Site icon Vistara News

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

MLA G Janardan Reddy latest statement in Gangavathi

ಗಂಗಾವತಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಬಾಂಬ್ ಅವರು ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಭಾಷಣದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗಂಗಾವತಿ ನಗರದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ನನ್ನೊಂದಿಗೆ (ರೆಡ್ಡಿ) ಹೊಂದಾಣಿಕೆ ಮಾಡಿಕೊಂಡು ತನ್ನ ಸೋಲಿಗೆ ಕಾರಣರಾದರು ಎಂದು ಇಕ್ಬಾಲ್ ಅನ್ಸಾರಿ ಪದೇ ಪದೆ ಪ್ರಸ್ತಾಪಿಸುತ್ತಾರೆ. ಆದರೆ, ಅಸಲಿಗೆ ವಾಸ್ತವವೇ ಬೇರೆ ಇದೆ. ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ವಿಶ್ವಾಸ ಸ್ವತಃ ಕಾಂಗ್ರೆಸ್ ಪಕ್ಷಕ್ಕೂ ಇರಲಿಲ್ಲ. ಹೀಗಾಗಿ ಸ್ವತಃ ಸಿದ್ದರಾಮಯ್ಯ ನನ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ರೆಡ್ಡಿಯ ಕೆಆರ್‌ಪಿಪಿ ಎಲ್ಲಾದರೂ ಒಂದು ಹತ್ತು ಕ್ಷೇತ್ರದಲ್ಲಿ ಗೆದ್ದುಬಿಟ್ಟರೆ ಸರ್ಕಾರ ರಚನೆಯ ಸಂದರ್ಭದಲ್ಲಿ ಅವಸರಕ್ಕೆ ಇರಲಿ ಎಂಬ ಕಾರಣಕ್ಕೆ ಸ್ವತಃ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಮತ್ತು ನನ್ನ ಮಧ್ಯೆ ಒಳ ಒಪ್ಪಂದವಾಗಿತ್ತು. ಇದನ್ನು ಅರಿಯದ ಇಕ್ಬಾಲ್ ಅನ್ಸಾರಿ, ಸ್ಥಳೀಯ ಕಾಂಗ್ರೆಸ್ ನಾಯಕರು ರೆಡ್ಡಿಯೊಂದಿಗೆ ಬುಕ್ ಆಗಿದ್ದಾರೆ ಎಂದು ಭಾವಿಸಿ ಚುನಾವಣೆ ಮುಗಿದ ಬಳಿಕ ತಮ್ಮ ಮನೆ ಬಾಗಿಲು ಹಾಕಿದರು. ಎರಡು ದಿನಗಳ ಬಳಿಕ ಓಪನ್ ಮಾಡಿದ್ದರು ಎಂದು ರೆಡ್ಡಿ ಹೇಳಿದರು.

ಸಿದ್ದರಾಮಯ್ಯ ಮತ್ತು ನನ್ನ ನಡುವೆ ನಡೆದ ಒಳ ಒಪ್ಪಂದದಿಂದಾಗಿಯೇ ಸಿದ್ದರಾಮಯ್ಯ ಅಪ್ಪಿತಪ್ಪಿಯೂ ಗಂಗಾವತಿಗೆ ಪ್ರಚಾರಕ್ಕೆ ಬರಲಿಲ್ಲ. ಅಷ್ಟೆ ಅಲ್ಲ, ನನ್ನ ಪತ್ನಿ ಪ್ರತಿನಿಧಿಸಿದ್ದ ಬಳ್ಳಾರಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಈ ಬಗ್ಗೆ ಬೇಕಿದ್ದರೆ ಒಮ್ಮೆ ಪರಿಶೀಲಿಸಬಹುದು ಎಂದು ರೆಡ್ಡಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

ಈ ಹಿಂದೆ ಬೆಂಗಳೂರಿನಿಂದ ಬಳ್ಳಾರಿವರೆಗೂ ನಡೆಸಿದ ಪಾದಯಾತ್ರೆ, ರಾಜಕೀಯ ಸೇರಿದಂತೆ ಎಲ್ಲವನ್ನೂ ಮರೆತು ಬಿಡುವಂತೆ ಸಿದ್ದರಾಮಯ್ಯ ಕೇಳಿದ್ದರು. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನನ್ನ ಬಗ್ಗೆ ಟೀಕೆ ಮಾಡಿಲ್ಲ. ಗಂಗಾವತಿಯಲ್ಲೂ ಮಾಡಿಲ್ಲ. ಆದರೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಕಣ್ಣೊರೆಸಬೇಕೆಂಬ ಕಾರಣಕ್ಕೆ ಲೋಕಸಭಾ ಚುನಾವಣೆ ಅಂಗವಾಗಿ ನಡೆದ ಸಮಾವೇಶದಲ್ಲಿ ಕಾಟಾಚಾರಕ್ಕಾಗಿ ಸಿದ್ದರಾಮಯ್ಯ ನನ್ನ ಮೇಲೆ ಟೀಕೆ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

Exit mobile version