Site icon Vistara News

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Minister Santosh Lad latest statement in Dharwad

ಧಾರವಾಡ: ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಾದ ಕಳಸಾ-ಬಂಡೂರಿ (Kalasa-Banduri) ಮತ್ತು ಮಹಾದಾಯಿ (Mahadayi) ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ತಮ್ಮ ಚುನಾವಣಾ (Lok Sabha Election 2024) ಪ್ರಚಾರಕ್ಕೆ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕನಾಥ ಶಿಂಧೆ ಅವರನ್ನು ತಮ್ಮ ಪರ ಪ್ರಚಾರ ಮಾಡಲು ಪ್ರಲ್ಹಾದ್‌ ಜೋಶಿ ಕರೆಸಿದ್ದಾರೆ. ಅವರು ಜೋಶಿ ಪರವಾಗಿ ಮತ ಕೇಳುತ್ತಿದ್ದಾರೆ. ಶಿಂಧೆ ಅವರನ್ನು ಕರೆಸಿದ್ದರ ಬಗ್ಗೆ ಜನರೇ ಪ್ರಶ್ನೆ ಮಾಡಬೇಕು. ಕನ್ನಡ ನಾಡಿನ ಯೋಜನೆಗೆ ಅಡ್ಡಗಾಲು ಹಾಕುವ ಶಿಂಧೆ ಕರೆಸಿ, ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ಅವರು ದೂರಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಹಿಂದೆ ರಾಜ್ಯದಲ್ಲೂ ಬಿಜೆಪಿ ಸರ್ಕಾರವಿತ್ತು. ಆದರೂ ಕಳಸಾ ಬಂಡೂರಿ ಮತ್ತು ಮಹಾದಾಯಿ ಯೋಜನೆಗಳನ್ನು ಏಕೆ ಜೋಶಿ ಅವರು ಸಾಕಾರ ಮಾಡಲಿಲ್ಲ. ಇದನ್ನು ಬಿಟ್ಟು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ದೂರುತ್ತಾರೆ. ಜೋಶಿ ಅವರು ಈ ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Exit mobile version