LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು? - Vistara News

ಕರ್ನಾಟಕ

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

LKG UKG In Govt Schools: 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

VISTARANEWS.COM


on

LKG UKG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
  • 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು.
  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬೇಕು.
  • ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಬೇಕು.
  • ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ 10,000 ರೂ. ಮತ್ತು ಆಯಾಗಳಿಗೆ ಮಾಸಿಕ 5000 ರೂ. ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
  • ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾಡಬೇಕು.

ಆಡಳಿತಾತ್ಮಕ ಕ್ರಮಗಳು

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ | NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಶಿಕ್ಷಕರ ಆಯ್ಕೆಗೆ ಆರ್ಹತೆ

ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ, ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ ಶೇ.50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ಪ್ರೀ- ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್‌ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ (Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.

ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.


    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

    ಬೆಂಗಳೂರು

    Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

    Bengaluru Murder : ವೈಯಾಲಿಕಾವಲ್ ಮಹಿಳೆಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    VISTARANEWS.COM


    on

    By

    Murder case
    Koo

    ಬೆಂಗಳೂರು: ಬೆಂಗಳೂರಿನ (Bengaluru Murder) ವೈಯಾಲಿಕಾವಲ್ ಮಹಾಲಕ್ಷ್ಮೀ ಮರ್ಡರ್ ಕೇಸ್‌ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮಹಿಳೆಯನ್ನು ಕೊಲೆ ಮಾಡಿದವನು ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಪೊಲೀಸರ ಮುಂದೆ ಪ್ರಶ್ನೆಗಳ ಸರಮಾಲೆಯೇ ಇದೆ. ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನನ್ನು ಟ್ರೇಸ್‌ ಮಾಡಿ ಇನ್ನೇನು ಹಿಡಿಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ಎಂಬಾತ ಒಡಿಶಾದಲ್ಲಿ ನಿನ್ನೆ (ಸೆ.25) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಮಹಾಲಕ್ಷ್ಮೀ ಮರ್ಡರ್ ಕೇಸ್ ಪೊಲೀಸರ ಮುಂದೆ ಹಲವು ಸವಾಲುಗಳನ್ನಿಟ್ಟಿದೆ‌. ಆರೋಪಿ ಅರೆಸ್ಟ್ ಆದಮೇಲೆ ಪ್ರಕರಣಕ್ಕೆ ಒಂದು ಫುಲ್ ಸ್ಟಾಪ್ ಇಡಬಹುದಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಇದನ್ನೂ ಓದಿ: Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

    ಮದುವೆ ಆಗುವಂತೆ ಒತ್ತಾಯಿಸಿದ್ದಳು ಮಹಾಲಕ್ಷ್ಮಿ

    ಇನ್ನು ತನಿಖೆ ವೇಳೆ ಒಂದಷ್ಟು ಸ್ಫೋಟಕ ವಿಚಾರಗಳು ಹೊರ ಬಿದ್ದಿದ್ದು, ಮದುವೆಯಾಗುವಂತೆ ಮುಕ್ತಿ ರಂಜನ್‌ನ ಮಹಾಲಕ್ಷ್ಮಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿ ಕೊಲೆ ನಡೆದಿರಬಹುದು ಎಂಬ ಅನುಮಾನ ಮೂಡಿದೆ. ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್‌ ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಹೀಗಾಗಿ ಇಬ್ಬರ ಮಧ್ಯೆ ಸ್ನೇಹ, ಸಲುಗೆ ಬೆಳದಿತ್ತು.

