Lokayukta Raid: 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಕಮಿಷನರ್ - Vistara News

ಕರ್ನಾಟಕ

Lokayukta Raid: 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಕಮಿಷನರ್

Lokayukta Raid: ಮಂಗಳೂರಿನಲ್ಲಿ ಟಿಡಿಆರ್‌ ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದಾಗ ಮುಡಾ ಆಯುಕ್ತ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

VISTARANEWS.COM


on

MUDA Commissioner Mansoor Ali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: 25 ಲಕ್ಷ ರೂ. ಲಂಚ ಪಡೆಯುವಾಗ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಮಿಷನರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಟಿಡಿಆರ್‌ ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದಾಗ ಆಯುಕ್ತ, ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ.

ಮುಡಾ ಕಮಿಷನರ್ ಮನ್ಸೂರ್ ಅಲಿ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಚೆಲುವರಾಜ್, ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಕಾರ್ಯಾಚರಣೆ ನಡೆಸಿದ್ದು, ಬ್ರೋಕರ್ ಸಲೀಂ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಸಾಗರ್ ರಿಯಾಲಿಟಿ ಪ್ರಮೋಟರ್ಸ್‌ನ ಮಾಲೀಕ ಗಿರಿಧರ್ ಶೆಟ್ಟಿಯಿಂದ ದಲ್ಲಾಳಿ ಸಲೀಂ ಮೂಲಕ ಆಯುಕ್ತ ಮನ್ಸೂರ್ ಆಲಿ ಲಂಚ ಪಡೆಯುತ್ತಿದ್ದರು. ಇತ್ತೀಚೆಗೆ ಕುಡುಪು ಗ್ರಾಮದಲ್ಲಿ ಗಿರಿಧರ್ ಶೆಟ್ಟಿ ಜಾಗ ಖರೀದಿ ಮಾಡಿದ್ದರು. ಜಮೀನಿಗೆ ಟಿಡಿಆರ್ ನೀಡಲು ಮುಡಾ ಇಲಾಖೆಗೆ ಫೈಲ್ ವರ್ಗಾವಣೆಯಾಗಿತ್ತು. ಆದರೆ ಲಂಚಕ್ಕಾಗಿ ಮುಡಾ ಆಯುಕ್ತ ಫೈಲ್ ಅನ್ನು ಪೆಂಡಿಂಗ್ ಇಟ್ಟಿದ್ದರು. ನಂತರ ಗಿರಿಧರ್‌ ಶೆಟ್ಟಿ ಬಳಿ ನೇರವಾಗಿ 25 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ದಲ್ಲಾಳಿ ಸಲೀಂ ಮೂಲಕ 25 ಲಕ್ಷ ರೂ. ಲಂಚ ಸ್ವೀಕಾರ ಮಾಡುವಾಗ ದಲ್ಲಾಳಿ ಸಲೀಂ ಮತ್ತು ಕಮಿಷನರ್ ಮನ್ಸೂರ್ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ | Acid attack : ಬಡ್ಡಿ, ಚಕ್ರಬಡ್ಡಿ ಹಣ ಕೊಡಲಿಲ್ಲ ಎಂದು ಆ್ಯಸಿಡ್ ಎರಚಿದ ಕಿರಾತಕ

ಉಡುಪಿ ಟಾಯ್ಲೆಟ್‌ ವಿಡಿಯೊ ಪ್ರಕರಣ ನಿಜ; ಸತ್ಯ ಬಯಲಾಯ್ತು ಎಂದ ಬಿಜೆಪಿ

Udupi Toilet Case BJP Statement

ಬೆಂಗಳೂರು: 2023ರ ಜು. 18ರಂದು ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ (Nethrajyothi Paramedical College) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಒಬ್ಬ ಹಿಂದೂ ವಿದ್ಯಾರ್ಥಿನಿ ಟಾಯ್ಲೆಟ್‌ (Udupi Toilet Case) ಬಳಸುವ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ಹೇಳಲಾದ ಪ್ರಕರಣ ನಿಜ ಎಂದು ಸಿಐಡಿ ತನ್ನ ಚಾರ್ಜ್‌ಶೀಟ್‌ನಲ್ಲಿ (CID ChargeSheet) ತಿಳಿಸಿದೆ. ಆದರೆ, ಇದರ ಹಿಂದೆ ಕೋಮು ಉದ್ದೇಶಗಳು ಇದ್ದಂತಿಲ್ಲ ಎಂದು ಹೇಳಿದೆ. ಸಿಐಡಿ ಚಾರ್ಜ್‌ಶೀಟ್‌ನಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಬಿಜೆಪಿ (BJP Karnataka) ಹೇಳಿದೆ.

ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಅವರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ಮೂವರು ಆರೋಪಿಗಳು ಶೌಚಾಲಯದಲ್ಲಿ ವಿಡಿಯೋ ಮಾಡಿರುವುದು ತಪ್ಪಾಗಿದೆ ಎಂದು ಕ್ಷಮಾಪನ ಪತ್ರ ಬರೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯಲ್ಲಿ ಆರೋಪಿಗಳು ಬರೆದುಕೊಟ್ಟಿರುವ ಪತ್ರವು ಅವರ ಹಸ್ತಾಕ್ಷರದೊಂದಿಗೆ ಹೋಲಿಕೆ ಆಗಿದ್ದನ್ನು ಉಲ್ಲೇಖಿಸಲಾಗಿದೆ. ಈ ಮೂಲಕ ವಿದ್ಯಾರ್ಥಿನಿಯರು ತಪ್ಪು ಮಾಡಿರುವುದು ನಿಜ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ತಪ್ಪೊಪ್ಪಿಗೆಯ ಕ್ಷಮಾಪನ ಪತ್ರ ಹಾಗೂ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆಗಳ ಆಧಾರದಲ್ಲಿ ಆರೋಪಿಗಳ ವಿರುದ್ಧ ಕಲಂ 204, 509, 120(ಬಿ) ಸಹಿತ 34, 37 ಐಪಿಸಿ ಹಾಗೂ 66(ಇ) ಐಟಿ ಆ್ಯಕ್ಟ್‌ನಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಚಾರ್ಜ್‌ ಶೀಟ್‌ನ ಎರಡು ಸಂಪುಟಗಳಲ್ಲಿ 925 ಪುಟಗಳಿವೆ. 91 ಸಾಕ್ಷಿಗಳಿಂದ ಮಾಹಿತಿ ಪಡೆಯಲಾಗಿದೆ.

ಹಾಗಿದ್ದರೆ ಸಿಐಡಿ ಮುಂದೆ ಸಂತ್ರಸ್ತ ವಿದ್ಯಾರ್ಥಿನಿ ಹೇಳಿದ್ದೇನು?

  1. ವಿಡಿಯೋ ಚಿತ್ರೀಕರಣ ವಿಚಾರದ ಕುರಿತು ಕಾಲೇಜಿನಲ್ಲಿ ನಡೆದ ಪ್ರತಿಭಟನೆಯಲ್ಲಿ ತಾನು ಭಾಗವಹಿಸಿಲ್ಲ. ಬಳಿಕ ಆಡಳಿತ ಮಂಡಳಿಯವರು ಪೋಷಕರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.
  2. ಪೋಷಕರನ್ನು ಕರೆಸಿ ಮಾತುಕತೆ ನಡೆಸಿದ ವೇಳೆ ನಾನು ಈ ವಿಷಯ ಹೊರಗೆ ಹೋದರೆ ನನ್ನ ಮತ್ತು ಆ ಮೂರು ಜನರ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದ್ದೇನೆ. ಅಲ್ಲದೆ ಆ ಮೂವರು ಹೆಣ್ಣು ಮಕ್ಕಳು ಈ ವಿಚಾರವಾಗಿ ಎಲ್ಲರ ಮುಂದೆ ಕ್ಷಮಾಪಣೆಯನ್ನು ಕೇಳಿದ್ದರು.
  3. ಮಾತುಕತೆ ಸಂದರ್ಭ ನನ್ನ ತಾಯಿ, ಈ ವಿಚಾರವನ್ನು ಪ್ರಚಾರ ಮಾಡಬಾರದು, ನನ್ನ ಮಗಳ ಭವಿಷ್ಯ ಹಾಳಾಗುತ್ತದೆ. ಆ ಕಾರಣ ನಾವು ಯಾವುದೇ ರೀತಿಯ ದೂರನ್ನು ನೀಡಲು ಆಗುವುದಿಲ್ಲ ಎಂದು ಪೊಲೀಸರ ಮುಂದೆ ತಿಳಿಸಿದ್ದರು.
  4. ಒಂದು ವೇಳೆ ಆರೋಪಿಗಳು ಆ ರೀತಿಯ ವಿಡಿಯೊ ಮಾಡಿದ್ದರೆ ಅಥವಾ ಫೋಟೊ ತೆಗೆದಿದ್ದರೆ ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು.- ಎಂದು ಸಂತ್ರಸ್ತ ಬಾಲಕಿ ಹೇಳಿದ್ದಾಗಿ ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Udupi Toilet Case: ನೇತ್ರಜ್ಯೋತಿ ಕಾಲೇಜಿಗೆ ಸಿಐಡಿ ಎಸ್‌ಪಿ ಭೇಟಿ; ಸಂತ್ರಸ್ತ ವಿದ್ಯಾರ್ಥಿನಿಯಿಂದ ಹೇಳಿಕೆ ದಾಖಲು

