Site icon Vistara News

Lokayukta Fight : ನಾನು ಲೋಕಾಯುಕ್ತ ಮುಚ್ಚಿಲ್ಲ, ಬಿಜೆಪಿ ಹೇಳ್ತಾ ಇರೋದು ಬರೀ ಸುಳ್ಳು ಎಂದ ಸಿದ್ದರಾಮಯ್ಯ

Former CM Siddaramaiah

Former CM Siddaramaiah

ಮೈಸೂರು: ʻʻನಾನು ಲೋಕಾಯುಕ್ತ ಬಂದ್ (Lokayukta Fight) ಮಾಡಿಲ್ಲ. ಬಿಜೆಪಿಯವರು ಹೇಳುವಂತೆ ನಾನು ಲೋಕಾಯುಕ್ತ ಬಂದ್ ಮಾಡಿದ್ದೇ ಹೌದಾದರೆ ನಾನು ಇವತ್ತೇ ರಾಜೀನಾಮೆ ಕೊಡುತ್ತೇನೆʼʼ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ʻʻನಾವು ಲೋಕಾಯುಕ್ತವನ್ನು ಮುಚ್ಚಿಲ್ಲ. ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಭ್ರಷ್ಟಾಚಾರ ನಿಗ್ರಹಕ್ಕೆ ನಾವು ಎಸಿಬಿ ರಚನೆ ಮಾಡಿದ್ದೆವು ಅಷ್ಟೇ. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ʻʻನಾವು ಅಧಿಕಾರಕ್ಕೆ ಬಂದರೆ ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ.. ನ್ಯಾಯಾಲಯವೇ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ‌. ಸುಳ್ಳೇ ಬಿಜೆಪಿಯವರ ಮನೆದೇವ್ರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವ್ರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆʼʼ ಎಂದು ಹೇಳಿದರು.

ಮಾಡಾಳ್‌ ರಕ್ಷಣೆ ಮಾಡುತ್ತಿರುವುದು ಇವರೇ..

ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ಇನ್ನೂ ಬಂಧನವಾಗದಿರುವುದನ್ನು ಪ್ರಸ್ತಾಪಿಸಿದ ಅವರು, ʻʻಮಾಡಾಳ್ ವಿರೂಪಾಕ್ಷಪ್ಪನನ್ನ ಸರ್ಕಾರವೇ ರಕ್ಷಣೆ ಮಾಡುತ್ತಿದೆ. ಸರ್ಕಾರಕ್ಕೆ ಗೊತ್ತಿದೆ ವಿರೂಪಾಕ್ಷ ಎಲ್ಲಿದ್ದಾನೆ ಎಂಬುದು. ಅವನು ಅವನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ. ಅವನನ್ನು ಬಂಧಿಸದೆ ಇವರು ನಾಟಕ ಮಾಡ್ತಿದ್ದಾರೆ. ಲುಕ್ಔಟ್ ನೋಟಿಸ್ ಹೆಸರಿನಲ್ಲಿ ಜನರ ಗಮನ ಬೇರೆಡೆಗೆ ಸೆಳೆಯುತ್ತಿದ್ದಾರೆ ಅಷ್ಟೇ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವನನ್ನು ಯಾಕೆ ಬಂಧಿಸಲಿಲ್ಲʼʼ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಭ್ರಷ್ಟಾಚಾರಕ್ಕೆ ಇನ್ನೆಂಥ ಸಾಕ್ಷಿ ಬೇಕು?

ನಾವು ಯಾವಾಗ ಭ್ರಷ್ಟಾಚಾರದ ಆರೋಪ ಮಅಡಿದರೂ ಮಿಸ್ಟರ್‌ ಬೊಮ್ಮಾಯಿ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದಲ್ಲಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಹೀಗಿದ್ದರೂ ಏನು ಕ್ರಮ ತೆಗೆದುಕೊಂಡಿದ್ದಾರೆ..?ʼʼ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ʻʻಇಷ್ಟೆಲ್ಲ ಆದರೂ ನಮಗೆ ಯಾವುದೇ ಮುಜುಗರ ಆಗಿಲ್ಲ ಅನ್ನುತ್ತಿದ್ದಾರೆ. ಅಪ್ಪ ಅಧ್ಯಕ್ಷ ಆಗಿದ್ದ ಕಾರಣಕ್ಕೆ ಮಗನಿಗೆ ಲಂಚ ಕೊಡಲು ಬಂದಿದ್ದರು. ಹೀಗಾಗಿ ಅಪ್ಪನೇ ಮೊದಲ ಆರೋಪಿ. ಅವನನ್ನು ಬಂಧಿಸಬೇಕುʼʼ ಎಂದು ವಿರೂಪಾಕ್ಷಪ್ಪ ಮಾಡಾಳು ಬಂಧನಕ್ಕಿ ಸಿದ್ದರಾಮಯ್ಯ ಆಗ್ರಹಿಸಿದರು.

ಇದನ್ನೂ ಓದಿ : Karnataka Election: ಸಿದ್ದರಾಮಯ್ಯಗೆ ಉಜ್ವಲ ರಾಜಕೀಯ ಭವಿಷ್ಯವಿದೆ: ಕೋಡಿಮಠ ಶ್ರೀ

Exit mobile version