ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಹಸೀಲ್ದಾರ್ ಕಚೇರಿಯಲ್ಲಿ 65 ಸಾವಿರ ರೂಪಾಯಿ ಲಂಚ ಪಡೆಯುವಾಗ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ,
ಎಫ್‌ಡಿಎ ವೆಂಕಟಸ್ವಾಮಿ ಬಂಧಿತ. ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಫ್‌ಡಿಎ, 70 ಸಾವಿರ ರೂಪಾಯಿ ಹಣಕ್ಕೆ ಹಣ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ 65 ಸಾವಿರ ರೂಪಾಯಿಯನ್ನು ಕಚೇರಿಯಲ್ಲಿ ಸ್ವೀಕರಿಸುತ್ತಿದ್ದಾಗ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಸಾರಿಗೆ ಬಸ್-ಬೈಕ್ ಡಿಕ್ಕಿಯಾಗಿ ಸವಾರ ಸಾವು
ಕುರುಗೋಡು(ಬಳ್ಳಾರಿ): ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ-ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯ ವಿ.ಟಿ. ಕ್ಯಾಂಪ್ ಬಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಗಾದಿಗನೂರು ನಿವಾಸಿ ಕೆ. ಕಲ್ಲಪ್ಪ (41) ಮೃತರು. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಹೆಂಡತಿ ತವರೂರು ಸಿಂದಿಗೇರಿಗೆ ತೆರಳುತ್ತಿರುವಾಗ ಸಿರುಗುಪ್ಪ ಕಡೆಯಿಂದ ಬಂದ ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡು ಕಲ್ಲಪ್ಪ ಮೃತಪಟ್ಟಿದ್ದಾರೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Murder Case : ಕುಡಿಯಲು ಹಣ ಕೊಡಲಿಲ್ಲ ಎಂದು ತಾತನನ್ನೇ ಕೊಲೆಗೈದ ಮೊಮ್ಮಗ