ST Somashekar: ಕಾಂಗ್ರೆಸ್‌ ಪರ ಸೋಮಶೇಖರ್ ಪ್ರಚಾರ;‌ ವಿನಾಶ ಕಾಲ ಎಂದ ವಿಜಯೇಂದ್ರ! - Vistara News

ಕರ್ನಾಟಕ

ST Somashekar: ಕಾಂಗ್ರೆಸ್‌ ಪರ ಸೋಮಶೇಖರ್ ಪ್ರಚಾರ;‌ ವಿನಾಶ ಕಾಲ ಎಂದ ವಿಜಯೇಂದ್ರ!

ST Somashekar: ರಾಜ್ಯಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರೀಗ ಅಧಿಕೃತವಾಗಯೇ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. ಬಿಜೆಪಿಯನ್ನೂ ತೊರೆಯದೆ, ಕಾಂಗ್ರೆಸ್‌ಅನ್ನೂ ಸೇರದೆ, ಪಕ್ಷದಲ್ಲಿದ್ದುಕೊಂಡೇ ಎದುರಾಳಿ ಪಕ್ಷದ ಪರ ಸೋಮಶೇಖರ್‌ ಅವರು ಪ್ರಚಾರ ಕೈಗೊಂಡಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.

VISTARANEWS.COM


on

ST Somashekar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಗೆಲುವು ಸಾಧಿಸಲು ಕರ್ನಾಟಕ ಬಿಜೆಪಿಯು (Karnataka BJP) ಇನ್ನಿಲ್ಲದ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಬಿಜೆಪಿಗೆ ಬಂಡಾಯದ ಬಿಸಿಯೂ ತಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ (ST Somashekar) ಅವರು ಕಾಂಗ್ರೆಸ್‌ ಅಭ್ಯರ್ಥಿಯ ಪರ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜೀವ್‌ ಗೌಡ ಅವರ ಪರವಾಗಿ ಎಸ್‌.ಟಿ.ಸೋಮಶೇಖರ್‌ ಅವರು ಬಹಿರಂಗವಾಗಿಯೇ ಪ್ರಚಾರಕ್ಕಿಳಿದಿರುವುದು ಈಗ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ವಿನಾಶ ಕಾಲೇ ವಿಪರೀತ ಬುದ್ಧಿ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಬಂಡೆ ಮಠದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಪಾಲ್ಗೊಂಡಿದ್ದಾರೆ. ಸಚಿವ ಕೃಷ್ಣ ಭೈರೇಗೌಡ, ಶಾಸಕ ಶ್ರೀನಿವಾಸ್‌ ಅವರಿದ್ದ ಸಭೆಯಲ್ಲಿ ಎಸ್‌.ಟಿ.ಸೋಮಶೇಖರ್‌ ಭಾಗಿಯಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಪರವಾಗಿ ಅವರು ಪ್ರಚಾರ ನಡೆಸಿದ್ದಾರೆ. ಅಲ್ಲದೆ, ಕಾರ್ಯಕರ್ತರ ಸಭೆಯನ್ನೂ ಕರೆದ ಸೋಮಶೇಖರ್‌, ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನೋಟಿಸ್‌ ಕೊಟ್ಟು ಸುಮ್ಮನಾದ ಬಿಜೆಪಿ

ಎಸ್‌.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ ಪರ ಹೇಳಿಕೆ ನೀಡುವುದು, ಪ್ರಚಾರ ಮಾಡುವುದು ಸೇರಿ ಹಲವು ಚಟುವಟಿಕೆಗಳಲ್ಲಿ ತೊಡಗಿದರೂ ಬಿಜೆಪಿ ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದುವರೆಗೆ ಎಸ್‌.ಟಿ.ಸೋಮಶೇಖರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿರುವುದು ಬಿಟ್ಟರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ಯಶವಂತಪುರ ಬಿಜೆಪಿ ಶಾಸಕ ಸೋಮಶೇಖರ್‌ ಅವರು ಬಹಿರಂಗವಾಗಿಯೇ ಕಾಂಗ್ರೆಸ್‌ ಪರ ಪ್ರಚಾರ ಕೈಗೊಂಡಿದ್ದು, ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸಲಿದೆ, ಕ್ರಮ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ವಿನಾಶ ಕಾಲ ಎಂದ ವಿಜಯೇಂದ್ರ

ಎಸ್‌.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಕ್ಕೆ “ವಿನಾಶ ಕಾಲೇ ವಿಪರೀತ ಬುದ್ಧಿ” ಎಂದು ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. “ರಾಜಕೀಯವಾಗಿ ಅವರು ತಪ್ಪು ನಿರ್ಧಾರ ಮಾಡಿದ್ದಾರೆ. ಇದರ ಬಗ್ಗೆ ಮುಂದೆ ನೋಡುತ್ತೀರಿ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್‌ ಶಾ ಅಂತಹವರು ಇದ್ದಾಗ ಇಂತಹ ತಪ್ಪು ನಿರ್ಧಾರ ಮಾಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024 : ಚಿಕ್ಕಬಳ್ಳಾಪುರ ಟಿಕೆಟ್‌ ಫೈಟ್‌; ಡಾ. ಸುಧಾಕರ್‌ ವಿರುದ್ಧ ವಿಶ್ವನಾಥ್‌ ಕೆಂಡಾಮಂಡಲ

ಅವರು ಬಿಜೆಪಿಯಲ್ಲಿಲ್ಲ ಎಂದ ಅಶೋಕ್

ಎಸ್‌.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್‌, “ಎಸ್‌.ಟಿ.ಸೋಮಶೇಖರ್‌ ಅವರು ಬಿಜೆಪಿಯಲ್ಲಿಲ್ಲ” ಎಂಬ ಅಚ್ಚರಿಯ ಹೇಳಿಕೆ ನೀಡಿದರು. “ಎಸ್‌.ಟಿ.ಸೋಮಶೇಖರ್‌ ಅವರು ಕಾಲು ಹೊರಗಿಟ್ಟಿದ್ದಾರೆ. ಕಾಂಗ್ರೆಸ್‌ ನಾಯಕರ ಜತೆ ಅವರು ಸಂಪರ್ಕದಲ್ಲಿದ್ದಾರೆ. ಚುನಾವಣೆ ಬಳಿಕ ಅವರ ವಿರುದ್ಧ ಬಿಜೆಪಿ ವರಿಷ್ಠರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದಷ್ಟೇ ಹೇಳಿದರು. ಅಂದಹಾಗೆ, ರಾಜ್ಯಸಭೆ ಚುನಾವಣೆಯಲ್ಲೂ ಎಸ್‌.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಮತದಾನ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest18 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest20 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest23 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest24 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