    ಮುಕ್ತಿರಂಜನ್‌ನನ್ನು ತುಂಬಾ ಹಚ್ಡಿಕೊಂಡಿದ್ದ ಮಹಾಲಕ್ಷ್ಮಿ ಆತನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಕೆಲಸ ಮಾಡುತ್ತಿದ್ದ ಸ್ಟೋರ್‌ನಲ್ಲಿ ಬೇರೆ ಹುಡುಗೀಯರ ಜತೆ ಮುಕ್ತಿರಂಜನ್‌ ಮಾತನಾಡಿದರೆ ಮಹಾಲಕ್ಷ್ಮಿ ಸ್ವಲ್ಪವೂ ಸಹಿಸುತ್ತಿರಲಿಲ್ಲ. ಕೂಡಲೇ ಆ ಯುವತಿಯರಿಗೆ ವಾರ್ನ್ ಮಾಡುತ್ತಿದ್ದಳು. ಇನ್ನು ಮುಕ್ತಿರಂಜನ್ ಸಹ ಸ್ವತಃ ಹಠಮಾರಿ ಸ್ವಭಾವದವನಾಗಿದ್ದ ಎಂಬುದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಸೆಪ್ಟೆಂಬರ್ 1ರಂದು ಇಬ್ಬರೂ ಕೆಲಸಕ್ಕೆ ಹಾಜರಾಗಿದ್ದರು. ಎರಡನೇ ತಾರೀಖು ಇಬ್ಬರೂ ರಜೆ ಹಾಕಿ ವೈಯಾಲಿಕಾವಲ್ ಮನೆಗೆ ಹೋಗಿದ್ದರಂತೆ. ಈ ವೇಳೆ ಜಗಳ ಆಗಿ, ಕೊಲೆ ಮಾಡಿ ಮುಕ್ತಿರಂಜನ್‌ ಎಸ್ಕೇಪ್ ಆಗಿರಬಹುದು ಎನ್ನಲಾಗಿದೆ.

    ಮನೆಯಲ್ಲಿ ಎಲ್ಲೂ ರಕ್ತ ಹರಿದಿಲ್ಲ; ಮೂವರ ಫಿಂಗರ್‌ ಪ್ರಿಂಟ್‌ ಪತ್ತೆ

    ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿರುವ ಬಗ್ಗೆಯಂತೂ ಪೊಲೀಸರಿಗೆ ಅನುಮಾನಗಳ ಮೇಲೆ ಅನುಮಾನ ಹುಟ್ಟಿಸಿದೆ. ದೇಹ ಕತ್ತರಿಸುವ ರೀತಿ, ಮನೆಯಲ್ಲಿ ರಕ್ತ ಎಲ್ಲಿಯೂ ಸಹ ಸಿಡಿಯದಂತೆ ಮೃತದೇಹ ಕತ್ತರಿಸಲಾಗಿದೆ. ಹತ್ಯೆಗೈದು ಮೃತದೇಹದ ರಕ್ತ ಹರಿದ ನಂತರ ಕತ್ತರಿಸಲಾಗಿತ್ತಾ ಅನ್ನೋ ಪ್ರಶ್ನೆ ಮುಂದಿವೆ. ಅಲ್ಲದೇ ಮನೆಯಲ್ಲಿ ಇಬ್ಬರಿಂದ ಮೂರು ಜನರ ಫಿಂಗರ್ ಪ್ರಿಂಟ್‌ಗಳು ಪತ್ತೆಯಾಗಿದ್ದು, ಆರೋಪಿಯ ಕೃತ್ಯಕ್ಕೆ ಬೇರೆ ಯಾರಾದರೂ ಸಾಥ್ ನೀಡಿದ್ದರಾ? ಹತ್ಯೆಗೈದು ಇಷ್ಟು ದಿನ ಆರೋಪಿ ತಲೆಮರೆಸಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ತಲೆ ಕೆಡಿಸಿದೆ.

    ಸದ್ಯ ಒಡಿಶಾದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು, ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡಿತಿದೆ. ಈಗಾಗಲೇ ರಾಜ್ಯ ಪೊಲೀಸರ ಎರಡು ತಂಡಗಳು ಒಡಿಶಾದಲ್ಲಿರುವುದರಿಂದ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಮಹಿಳೆ ಮೊಬೈಲ್ ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಹಾವೇರಿ

    Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

    assault case : ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಿಕೆ ಗಿಡಗಳು ಬಲಿಯಾಗಿವೆ. ಪತ್ನಿ ಮನೆಗೆ ಬಾರದ್ದಕ್ಕೆ ಕೋಪಗೊಂಡ ಅಳಿಯ ಮಾವನ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾನೆ.

