ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹಣದ ಹರಿವು ಹೆಚ್ಚಳವಾಗಿರುತ್ತದೆ. ಕೆಲವು ಕಡೆ ಅಕ್ರಮಗಳು ನಡೆಯುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಲ್ಲಿ ಬೆಂಗಳೂರಿನ ಹದಿನಾರು ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.
ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.
2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?
1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)
ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.