Modi In Karnataka: ರಾಜ್ಯದಲ್ಲಿ ನಾಳೆ ಮೋದಿ ಹವಾ; ಮಂಗಳೂರು ರೋಡ್‌ ಶೋ ಸಮಯ ಬದಲು! - Vistara News

ಕರ್ನಾಟಕ

Modi In Karnataka: ರಾಜ್ಯದಲ್ಲಿ ನಾಳೆ ಮೋದಿ ಹವಾ; ಮಂಗಳೂರು ರೋಡ್‌ ಶೋ ಸಮಯ ಬದಲು!

Modi In Karnataka: Modi In Karnataka: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವನ್ನು ಇನ್ನಷ್ಟು ಹೆಚ್ಚಿಸಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಬಳಿಕ ಮಂಗಳೂರಿನಲ್ಲಿ ರೋಡ್‌ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಜನರಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಸುವ ಜತೆಗೆ ಕಾರ್ಯಕರ್ತರು ಹಾಗೂ ನಾಯಕರ ಉತ್ಸಾಹವನ್ನು ಹೆಚ್ಚಿಸುವುದು ಕೂಡ ಮೋದಿ ಭೇಟಿಯ ಪ್ರಮುಖ ಅಜೆಂಡಾ ಆಗಿದೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಳೆದ ತಿಂಗಳು ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್‌ 14) ಕರ್ನಾಟಕಕ್ಕೆ (Modi In Karnataka) ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೋದಿ, ಸಂಜೆ ಮಂಗಳೂರಿನಲ್ಲಿ ರೋಡ್‌ ಶೋ ಮೂಲಕ ಭರ್ಜರಿಯಾಗಿ ಪ್ರಚಾರ ನಡೆಸಲಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಕೈಗೊಳ್ಳುವ ರೋಡ್‌ ಶೋ ಸಮಯ ಬದಲಾಗಿದೆ. ಸಂಜೆ 7 ಗಂಟೆಯ ಬದಲಿಗೆ, 7.45 ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಸಿದ್ದರಾಮಯ್ಯಗೆ ಟಕ್ಕರ್‌

ಮೈಸೂರು ಹಾಗೂ ಚಾಮರಾಜ ನಗರ ಲೋಕಸಭೆ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಟಕ್ಕರ್‌ ಕೊಡಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ 4.20ಕ್ಕೆ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಸಮಾವೇಶ ಆಯೋಜಿಸಲಿದ್ದು, ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ.

Lok Sabha Election 2024 PM Narendra Modi to visit Mangaluru on April 14

ನಾಲ್ಕೂ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಅವರು ಮತಯಾಚನೆ ಮಾಡಲಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅವರನ್ನು ಹುರಿದುಂಬಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಕರೆಸುವ ದಿಸೆಯಲ್ಲಿ ದೋಸ್ತಿಗಳು (ಬಿಜೆಪಿ ಹಾಗೂ ಜೆಡಿಎಸ್)‌ ಪ್ಲಾನ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಮಾವೇಶದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ರೋಡ್‌ ಶೋ

ಕರಾವಳಿಯಲ್ಲೂ ಭಾನುವಾರ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸಂಜೆ 7.45ಕ್ಕೆ ಸುಮಾರು ಒಂದೂವರೆ ಕಿಲೋಮೀಟರ್‌ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 7.30ಕ್ಕೆ ಮೋದಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅವರು ನಾರಾಯಣ ಗುರು ಸರ್ಕಲ್‌ಗೆ ಆಗಮಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ನಾರಾಯಣ ಗುರು ಸರ್ಕಲ್‌ನಿಂದ ನವಭಾರತ್‌ ಸರ್ಕಲ್‌ವರೆಗೆ ಮೋದಿ ಅವರು ರೋಡ್‌ ಶೋ ಕೈಗೊಳ್ಳಲಿದ್ದಾರೆ. ಇಲ್ಲೂ ಲಕ್ಷಾಂತರ ಜನ ಪ್ರಧಾನಿಯನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರಾವಳಿಯಲ್ಲಿ ಈಗಾಗಲೇ ಬಿಜೆಪಿ ಪರ ಅಲೆ ಇದ್ದು, ಇದನ್ನು ಇಮ್ಮಡಿಗೊಳಿಸುವುದು ಮೋದಿ ಅವರ ರೋಡ್‌ ಶೋ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

Gangster Ravi Pujari: ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತನನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿಸಲಾಗಿತ್ತು.

VISTARANEWS.COM


on

Gangster Ravi Pujari
Koo

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Gangster Ravi Pujari) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ಆತನನ್ನು ಸೋಮವಾರ ದಾಖಲಿಸಲಾಗಿದೆ.

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಇಂಟರ್‌ಪೋಲ್‌ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ರಾಜ್ಯಕ್ಕೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಹಲವರು ಸೆರೆಯಾಗಿದ್ದು, ಇದೀಗ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಸರೆಂಡರ್ ಆಗಿದ್ದಾರೆ.

ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದಾರೆ. ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

ಪವಿತ್ರಗೌಡ ನೋಡಲು ಬಂದ ಸಂಬಂಧಿಕರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಭೇಟಿಗೆ ಆಕೆಯ ಸಹೋದರಿ ಹಾಗೂ ಸಂಬಂಧಿ ಬಂದಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಕೊಲೆ ಆರೋಪಿ ಪವಿತ್ರಗೌಡ ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ಪ್ರಯತ್ನಿಸಿದರು. ಆದರೆ ಬಂದ ದಾರಿಗೆ ಸುಂಕ ಎಲ್ಲ ಎಂಬಂತೆ ಬರಿಗೈಯ್ಯಲ್ಲಿ ಹೋದರು. ಈ ಮೊದಲು ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳಿಸಲಾಗಿತ್ತು. ಈಗ ಠಾಣೆಗೆ ಬಂದು ಮನವಿ ಮಾಡಿಕೊಂಡರು ಪವಿತ್ರಗೌಡ ಭೇಟಿಗೆ ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

BS Yediyurappa: ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗಲಾಗುವುದು ಎಂದು ತಿಳಿಸಿದರೂ ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರಂಟ್‌ ತರುವ ದರ್ದು ಏನಿತ್ತು ಎಂಬುದಾಗಿ ಸಿಐಡಿ ಪರ ವಾದ ಮಂಡಿಸಿದ ಎಜಿ ಶಶಿಕಿರಣ್‌ ಶೆಟ್ಟಿ ಅವರಿಗೆ ಕೋರ್ಟ್‌ ಚಾಟಿ ಬೀಸಿತು. ಹಾಗೆಯೇ, ಮಾಜಿ ಸಿಎಂಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು ಎಂದು ಕೂಡ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಕಳವಳ ವ್ಯಕ್ತಪಡಿಸಿತು.