    VISTARANEWS.COM


    on

    By

    assault case
    Koo

    ಹಾವೇರಿ : ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಅಡಕೆ ತೋಟ ನಾಶಪಡಿಸಿದ್ದಾನೆ. ಮಾವ ಬೆಳೆಸಿದ್ದ 106 ಅಡಿಕೆ ಗಿಡಗಳನ್ನು ಕಡಿದು ಸಿಟ್ಟು (Assault Case) ಹೊರಹಾಕಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    assault case
    assault case

    ದೇವೆಂದ್ರಪ್ಪ ಫಕ್ಕಿರಪ್ಪ ಗಾಣಿಗೇರಗೆ ಸೇರಿದ ಅಡಿಕೆ ತೋಟವನ್ನು ಅಳಿಯ ಬಸವರಾಜ್ ಎಂಬಾತ ಅಡಿಕೆ ಬೆಳೆ ನಾಶ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಬಸವರಾಜ್ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ಆದರೆ ಪತ್ನಿ ಜತೆಗೆ ನಿತ್ಯವು ಜಗಳವಾಡುತ್ತಿದ್ದ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ತವರು ಮನೆ ಸೇರಿದ್ದಳು. ಮೂರು ತಿಂಗಳಿನಿಂದ ಪತ್ನಿ ತವರು ಮನೆಯಲ್ಲಿ ಇದ್ದಿದ್ದಕ್ಕೆ ಸಿಟ್ಟಾದ ಬಸವರಾಜ್‌, ಅಡಿಕೆ ತೋಟವನ್ನು ನಾಶ ಮಾಡಿದ್ದಾನೆ. ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಕೆ ಗಿಡಗಳು ಬಲಿಯಾಗಿವೆ.

    ಇದನ್ನೂ ಓದಿ: Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

    ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ

    ಬೆಳಗಾವಿ: ಕಂಠ ಪೂರ್ತಿ ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ ಬಿದ್ದಿದೆ. ನಡುಬೀದಿಯಲ್ಲೇ ಕುಡುಕ ಅಳಿಯನ ಹಿಡಿದು ಅತ್ತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಮನೆಗೆ ಕರೆದುಕೊಂಡು ಹೋಗಲು ಪತ್ನಿ, ಅತ್ತೆ ಹರಸಾಹಸ ಪಡುತ್ತಿದ್ದರು. ಮನೆಗೆ ಬರಲು ಹಿಂದೇಟ್ಟು ಹಾಕುತ್ತಿದ್ದ ಕುಡುಕ ಅಳಿಯನಿಗೆ ಕಪಾಳಮೋಕ್ಷ ಮಾಡಿ ಹಿಗ್ಗಾಮುಗ್ಗಾ ಥಳಿಸಿದರು. ಕುಡುಕನ ಅವಾಂತರಕ್ಕೆ ಸ್ಥಳೀಯರು ಹೈರಾಣಾದರು. ಜತೆಗೆ ಅಲ್ಲಿದ್ದವರೇ ವಿಡಿಯೊ ಮಾಡಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ದಾವಣಗೆರೆ

    Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

    Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು. ಆದರೆ ಮುಂದೊಂದು ದಿನ ತನ್ನ ಅಕ್ರಮ ಸಂಬಂಧಕ್ಕೆ ಪತಿ ಎಲ್ಲಿ ಅಡ್ಡಿಯಾಗುತ್ತಾನೋ ಎಂದು ತಿಳಿದು ಪ್ರಿಯಕರನ ಜತೆ ಸೇರಿ ಕೊಂದಿದ್ದಳು. ಇದೀಗ ವರ್ಷದ ನಂತರದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

