Site icon Vistara News

Lok Sabha Election 2024: ಅಮಿತ್‌ ಶಾ ʼರೌಡಿʼ ಹೇಳಿಕೆ ಸಮರ್ಥಿಸಿದ ಯತೀಂದ್ರ; ಮೋದಿ ವಿರುದ್ಧವೂ ವಾಗ್ದಾಳಿ

Lok Sabha Election 2024

ಮಡಿಕೇರಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಗೂಂಡಾ, ರೌಡಿ ಪದ ಬಳಸಿದ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ನಾಯಕರು ಅಕ್ರೋಶ ವ್ಯಕ್ತಪಡಿಸಿ, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ. ಕೊಡಗಿನ ವಿರಾಜಪೇಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಪ್ರಚಾರದಲ್ಲಿ ಭಾನುವಾರ ಭಾಗವಹಿಸಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್‌ ಶಾ ರೌಡಿ ಎಂದು ನಾನೇ ಹುಟ್ಟಿಸಿಕೊಂಡು ಹೇಳಿದಂತಹ ಮಾತಲ್ಲ, ಈ ಹಿಂದೆ ಸಿಬಿಐ ಕೂಡ ಹೇಳಿತ್ತು ಎಂದು ಹೇಳಿದ್ದಾರೆ.

ಅಮಿತ್ ಶಾ ಅವರಿಗೆ ಕ್ರಿಮಿನಲ್ ಬ್ಯಾಕ್‌ಗ್ರೌಂಡ್ ಇದೆ ಅಂತ ಹೇಳಿದ್ದೆ. ಆದರೆ, ಅದು ನಾನಾಗಿಯೇ ಹೇಳಿದ ಮಾತಲ್ಲ, ನಾನೇ ಹುಟ್ಟಿಸಿಕೊಂಡು ಹೇಳಿದಂತಹ ಮಾತಲ್ಲ, 2010ರಲ್ಲಿ ಸೊಹ್ರಾಬುದ್ದೀನ್ ಫೇಕ್ ಎನ್‌ಕೌಂಟರ್‌ ಪ್ರಕರಣದಲ್ಲಿ ಗುಜರಾತ್ ಕೋರ್ಟ್‌ಗೆ ಸಿಬಿಐ ಕೊಟ್ಟ ಹೇಳಿಕೆ ಅದು. ಅದೇ ಹೇಳಿಕೆಯನ್ನು ನಾನು ಪುನರುಚ್ಚಾರ ಮಾಡಿದ್ದೇನೆ ಅಷ್ಟೇ. ಹಾಗಾಗಿ ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೇ… ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣಾ ಆಯೋಗ ನೋಟಿಸ್ ಕೊಟ್ಟಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಸಚಿವರ, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಬಿಜೆಪಿ ದೂರು

ಮೋದಿ ಆಡಳಿತದಿಂದ ದೇಶ 25 ವರ್ಷ ಹಿಂದಕ್ಕೆ ಹೋಗಿದೆ

ಮೋದಿ ಸರ್ಕಾರ ಬಂದ 10 ವರ್ಷದಲ್ಲಿ ದೇಶವನ್ನು ಹಾಳು ಮಾಡುವ ಕೆಲಸವಾಗಿದೆ. ಮೋದಿ ಆಡಳಿತದಿಂದ ದೇಶ 25 ವರ್ಷ ಹಿಂದಕ್ಕೆ ಹೋಗಿದೆ. ಕೊಟ್ಟು ಯಾವುದೇ ಆಶ್ವಾಸನೆಗಳನ್ನು ಅವರು ಈಡೇರಿಸಿಲ್ಲ‌. ಕಪ್ಪು ಹಣದ ವಿಚಾರದಲ್ಲೂ ಮೋದಿ ಎಡವಿದ್ದಾರೆ. ಮೋದಿ ಸರ್ಕಾರ ಬಂದ ಮೇಲೆ ರೈತರು ಬಾಳು ಹಸನಾಗಿಲ್ಲ, ಬೀದಿಗೆ ಬಂದಿದೆ. ರೈತ ಪ್ರತಿಭಟನೆಯನ್ನು ಅಧಿಕಾರದಿಂದ ಹತ್ತಿಕ್ಕುವ ಕೆಲಸ ಆಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ | ಮತ್ತೊಂದು ಮದುವೆ ಈಗಲೇ ಆಗಿ, ಯುಸಿಸಿ ಬಳಿಕ ಜೈಲು ಎಂದ ಹಿಮಂತ ಬಿಸ್ವಾ ಶರ್ಮಾ!

ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಎಡವಿದ್ದಾರೆ, ಇದರಿಂದ ಭಾರತದಲ್ಲಿ ಅತೀ ಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವದ ಭಾರತ ದೇಶದಲ್ಲಿ ಬಿಜೆಪಿ ಸುಲಿಗೆ ಮಾಡುತ್ತಿದ್ದು‌, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿ ತನಿಖಾ ಸಂಸ್ಥೆಗಳನ್ನು ಮೋದಿ ಸರ್ಕಾರ ಕಪಿ ಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡಿದೆ. ಮೋದಿ ಸರ್ಕಾರದ ವಿರುದ್ಧ ಮಾತನಾಡಿದವರನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ. ಜನರ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದು, ಒಂದೆಡೆ ನೀಡಿದ ಭರವಸೆಗಳನ್ನೂ ಈಡೇರಿಸಿಲ್ಲ ವಾಗ್ದಾಳಿ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version