VISTARANEWS.COM


on

BS Yediyurappa
Koo

ಬೆಂಗಳೂರು: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಬಿಗ್‌ ರಿಲೀಫ್‌ ನೀಡಿದೆ. ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರ ಮಧ್ಯೆಯೇ, ವಿಚಾರಣೆ ವೇಳೆ ನ್ಯಾಯಾಲಯವು ಕರ್ನಾಟಕ ಸರ್ಕಾರಕ್ಕೆ ಚಾಟಿ ಬೀಸಿದೆ. “ಒಬ್ಬ ಮಾಜಿ ಮುಖ್ಯಮಂತ್ರಿಯನ್ನೇ ಈ ರೀತಿ ನಡೆಸಿಕೊಂಡರೆ, ಸಾಮಾನ್ಯ ಜನರ ಪಾಡೇನು” ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಅಡ್ವೊಕೇಟ್‌ ಜನರಲ್‌ (AG) ಶಶಿಕಿರಣ್‌ ಶೆಟ್ಟಿ ಅವರು ಸಿಐಡಿ ಪರ ವಾದ ಮಂಡಿಸಿದರು. “ಜೂನ್‌ 11ರಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಜೂನ್‌ 12ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ ನೀಡಿದ್ದಾರೆ. ಹೀಗಿದ್ದರೂ, ಯಡಿಯೂರಪ್ಪ ಅವರು ಸಂಜೆಗೆ ವಿಮಾನದ ಟಿಕೆಟ್‌ ಬುಕ್‌ ಮಾಡಿಕೊಂಡು ದೆಹಲಿಗೆ ತೆರಳಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ ನ್ಯಾಯಾಲಯವು, “ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 12ರ ಬದಲು, ಜೂನ್‌ 17ರಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಿದ್ದರೂ, ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರೆಂಟ್‌ ತರುವ ಅವಶ್ಯಕತೆ ಏನಿತ್ತು? ಅವರು ಒಬ್ಬ ಮಾಜಿ ಮುಖ್ಯಮಂತ್ರಿ. ಅವರೇನೂ ದೇಶ ಬಿಟ್ಟು ಓಡಿ ಹೋಗುತ್ತಿದ್ದರೇ? ನಾಲ್ಕೈದು ದಿನ ತಡವಾಗಿ ವಿಚಾರಣೆಗೆ ಹಾಜರಾದರೆ ಆಕಾಶವೇ ಕಳಚಿ ಬೀಳುತ್ತಿತ್ತೇ? ಒಬ್ಬ ಮಾಜಿ ಮುಖ್ಯಮಂತ್ರಿಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು” ಎಂದು ಚಾಟಿ ಬೀಸಿತು.

ಬಳಿಕ, ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾ.ಕೃಷ್ಣ ದೀಕ್ಷಿತ್‌ ಅವರು ಆದೇಶ ಹೊರಡಿಸಿದರು. ಹಾಗೆಯೇ, ಜೂನ್‌ 17ರಂದು ತನಿಖಾಧಿಕಾರಿ ಎದುರು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಎರಡು ವಾರ ಮುಂದೂಡಿದರು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

Continue Reading

ಮಳೆ

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Karnataka Rain: ಕಲಬುರಗಿ, ಆಳಂದ, ಚಿತ್ತಾಪುರ, ಶಹಾಬಾದ್, ವಾಡಿ ಸೇರಿ ಹಲವು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ಕಟ್ಟಕಡೆಯ ಗ್ರಾಮ ತರ್ಕಸ್ ಪೇಟೆ ತತ್ತರಿಸಿ ಹೋಗಿದೆ. ಗುರುವಾರ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

VISTARANEWS.COM


on

Due to heavy rain water entered the houses of Tharkas Pet village of Chittapur taluk
Koo

ಕಲಬುರಗಿ: ಕಲಬುರಗಿ, ಆಳಂದ, ಚಿತ್ತಾಪುರ, ಶಹಾಬಾದ್, ವಾಡಿ ಸೇರಿದಂತೆ ಹಲವು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಗೆ (Karnataka Rain) ಚಿತ್ತಾಪುರ ತಾಲೂಕಿನ ಕಟ್ಟಕಡೆಯ ಗ್ರಾಮ ತರ್ಕಸ್ ಪೇಟೆ ತತ್ತರಿಸಿ ಹೋಗಿದೆ. ಗುರುವಾರ ಸುರಿದ ಧಾರಾಕಾರ ಮಳೆಯಿಂದ (Rain Effect) ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