    VISTARANEWS.COM


    on

    By

    Murder case
    Koo

    ದಾವಣಗೆರೆ: ವರ್ಷದ ಹಿಂದೆ ವ್ಯಕ್ತಿಯೊಬ್ಬ ಸಾವಿನ ಜಾಡು ಹಿಡಿದು ಹೊರಟ ಪೊಲೀಸರು‌ ಪ್ರಕರಣವನ್ನು ಭೇದಿಸಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಆಗುತ್ತಾನೆಂದು ತಿಳಿದ ಪಾಪಿ ಪತ್ನಿ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

    ಕೊಲೆಯಾದ ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು, ಇಲಿಯಾಸ್ ಅಹಮ್ಮದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಘಟನೆ ನಡೆದಿದೆ. 2023ರ ಫೆಬ್ರವರಿಯಲ್ಲಿ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಅನಾಮಧೇಯ ಮೃತದೇಹ ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಕಾಣೆಯಾದ ಇಲಿಯಾಸ್ ಅಹಮ್ಮದ್ ಇರಬಹುದು ಎಂದು ಪೊಲೀಸರು ಅನುಮಾನಗೊಂಡಿದ್ದರು.

    ಕೂಡಲೇ‌ ಮೃತನ ಮಕ್ಕಳ ಹಾಗೂ ಮೃತ ದೇಹದ ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದರು. ಡಿಎನ್ಎ ಪರೀಕ್ಷೆಯಲ್ಲಿ ಮೃತ ಇಲಿಯಾಸ್ ಅಹಮ್ಮದ್ ಎಂದು ಧೃಡವಾಗಿತ್ತು. ಬಳಿಕ ಇಲಿಯಾಸ್‌ನ ಸಾವಿನ ಜಾಡು ಹಿಡಿದು ಹೊರಟ ಬಸವಪಟ್ಟಣ ಪೊಲೀಸರು, ಇಲಿಯಾಸ್ ಪತ್ನಿ ಬಿಬಿ ಆಯೇಷಾ ಆಕೆಯ ಪ್ರಿಯಕರ ಮಂಜುನಾಥ್ ಕೊಲೆ ಅರೋಪಿಗಳೆಂದು ಸಾಬೀತಾಗಿದೆ.

    ಪಾರ್ಟಿ ನೆಪದಲ್ಲಿ ಕೊಲೆ

    ಪತಿ ಇಲಿಯಾಸ್‌ಗೆ ನಿದ್ದೆ ಮಾತ್ರೆ ಹಾಕಿ ಆಯೇಷಾ ಮತ್ತು ಮಂಜುನಾಥ್ ಇಬ್ಬರು ದೈಹಿಕ ಸಂಪರ್ಕ ಬೆಳೆಸುತ್ತಿದ್ದರು. ಮುಂದೊಂದು ದಿನ ನಮ್ಮಿಬ್ಬರ ಸಂಬಂಧಕ್ಕೆ ಪತಿ ಅಡ್ಡಿಯಾದರೆ ಅಂತ ಆಯೇಷಾಗೆ ಚಿಂತೆ ಕಾಡಿತ್ತು. ಹೀಗಾಗಿ ಪತಿ ಇಲಿಯಾಸ್‌ನನ್ನು ಕೊಂದರೆ ಅಕ್ರಮ ಸಂಬಂಧಕ್ಕೆ ಅಡ್ಡಿ ಇರುವುದಿಲ್ಲ ಎಂದು ಪ್ಲ್ಯಾನ್‌ ಮಾಡಿಕೊಂಡಿದ್ದರು. ಅದರಂತೆ ಮಂಜುನಾಥ್ ಉಪಾಯದಿಂದ‌ ಇಲಿಯಾಸ್‌ನನ್ನು ಸಾಗರಪೇಟೆ ಬಳಿ ಡಾಬಾದಲ್ಲಿ ಪಾರ್ಟಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಚೆನ್ನಾಗಿ ಮದ್ಯ ಕುಡಿಸಿದ್ದ.

