Site icon Vistara News

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

LKG UKG

lkg ukg 1st standard admission Age Limit Revised In Karnataka

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

ಆಡಳಿತಾತ್ಮಕ ಕ್ರಮಗಳು

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ | NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಶಿಕ್ಷಕರ ಆಯ್ಕೆಗೆ ಆರ್ಹತೆ

ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ, ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ ಶೇ.50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ಪ್ರೀ- ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್‌ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ (Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.

ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.


    Exit mobile version