Site icon Vistara News

Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Lok Sabha Election 2024 union minister pralhad joshi statement

ಹುಬ್ಬಳ್ಳಿ: ರಾಜ್ಯದಲ್ಲಿ ಒಬಿಸಿ, ಎಸ್ಸಿ, ಎಸ್ಟಿ ಮೀಸಲಾತಿ ಕಬಳಿಸಿ ಮುಸ್ಲಿಮರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್‌ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷನರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವ ಜೋಶಿ ಆರೋಪಿಸಿದರು.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ಸಿಎಂ ಸಿದ್ದರಾಮಯ್ಯ ಸುಳ್ಳಿನ ಸರದಾರರು. ನ್ಯಾಷನಲ್ ಒಬಿಸಿ ಕಮಿಷನ್‌ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಅವರು ಹೇಳಿದರು. ಒಬಿಸಿ ಕಮಿಷನ್‌ಗೆ ಸಿಎಂ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ಅವರು ನೀಡಿರುವ ನೋಟೀಸ್‌ಗೆ ಉತ್ತರ ಕೊಡಲಿ ಹಾಗಿದ್ದರೆ ಎಂದು ಜೋಶಿ ಸವಾಲು ಹಾಕಿದರು.

ಅತ್ಯಂತ ಅಪಾಯಕಾರಿ ಬೆಳವಣಿಗೆ

ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಮರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ಸಂವಿಧಾನದಲ್ಲಿ ಅವಕಾಶವಿಲ್ಲ

ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದು ಜೋ಼ಶಿ ಹೇಳಿದರು.

ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ

ಈ ವಿಷಯದಲ್ಲಿ ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗ ಅದನ್ನು ಸಾಧಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಬಿಜೆಪಿ ಸರ್ಕಾರ ಇದ್ದಾಗ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2 ಪರ್ಸೆಂಟ್ ಮೀಸಲಾತಿ ಕಲ್ಪಿಸಲು ಇವರು ವಿರೋಧಿಸಿದ್ದರು ಎಂದು ಸಚಿವ ಜೋಶಿ ತಿಳಿಸಿದರು.

Exit mobile version