಕಾಏಕಿ ಬಾಗಿಲು ಬಿದ್ದಿದೆ. ಇದರಿಂದಾಗಿ ಬಾಲಕಿ ತಲೆಗೆ ಗಂಭೀರ ಗಾಯವಾಗಿದೆ.

ಇನ್ನು ಗಂಭೀರ ಗಾಯಗೊಂಡಿರುವ ಭೂಮಿಕಾಳನ್ನು ಗದಗದ ಜೀಮ್ಸ್‌ಗೆ ದಾಖಲಿಸಲಾಗಿದೆ. ಮುಂಡರಗಿ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ‌ ಸಿಡಿಪಿಓ ಮಹಾದೇವ ಹಾಗೂ ಗ್ರಾಮ‌ ಪಂಚಾಯತಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಯ ವಿವರಗಳನ್ನು ಪಡೆದು ಗ್ರಾಮಸ್ಥರೊಂದಿಗೆ ಚರ್ಚೆಯನ್ನು ಮಾಡಿದ್ದಾರೆ.

Exit mobile version