Lok Sabha Election 2024: ಮಹಾರಾಷ್ಟ್ರದಿಂದ ನೀರು ಕೊಡಿ ಪ್ಲೀಸ್;‌ ಪ್ರಚಾರ ಕೈಬಿಟ್ಟು ಫಡ್ನವೀಸ್‌ ಭೇಟಿ ಮಾಡಿದ ಜೊಲ್ಲೆ! - Vistara News

ಕರ್ನಾಟಕ

Lok Sabha Election 2024: ಮಹಾರಾಷ್ಟ್ರದಿಂದ ನೀರು ಕೊಡಿ ಪ್ಲೀಸ್;‌ ಪ್ರಚಾರ ಕೈಬಿಟ್ಟು ಫಡ್ನವೀಸ್‌ ಭೇಟಿ ಮಾಡಿದ ಜೊಲ್ಲೆ!

ಕರ್ನಾಟಕದ ಗಡಿ ಭಾಗದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವ ಹಿನ್ನೆಲೆ ಕೃಷ್ಣಾ ನದಿಗೆ ನೀರು ಹರಿಸುವಂತೆ ಅಣ್ಣಾಸಾಹೇಬ್ ಜೊಲ್ಲೆ ನೇತೃತ್ವದ ನಿಯೋಗ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ.

VISTARANEWS.COM


on

Lok Sabha Electiin 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಿಕ್ಕೋಡಿ: ಲೋಕಸಭೆ ಚುನಾವಣಾ ಪ್ರಚಾರದ ಭರಾಟೆ ನಡುವೆ ಶನಿವಾರ ಮುಂಬೈಗೆ ತೆರಳಿರುವ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು, ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಅಣ್ಣಾಸಾಹೇಬ್ ಜೊಲ್ಲೆ ನೇತೃತ್ವದ ನಿಯೋಗ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಅಣ್ಣಾಸಾಹೇಬ್ ಜೊಲ್ಲೆಗೆ ಶಾಸಕಿ‌ ಶಶಿಕಲಾ‌ ಜೊಲ್ಲೆ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಹುಕ್ಕೇರಿ ಶಾಸಕ ನಿಖಿಲ್‌ ಉಮೇಶ ಕತ್ತಿ, ಮಾಜಿ ಸಚಿವ ಶ್ರೀಮಂತ ಪಾಟೀಲ್ ಸಾಥ್ ನೀಡಿದ್ದಾರೆ. ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿಯೋಗ ಮನವಿ ಮಾಡಿದೆ.

ಇದನ್ನೂ ಓದಿ | BJP’s 8th List Of Candidates : ಲೋಕ ಸಭಾ ಚುನಾವಣೆಗೆ ಬಿಜೆಪಿಯ 8ನೇ ಪಟ್ಟಿ ಬಿಡುಗಡೆ

ಕೃಷ್ಣಾ ಮತ್ತು ದೂಧಗಂಗಾ ನದಿ ನೀರು ನಂಬಿಕೊಂಡಿರುವ ಗಡಿ ಭಾಗದ ರೈತರ ಸಂಕಷ್ಟ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಸಾಗಿದೆ. ಕುಡಿಯುವ ನೀರಿಗಾಗಿ ಪ್ರತಿವರ್ಷ ಬೇಸಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರವನ್ನು ಬೇಡುವ ಪರಿಸ್ಥಿತಿ ಇದೆ. ಅದೇ ರೀತಿ ಇತ್ತೀಚೆಗೆ ಕೃಷ್ಣಾ ನದಿ ಬರಿದಾಗಿ ಮೀನುಗಳ ಮಾರಣ ಹೋಮವಾಗಿತ್ತು. ಹೀಗಾಗಿ ಜೊಲ್ಲೆ ಅವರು ಪ್ರಚಾರಕ್ಕೆ ಬ್ರೇಕ್ ಹಾಕಿ ಮುಂಬೈಗೆ ಹೋಗಿ ಕೃಷ್ಣಾನದಿಗೆ ನೀರು ಬಿಡುವಂತೆ ಕೋರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಮೂಕಾಂಬಿಕೆಯ ದರ್ಶನ ಪಡೆಯಲಿರುವ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Continue Reading

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

VISTARANEWS.COM


on

ಆರೆಂಜ್ ಅಲರ್ಟ್‌

ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಘುದಿಂದ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನದಿಗಳು, ಹಳ್ಳ-ಕೊಳ್ಳಗಳು ತುಂಬುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜೂನ್ 15ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಇಲಾಖೆ ನೀಡುವ ಎಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Also Read: ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ನೀಟ್ 2026 ಪರೀಕ್ಷೆ
Latest5 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest7 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest2 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