    ಬಲವಂತವಾಗಿ ಚಾನಲ್‌ನಲ್ಲಿ ಈಜಾಡಲು ಕರೆದುಕೊಂಡು ಹೋಗಿ ಮಂಜುನಾಥ್ ಕೊಲೆ ಮಾಡಿದ್ದ. ಇಲಿಯಾಸ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ 24/09/2024ರಂದು ಕುಟುಂಬಸ್ಥರ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಇಲಿಯಾಸ್ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇಲಿಯಾಸ್ ಪತ್ನಿ ಆಯೇಷಾ, ಪ್ರಿಯಕರ ಮಂಜುನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಬೆಂಗಳೂರು

    New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

    New Serial: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಶುರುವಾಗ್ತಿದೆ. ಇದೇ ಸೋಮವಾರದಿಂದ ಅಂದರೆ ಸೆ.30ರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

    VISTARANEWS.COM


    on

    By

    new serial
    Koo

    ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು (New Serial) ವೀಕ್ಷಕರಿಗೆ ಹೇಳಲು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ (star suvarna) ಸಜ್ಜಾಗಿದೆ.

    ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ (ಟೀ) ಮಾರುವವಳಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

    new serial
    new serial

    ಇನ್ನು ಈ ಕಥೆಯ ನಾಯಕ ಅಜಿತ್‌, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಅಜಿತ್‌ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್‌ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

    ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಹೊಚ್ಚ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Murder case
    ಬೆಂಗಳೂರು6 ಗಂಟೆಗಳು ago

    Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

    assault case
    ಹಾವೇರಿ7 ಗಂಟೆಗಳು ago

    Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

    Murder case
    ದಾವಣಗೆರೆ7 ಗಂಟೆಗಳು ago

    Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

    new serial
    ಬೆಂಗಳೂರು10 ಗಂಟೆಗಳು ago

    New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

    World Retinal Day 2024
    ಪ್ರಮುಖ ಸುದ್ದಿ11 ಗಂಟೆಗಳು ago

    World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

    MUda Scam
    ರಾಜಕೀಯ11 ಗಂಟೆಗಳು ago

    Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

    Cancer Treatment AI
    ಆರೋಗ್ಯ12 ಗಂಟೆಗಳು ago

    Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

    Dina Bhavishya
    ಭವಿಷ್ಯ12 ಗಂಟೆಗಳು ago

    Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

    Self Harming
    ಕೋಲಾರ2 ದಿನಗಳು ago

    Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

    karnataka weather Forecast
    ಮಳೆ2 ದಿನಗಳು ago

    Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

    Kannada Serials
    ಕಿರುತೆರೆ12 ತಿಂಗಳುಗಳು ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ12 ತಿಂಗಳುಗಳು ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ12 ತಿಂಗಳುಗಳು ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Bigg Boss- Saregamapa 20 average TRP
    ಕಿರುತೆರೆ11 ತಿಂಗಳುಗಳು ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ10 ತಿಂಗಳುಗಳು ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ12 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ11 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ10 ತಿಂಗಳುಗಳು ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ10 ತಿಂಗಳುಗಳು ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Sudeep's birthday location shift
    ಸ್ಯಾಂಡಲ್ ವುಡ್4 ವಾರಗಳು ago

    Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

    Actor Darshan
    ಸ್ಯಾಂಡಲ್ ವುಡ್4 ವಾರಗಳು ago

    Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

    ಮಳೆ1 ತಿಂಗಳು ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 ತಿಂಗಳುಗಳು ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 ತಿಂಗಳುಗಳು ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 ತಿಂಗಳುಗಳು ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 ತಿಂಗಳುಗಳು ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ2 ತಿಂಗಳುಗಳು ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    ಟ್ರೆಂಡಿಂಗ್‌