Site icon Vistara News

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Prime Minister Narendra Modi wrote a letter to former CM Basavaraj Bommai

ನವ ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪತ್ರ ಬರೆದು, ಚುನಾವಣೆಯಲ್ಲಿ (Lok Sabha Election 2024) ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಇದು ಸಾಮಾನ್ಯ ಚುನಾವಣೆಯಲ್ಲ ಇದು ದೇಶದ ಪ್ರತಿಯೊಂದು ಕುಟುಂಬದ ವಿಶೇಷವಾಗಿ ಹಿರಿಯ ನಾಗರಿಕರು ಕಳೆದು ಐದಾರು ದಶಕದಲ್ಲಿ ಅನುಭವಿಸಿದ ತೊಂದರೆಗಳು ಕಳೆದ ಒಂದು ದಶಕದಲ್ಲಿ ಸಾಕಷ್ಟು ಬೆಳವಣಿಗೆಗಳನ್ನು ಕಂಡಿದ್ದಾರೆ. ಅನೇಕ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಈ ಚುನಾವಣೆ ಜನರ ಜೀವನಮಟ್ಟವನ್ನು ಇನ್ನಷ್ಟು ಸುಧಾರಣೆಗೊಳಿಸಲು ಪ್ರೇರಣೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಮತದಾರರಿಗೆ ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ತಿಳಿಸಿದ್ದಾರೆ.

ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ ಕಾರ್ಯಕರ್ತರು ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ಧಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Exit mobile version