ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ (ಕೆಐಎಡಿಬಿ) ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ (Lokayukta Raid) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ.
ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಪ್ರದೀಪ್ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಗಳನ್ನು ಬಂಧಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ರದ್ದಾದ ಬಳಿಕ ಲೋಕಾಯುಕ್ತದಿಂದ ದಾಖಲಾಗಿರುವ ಮೂರನೇ ಪ್ರಕರಣ ಇದಾಗಿದೆ.
ಇದನ್ನೂ ಓದಿ | ಲಂಚ ಪ್ರಕರಣ: ಬಿಎಸ್‌ವೈ, ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಲೋಕಾಯುಕ್ತ: ಮುಂದೆ ಏನಾಗಲಿದೆ?