ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಸಂಬಂಧ ನ್ಯಾ. ಭಕ್ತವತ್ಸಲ ಸಮಿತಿ ಶಿಫಾರಸಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಭಕ್ತವತ್ಸಲ ಸಮಿತಿ ಶಿಫಾರಸಿನನ್ವಯ ತೀರ್ಮಾನವನ್ನು ತೆಗೆದುಕೊಂಡಿದ್ದು, ಮೀಸಲಾಯಿತಿಯು ಶೇಕಡಾ 50ಕ್ಕಿಂತ ಹೆಚ್ಚು ಮೀರದಂತೆ ಕ್ರಮವಹಿಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಂದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮೀಸಲಾತಿಗಳಲ್ಲಿ ಶೇಕಡಾ 50 ಅನ್ನು ಮೀರುವಂತಿಲ್ಲ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ವರದಿಯ ಪ್ರಾಥಮಿಕ ಶಿಫಾರಸುಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದ್ದು, ಶೇಕಡಾ 33ರಷ್ಟು ಮೀಸಲಾತಿ ಕೊಡಲು ಸರ್ಕಾರ ನಿರ್ಧಾರ ಮಾಡಿದೆ.
ಮೇಯರ್, ಉಪ ಮೇಯರ್, ಸ್ಥಳೀಯ ಸಂಸ್ಥೆಗಳ ಮೀಸಲಾತಿ ಸುಪ್ರೀಂಗೆ
ಬಿಬಿಎಂಪಿ ಮೇಯರ್, ಉಪಮೇಯರ್ ಮೀಸಲಾತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಬಗ್ಗೆ ಸುಪ್ರೀಂ ಗಮನಕ್ಕೆ ತರಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಳ್ಳಲಾಯಿತು.
ಇದನ್ನೂ ಓದಿ | Education News | ಭಾವಿ ಶಿಕ್ಷಕರಿಗೆ ಸಿಹಿ ಸುದ್ದಿ; 5 ವರ್ಷ ವಯೋಮಿತಿ ಹೆಚ್ಚಿಸಿದ ರಾಜ್ಯ ಸರ್ಕಾರ