ಹುಬ್ಬಳ್ಳಿ, ಕರ್ನಾಟಕ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ (Jagadish Shettar) ಅವರು ಸೋಲುತ್ತಾರೆಂದು ಬಿ ಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ಅವರು ಗೆಲ್ಲಬಾರದು ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಬಿಜೆಪಿ ತಂತ್ರ ಹೆಣೆಯುತ್ತಿದ್ದು, ಶೆಟ್ಟರ್ ಸೋಲಿಸುವ ಪ್ರಯತ್ನಕ್ಕೆ ಚಾಲೆ ನೀಡಿದೆ. ಇದರ ಮೊದಲ ಭಾಗವಾಗಿ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಸೆಳೆಯಲಾಗುತ್ತಿದೆ(Karnataka Election 2023).
ಈ ನಿಟ್ಟಿನಲ್ಲಿ ಬಿಜೆಪಿ ಮಹೇಶ್ ಟೆಂಗಿನಕಾಯಿ ಅವರು ಕ್ರಿಯಾಶೀಲರಾಗಿದ್ದು, ತಂತ್ರವನ್ನು ಹೆಣೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಅವರು ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹಾಗೆಯೇ, ಆದಿ ಬಣಜಿಗ ಸಂಘದ ಅಧ್ಯಕ್ಷ ಸದಾಶಿವ ಕಾರಡಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷದ್ರೋಹ, ವಿಶ್ವಾಸದ್ರೋಹ ಮಾಡಿರುವ ಜಗದೀಶ್ ಶೆಟ್ಟರ್ ಅವರನ್ನು ಈ ಬಾರಿ ಸೋಲಿಸಲೇಬೇಕು ಎಂದು ಬಿಜೆಪಿ ಹೈಕಮಾಂಡ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಣೆಯನ್ನು ನೀಡಿದೆ. ಅದೇ ರೀತಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಹಾಗೂ ಅಥಣಿ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸೋಲಿಗೆ ರಣ ತಂತ್ರ ಹೆಣೆಯುತ್ತಿದ್ದಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಇಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಸ್ಪರ್ಧಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಒಬ್ಬ ವ್ಯಕ್ತಿ ಕಟ್ಟಿದ ಕೋಟೆಯಲ್ಲ: ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವು ಒಬ್ಬ ವ್ಯಕ್ತಿ ಕಟ್ಟಿದ ಕೋಟೆಯಲ್ಲ. ಇದುಕಾರ್ಯಕರ್ತರು ಕಟ್ಟಿದ ಕೋಟೆ ಎಂದು ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ಹೇಳಿದ್ದಾರೆ. ಕಳೆದ ಆರು ಚುನಾವಣೆಗಳಲ್ಲಿ ಎಲ್ಲರೂ ಸೇರಿ ಕ್ಷೇತ್ರದಲ್ಲಿ ಕೆಲಸ ಮಾಡಿ ಪಕ್ಷ ಗೆಲ್ಲಿಸಿದ್ದೇವೆ. ಈದ್ಗಾ ಹೋರಾಟದಲ್ಲಿ ಬಿಜೆಪಿ ಕಾರ್ಯಕರ್ತರು ಹುತಾತ್ಮರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Karnataka Election 2023: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುಡ್‌ಬೈ
ನಾನು ಅನ್ನೋದು ಅಹಂಕಾರ ಆಗುತ್ತದೆ ಎಂದು ಜಗದೀಶ್ ಶೆಟ್ಟರ್‌ಗೆ ಮಹೇಶ್ ಟೆಂಗಿನಕಾಯಿ ಅವರು ತಿರುಗೇಟು ನೀಡಿದ್ದಾರೆ. ಯಾರು ಬಡಪಾಯಿ ಅನ್ನೊದು ಕ್ಷೇತ್ರದ ಜನಕ್ಕೆ ಗೊತ್ತಿದೆ. ಶೆಟ್ಟರ್ ಬೇರೆ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದರು, ಅಲ್ಲಿ ಏನಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಅವರು ಪ್ರಶ್ನಿಸಿದ್ದಾರೆ.