Site icon Vistara News

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

Lok Sabha Election 2024

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ (Lok Sabha Election 2024) ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿದೆ. ಮತದಾನ ಮುಕ್ತಾಯಕ್ಕೆ ಇನ್ನು ಎರಡು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ.

ದಕ್ಷಿಣ ಕನ್ನಡ – 58.76, ಉಡುಪಿ – 57.49, ಮಂಡ್ಯ – 57.44, ತುಮಕೂರು -56.62, ಹಾಸನ – 55.90 ಮತದಾನ ಆಗಿದ್ದು, ಈ ಕ್ಷೇತ್ರದಲ್ಲಿ ಶರವೇಗದಲ್ಲಿ ಮತದಾನ ನಡೆಯುತ್ತಿರುವುದು ಕಂಡುಬಂದಿದೆ. ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೂ ಮತದಾನ ಮಾಡಲು ಅವಕಾಶ ಇದ್ದು, ಬಳಿಕ ಮತಗಟ್ಟೆಯನ್ನು ಚುನಾವಣೆ ಅಧಿಕಾರಿಗಳು ಬಂದ್‌ ಮಾಡಲಿದ್ದಾರೆ.

Rahul Dravid

ಇಲ್ಲಿಯವರೆಗೂ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರನಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದಲ್ಲಿ ದಾಖಲೆಯ ಮತದಾನಕ್ಕೆ ಮೊದಲ ಹಂತದ ಮತದಾನ ಸಾಕ್ಷಿ ಆಗುತ್ತಾ ಎಂಬ ಕುತೂಹಲ ಮೂಡಿದೆ. ಮಧ್ಯಾಹ್ಯ ಗಂಟೆಗೆ ಶೇ. 39 ಮತದಾನ ಆಗಿತ್ತು, ಮೂರು ಗಂಟೆಗೆ ಶೇಕಡಾ 50.93 ಮತದಾನ ಆಗಿದೆ.

ಇದನ್ನೂ ಓದಿ | Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿದರೆ ಉಳಿದ ಹನ್ನೊಂದು ಕ್ಷೇತ್ರಗಳಲ್ಲಿ ಶರವೇಗದ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೂ ಮತಗಟ್ಟೆ ಕಡೆ ಉತ್ಸಾಹದಿಂದ ಮತದಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್‌ಗಳಲ್ಲಿ ಇರೋ ಜನರಿಂದ ಈ ಬಾರಿ ದಾಖಲೆ ಮತದಾನವಾಗಿದೆ. ಡಾಲರ್ಸ್ ಕಾಲೋನಿ, ಸದಾಶಿವನಗರ ಹಾಗೂ ಆರ್‌ಆರ್ ನಗರ, ಆನೇಕಲ್‌ ಬೂತ್ನಲ್ಲಿ 3 ಗಂಟೆವರೆಗೂ ಶೇಕಡಾ ಶೇ.65 ಮತದಾನ ದಾಖಲಾಗಿದೆ.

ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Rahul Dravid

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ, ಮಾಜಿ ಕ್ರಿಕೆಟಿಗ, ವಾಲ್‌ ಎಂದೇ ಖ್ಯಾತಿಯಾದ ರಾಹುಲ್‌ ದ್ರಾವಿಡ್‌ (Rahul Dravid) ಅವರು ಬೆಂಗಳೂರಿನಲ್ಲಿ (Bengaluru) ಮತದಾನ ಮಾಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ರಾಹುಲ್‌ ಅವರು ಮಲ್ಲೇಶ್ವರಂ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

Exit mobile version