ಸತತ ಮೂರು ತಾಸು ಸುರಿದ ಮಳೆಯಿಂದ ಗ್ರಾಮದ ಹಲವು ಮನೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮನೆಯ ಪಾತ್ರೆಗಳು ನೀರಲ್ಲಿ ತೇಲಾಡಿದರೆ, ಶೇಖರಿಸಿಟ್ಟ ಜೋಳ ಮತ್ತು ಬೇಳೆಕಾಳುಗಳು ನೀರು ಪಾಲಾಗಿ, ಬಡ ಕುಟುಂಬಗಳು ತೀವ್ರ ನಷ್ಟ ಅನುಭವಿಸುವಂತಾಗಿದೆ. ಮನೆಗೆ ನುಗ್ಗಿದ ಮಳೆ ನೀರನ್ನು ಹೊರ ಚೆಲ್ಲುವಲ್ಲಿ ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ನಾಲವಾರ ವಲಯದ ಕೊಲ್ಲೂರು, ರಾಂಪುರಹಳ್ಳಿ, ಶಾಂಪುರಹಳ್ಳಿ ಸೇರಿದಂತೆ ತರ್ಕಸ್ ಪೇಟೆ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಹತ್ತು ದಿನಗಳಿಂದ ನಾಲವಾರ ವಲಯದಲ್ಲಿ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮಹಾರಾಷ್ಟ್ರದಲ್ಲಿ ಮಳೆ ಆಗುತ್ತಿರುವುದರಿಂದ ಭೀಮಾನದಿಗೆ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆ ಇದೆ. ಆದ್ದರಿಂದ ಜನ-ಜಾನುವಾರುಗಳ ಸುರಕ್ಷತೆ ಅತ್ಯವಶ್ಯಕವಾಗಿದೆ. ನದಿ ತೀರದ ಜನರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ರೈತರು ತಮ್ಮ ಜಾನುವಾರುಗಳನ್ನು ನದಿ ತೀರಕ್ಕೆ ತರಬಾರದು. ಗುಡುಗು ಸಿಡಿಲು ಮಿಂಚು ಆರ್ಭಟಿಸುವ ಸಮಯದಲ್ಲಿ ಜಾನುವಾರುಗಳನ್ನು ಮರದ ಕೆಳಗೆ ಕಟ್ಟಬಾರದು. ಮಳೆಗಾಲದ ಸಂದರ್ಭದಲ್ಲಿ ಜಾನುವಾರುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪಶುಪಾಲನಾ ಇಲಾಖೆಯ ಚಿತ್ತಾಪುರ ತಾಲೂಕು ಸಹಾಯಕ ನಿರ್ದೇಶಕ ಶಂಕರ್ ಕಣ್ಣಿ ತಿಳಿಸಿದ್ದಾರೆ.

Continue Reading
Advertisement
Star Saree Fashion
ಫ್ಯಾಷನ್14 mins ago

Star Saree Fashion: ರೇಷ್ಮೆ ಸೀರೆಯಲ್ಲಿ ನಟಿ ಕೀರ್ತಿ ಸುರೇಶ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಬೇಕೆ? 5 ಟಿಪ್ಸ್ ಫಾಲೋ ಮಾಡಿ!

Sonakshi Sinha
Latest17 mins ago

Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಐಷಾರಾಮಿ ಅಪಾರ್ಟ್‌ಮೆಂಟ್ ಹೇಗಿದೆ? ವಿಡಿಯೊ ನೋಡಿ!

Karnataka Weather Forecast
ಮಳೆ22 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Gangster Ravi Pujari
ಕರ್ನಾಟಕ25 mins ago

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

BS Yediyurappa
ಕರ್ನಾಟಕ29 mins ago

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

Allergic Asthma
ಆರೋಗ್ಯ37 mins ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Due to heavy rain water entered the houses of Tharkas Pet village of Chittapur taluk
ಮಳೆ1 hour ago

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Pawan Kalyan
Latest1 hour ago

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Ram Mandir
ದೇಶ1 hour ago

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Celebrity Ethnic Fashion
ಫ್ಯಾಷನ್1 hour ago

Celebrity Ethnic Fashion: ನಟ ಧನುಷ್‌ ಗೌಡರ ಗ್ರ್ಯಾಂಡ್‌ ಎಥ್ನಿಕ್‌ ಜಾಕೆಟ್‌ ವಿಶೇಷತೆ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ22 mins ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