Site icon Vistara News

Lok Sabha Election 2024: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Minister Lakshmi hebbalkar spoke in Prajadhwani 02 Lok Sabha election campaign programme at Gokak

ಗೋಕಾಕ್: ಹಿಂದುಳಿದ ಸಮುದಾಯದ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್ ಪಕ್ಷ (Congress Party) 2ನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಪೂರ್ಣ ಬಹುಮತದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೆಡವಲು ಅಷ್ಟು ಸುಲಭ ಅಲ್ಲ. ಗೋಕಾಕ್ ಶಾಸಕರೇ, ಪದೇ ಪದೇ ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳಿಸುವುದಾಗಿ ಹೇಳುತ್ತಿದ್ದೀರಿ, ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lok Sabha Election 2024) ಪ್ರಶ್ನಿಸಿದರು.

ಗೋಕಾಕ್‌ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸರ್ಕಾರವನ್ನು ಕೆಡವಲು ಮುಂದಾದರೆ ಇಡೀ‌ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ಎಂದರೆ ಬದ್ದತೆ, ಎಲ್ಲಾ ಧರ್ಮ, ಜಾತಿ ಸಮುದಾಯದವರಿಗೆ ಮಣೆ ಹಾಕಿದೆ. ಭಾರತದ ಸಂಸ್ಕೃತಿಯನ್ನು ಉಳಿಸುತ್ತಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಎಲ್ಲಾ ವರ್ಗದವರಿಗೂ ಅಧಿಕಾರ ನೀಡುವ ಪಕ್ಷ ಎಂದು ಹೇಳಿದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಐದು ಗ್ಯಾರಂಟಿಗಳನ್ನು ಬಡವರ ಮನೆಗೆ ತಲುಪಿಸುತ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ದೇವರಾಜ ಅರಸು ಬಳಿಕ ಅತಿಹೆಚ್ಚು ಬಡವರ ಪರ ಕೆಲಸ ಮಾಡಿದವರು ನಮ್ಮ ಸಿಎಂ ಸಿದ್ದರಾಮಯ್ಯನವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇಡೀ‌ ದೇಶದ ಇತಿಹಾಸದಲ್ಲಿ ಕುರುಬ ಸಮುದಾಯದ‌ ವ್ಯಕ್ತಿಯನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದು ಕಾಂಗ್ರೆಸ್ ಪಕ್ಷ. ಅದರೆ, ಇದ್ದ ಒಬ್ಬ ಕುರುಬ ಸಮಾಜದ ನಾಯಕನನ್ನು ಬಿಜೆಪಿಯಿಂದ ಹೊರಹಾಕಲಾಗಿದೆ ಎಂದು ಟೀಕಿಸಿದರು.

ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬೆಳಗಾವಿ ಬಗ್ಗೆ ತಾತ್ಸರ ಮನೋಭಾವ ಹೊಂದಿರುವ ವ್ಯಕ್ತಿ. ಜಿಲ್ಲೆಯ ಜನರ ಕಷ್ಟ ಕಾಲದಲ್ಲಿ ಬರದ ಮೋದಿ ಚುನಾವಣೆ ವೇಳೆ ಮತ ಕೇಳಲು ಬರುತ್ತಾರೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯೇ ಎಂದು ಸಚಿವೆ‌ ಪ್ರಶ್ನಿಸಿದರು.‌

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕಾಂಗ್ರೆಸ್ ಅಭ್ಯರ್ಥಿ ಎಂಜಿನಿಯರಿಂಗ್ ಪದವೀಧರ, ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ. ತಾಯಿಯಾಗಿ ಮಗನ ಪರ ಸೆರಗೊಡ್ಡಿ ಮತಕೇಳುವೆ ಎಂದರು.

ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಮೀಸಲಾತಿಗೆ ಕಂಟಕ. ಒಂದು ಅವಕಾಶವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬಂದಿದ್ದಾರೆ. ಹುಬ್ಬಳ್ಳಿ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ, ನಾವೇಗೆ ಅವರನ್ನು ಪುರಸ್ಕರಿಸೋದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಡಾ. ಎಂ.ಸಿ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ, ಶಾಸಕರಾದ ಬಿ.ಕೆ.ಸಂಗಮೇಶ್, ಪುಟ್ಟ ರಂಗಶೆಟ್ಟಿ, ರಾಜು ಸೇಠ್, ನಯನಾ ಮೋಟಮ್ಮ, ಕೇರಳ ಶಾಸಕ ರೋಜಿ ಜಾನ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಭೋವಿ ನಿಗಮದ ಅಧ್ಯಕ್ಷ ಪ್ರವೀಣ್ ಕುಮಾರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಡಾ.ಮಹಾಂತೇಶ್ ಕಡಾಡಿ, ಮೋಹನ್ ಲಿಂಬಿಕಾಯಿ, ಅಶೋಕ್ ಪೂಜಾರಿ, ಸಿದ್ದಲಿಂಗ ದಳವಾಯಿ, ಅರವಿಂದ ದಳವಾಯಿ, ಚಂದ್ರಶೇಖರ್ ಕೊಣ್ಣೂರ, ಲಕ್ಕಣ್ಣ ಸವಸುದ್ದಿ, ಪ್ರೇಮಾ ಚಿಕ್ಕೋಡಿ, ಬಸವನಗೌಡ ಹೊಳಿಯಾಚೆ, ಪ್ರಕಾಶ್ ಢಾಗೆ, ಜಾರಿಕ್ ನದಾಫ್, ಗಂಗಾಧರ ಬಡಕುಂದ್ರಿ, ಭೀಮಪ್ಪ ಹಂದಿಗುಂದ್, ರಮೇಶ್ ಉಟಗಿ, ಸುರೇಶ್ ಅರಳಿ, ಲಗಮಣ್ಣ ಕಳಸನ್ನವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version