ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಕಾಂಗ್ರೆಸ್ ಅಭ್ಯರ್ಥಿಗಳಾದ ಗೀತಾ ಶಿವರಾಜ್ ಕುಮಾರ್, ಮೃಣಾಲ್ ಹೆಬ್ಬಾಳ್ಕರ್, ಸಂಯುಕ್ತಾ ಪಾಟೀಲ್, ಆನಂದಸ್ವಾಮಿ ಗಡ್ಡದೇವರಮಠ, ರಾಜು ಆಲಗೂರು, ಡಾ.ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗದಲ್ಲಿ ಅದ್ಧೂರಿ ರೋಡ್ ಶೋ ಮೂಲಕ ದೊಡ್ಮನೆ ಸೊಸೆ ನಾಮಪತ್ರ ಸಲ್ಲಿಕೆ
ಶಿವಮೊಗ್ಗ: ನಗರದಲ್ಲಿ ಅದ್ಧೂರಿ ರೋಡ್ ಶೋ ನಡೆಸುವ ಮೂಲಕ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಗುರುದತ್ ಹೆಗ್ಡೆ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ಅವರಿಗೆ ಪತಿ ಶಿವರಾಜ್ ಕುಮಾರ್, ಸಚಿವ, ಸಹೋದರ ಮಧು ಬಂಗಾರಪ್ಪ ಸಾಥ್ ನೀಡಿದರು. ಈ ವೇಳೆ ಬೇಳೂರು ಗೋಪಾಲಕೃಷ್ಣ, ಆಯನೂರು ಮಂಜುನಾಥ್, ಗೋಪಾಲ್ ಪೂಜಾರಿ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಆರಂಭವಾದ ಮೆರವಣಿಗೆ ಗಾಂಧಿ ಬಜಾರ್, ನೆಹರು ರಸ್ತೆ, ಬಾಲರಾಜ್ ರಸ್ತೆ ಮೂಲಕ ಸಾಗಿತು. ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.
ಬೆಳಗಾವಿಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ
ಬೆಳಗಾವಿ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ನಿತೇಶ್ ಪಾಟೀಲ್‌ಗೆ ಅವರು ನಾಮಪತ್ರ ಸಲ್ಲಿಸಿದ್ದು, ಮೃಣಾಲ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬಾಗಣ್ಣ ನರೋಟಿ ಸಾಥ್ ನೀಡಿದರು.
ಬಾಗಲಕೋಟೆಯಲ್ಲಿ ಸಂಯುಕ್ತ ಪಾಟೀಲ್ ಸಾಂಕೇತಿಕ ನಾಮಪತ್ರ ಸಲ್ಲಿಕೆ
ಬಾಗಲಕೋಟೆ ಲೋಕಸಭಾ ಕ್ಷೇತ್ರಲ್ಲಿ ಕೈ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನವನಗರದ ಜಿಲ್ಲಾಡಳಿತ ಭವನದ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ. ಮೇಟಿ, ಕೆಪಿಸಿಸಿ ಉಪಾಧ್ಯಕ್ಷ ಅಜಯ ಕುಮಾರ್ ಸರನಾಯಕ್, ಜಿಲ್ಲಾಧ್ಯಕ್ಷ ನಂಜಯ್ಯನಮಠ್ ಇದ್ದರು.
ದಾವಣಗೆರೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಿನೇಷನ್
ದಾವಣಗೆರೆ: ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಎರಡನೇ ಬಾರಿ ಸಾಂಕೇತಿಕವಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 18ರಂದು ಮೂರನೇ ಬಾರಿ ಡಿಕೆಶಿ ಸಿದ್ದರಾಮಯ್ಯ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ. ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಪತಿ ಎಸ್.ಎಸ್. ಮಲ್ಲಿಕಾರ್ಜುನ್ ಸಾಥ್ ನೀಡಿದರು.
ಹಾವೇರಿಯಲ್ಲಿ ಆನಂದಸ್ವಾಮಿ ಗಡ್ಡದೇವರಮಠ ನಾಮಪತ್ರ ಸಲ್ಲಿಕೆ
ಹಾವೇರಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸಾಂಕೇತಿಕವಾಗಿ ಸೋಮವಾರ ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಏಪ್ರಿಲ್ 17 ರಂದು ಮತ್ತೊಮ್ಮೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕುಟುಂಬದ ಜೊತೆಗೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಆನಂದಸ್ವಾಮಿ ಗಡ್ಡದೇವರಮಠ ಸಲ್ಲಿಸಿದ್ದಾರೆ.
ಇದನ್ನೂ ಓದಿ | Lok Sabha Election 2024: ಪ್ರಲ್ಹಾದ್ ಜೋಶಿ, ಬೊಮ್ಮಾಯಿ, ಜೊಲ್ಲೆ ಸೇರಿ ಐವರು ಬಿಜೆಪಿ ನಾಯಕರಿಂದ ನಾಮಪತ್ರ ಸಲ್ಲಿಕೆ
ವಿಜಯಪುರದಲ್ಲಿ ರಾಜು ಆಲಗೂರು ನಾಮಪತ್ರ ಸಲ್ಲಿಕೆ
ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ವಿಜಯಪುರದಲ್ಲಿ ಭರ್ಜರಿ ರೋಡ್ ಶೋ ಮೂಲ ತೆರಳಿ ಅವರು, ನಾಮಪತ್ರ ಸಲ್ಲಿಸಿದರು. ಸಚಿವ ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್ ಸೇರಿ ಹಲವು ಕೈ ಶಾಸಕರು ಸಾಥ್ ನೀಡಿದರು.