Site icon Vistara News

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Lok Sabha Election 2024

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ (Lok Sabha Election 2024) ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory order) ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.

ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

Exit mobile version