Site icon Vistara News

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

BJP National President JP Nadda Election campaign in Surapura

ಯಾದಗಿರಿ: ದೇಶದ ರಕ್ಷಣೆಗಾಗಿ ಮೂರನೇ ಬಾರಿ ಮೋದಿ ಅವರನ್ನು ಮತ್ತೆ ಪಿಎಂ (PM) ಮಾಡಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ ನಡ್ಡಾ ಮನವಿ (Lok Sabha Election 2024) ಮಾಡಿದರು.

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಶುಕ್ರವಾರ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರ ಪರ ರೋಡ್ ಶೋ ನಡೆಸಿ, ಮತಯಾಚಿಸಿ ಅವರು ಮಾತನಾಡಿದರು.

ಈ ಚುನಾವಣೆಯು ಮಹತ್ವದ ಚುನಾವಣೆಯಾಗಿದೆ. ದೇಶವನ್ನು ಗಟ್ಟಿಗೊಳಿಸುವ ಸುಭದ್ರ ಸರ್ಕಾರಕ್ಕೆ ದೇಶದ ಜನರು ಬಿಜೆಪಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ. ಪಿಎಂ ನರೇಂದ್ರ ಮೋದಿ ಅವರು ದೇಶದಲ್ಲಿ ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ರೈತರಿಗೆ ಅನೇಕ ಯೋಜನೆ ಜಾರಿ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

ಕಾಂಗ್ರೆಸ್ ಪಕ್ಷವು ಸಮಾಜ ಒಡೆಯುವ ಕಾರ್ಯ ಮಾಡಲಿದೆ. ಆದರೆ, ಪ್ರಧಾನಿ ಮೋದಿ ಅವರು ದೇಶವನ್ನು ವಿಕಸಿತ ಮಾಡಲಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಹಾಗೂ ಸುರಪುರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದು, ರಾಜುಗೌಡ ಹಾಗೂ ರಾಜಾಅಮರೇಶ್ವರ ನಾಯಕ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು. ರಾಜಾಅಮರೇಶ್ವರ ನಾಯಕ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು.. ರಾಜುಗೌಡ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಈ ವೇಳೆ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಮಾತನಾಡಿ, ರಾಯಚೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ತಮಗೆ ಹೆಚ್ಚಿನ ಮತಗಳು ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜುಗೌಡ ಮಾತನಾಡಿ, ಪಿಎಂ ನರೇಂದ್ರ ಮೋದಿ ಅವರು ಅನೇಕ ನೀರಾವರಿ ಯೋಜನೆ ಜಾರಿಗೆ ತಂದಿದ್ದಾರೆ. ಯಾದಗಿರಿ ಜಿಲ್ಲೆಗೆ ಪಿಎಂ ಮೋದಿ ಅವರು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕಾರ್ಯ ಮಾಡಿದ್ದಾರೆ. ನನ್ನನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ತನ್ನಿ. ಗೆದ್ದು ಶಾಸಕನಾದ ನಂತರ ರೈತರ ಬೆಳೆಗಳಿಗೆ ಎರಡು ಅವಧಿಗೆ ನೀರು ಕೊಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದರು. ರೈತರು ಹಾಗೂ ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಜೀವ ಕೊಡಲು ಸಿದ್ಧನಿದ್ದೇನೆ ಎಂದರು.

ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೊಟ್ಟಮೊದಲ ಬಾರಿಗೆ ಯಾದಗಿರಿ ಜಿಲ್ಲೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸುರಪುರ ನಗರದ ವಾಲ್ಮೀಕಿ ವೃತ್ತದಿಂದ ಗಾಂಧಿ ವೃತ್ತದವರಗೆ ತೆರೆದ ವಾಹನದಲ್ಲಿ ಬಿಸಿಲ ನಡುವೆ ರೋಡ್ ಶೋ ನಡೆಸಿ, ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

ಇದನ್ನೂ ಓದಿ: Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಈ ವೇಳೆ ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಪಾಟೀಲ ಯಾಳಗಿ, ಯಲ್ಲಪ್ಪ ಕುರಕುಂದಿ, ಬಸವರಾಜ ಸ್ಥಾವರಮಠ, ಬಸನಗೌಡ ಯಡಿಯಾಪುರ, ರಾಜಾಹಣಮಪ್ಪ ನಾಯಕ ತಾತಾ, ಬಿ.ಎಂ. ಹಳ್ಳಿಕೊಟೆ, ಎಚ್.ಸಿ. ಪಾಟೀಲ, ಸುರೇಶ್ ಸಜ್ಜನ್, ಬಬ್ಲುಗೌಡ, ಸಣ್ಣದೇಸಾಯಿ ದೇವರಗೋನಾಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Exit mobile version