ಆರೋಪಿತ ವಿದ್ಯಾರ್ಥಿನಿಯರ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಆರೋಪಿತ ವಿದ್ಯಾರ್ಥಿನಿಯರು ತಮಾಷೆ ಅಥವಾ ಪ್ರ್ಯಾಂಕ್ ವಿಡಿಯೋ ಮಾಡುವ ಹವ್ಯಾಸ ಹೊಂದಿದ್ದರು. ಜುಲೈ 18, 2023ರಂದು ಕಾಲೇಜಿನ ಶೌಚಾಲಯದಲ್ಲಿ ತಮ್ಮ ಗೆಳತಿಯ ವಿಡಿಯೋ ಮಾಡಿದ್ದರು. ಆದರೆ, ಅವರು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಗೆಳತಿಯ ಬದಲಾಗಿ ಸಹಪಾಠಿ ಯುವತಿ ಇರುವುದು ಗೊತ್ತಾಗಿದೆ.

ಕೂಡಲೇ ವಿಡಿಯೋ ಡಿಲಿಟ್ ಮಾಡಿದ ವಿದ್ಯಾರ್ಥಿನಿಯರು ಸಂತ್ರಸ್ತೆಗೆ ತಪ್ಪಾಗಿ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆ ಯಾಚಿಸಿದ್ದಾರೆ. ಬಳಿಕ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಆಡಳಿತ ಮಂಡಳಿ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದಾಗ ಅವರು ವಿಡಿಯೋ ಮಾಡಿರುವುದನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ. ವಿಡಿಯೊದಲ್ಲಿ ಸಂತ್ರಸ್ತೆ ತಲೆ ಎತ್ತಿ ನೋಡುವ ಸನ್ನಿವೇಶವಷ್ಟೇ ದಾಖಲಾಗಿದೆ.

ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ಕೊಟ್ಟಿರುವ ಕ್ಷಮಾಪಣಾ ಪತ್ರದ ಬರಹಕ್ಕೂ ಅವರ ಕೈ ಬರಹಕ್ಕೂ ತಾಳೆಯಾಗುತ್ತಿದೆ ಎಂದು ಎಫ್‌ಎಸ್‌ಎಲ್‌ ವರದಿ ದೃಢೀಕರಿಸಿದೆ. ಕಾಲೇಜಿನ ಸಿಸಿಟಿವಿ ವಿಡಿಯೋ ಕೂಡ ವಿದ್ಯಾರ್ಥಿನಿಯರ ಮೇಲಿರುವ ಆರೋಪಕ್ಕೆ ಪೂರಕವಾಗಿದೆ ಎಂದು ಸಿಐಡಿ ತನ್ನ ಚಾರ್ಜ್‌ ಶೀಟ್‌ನಲ್ಲಿ ತಿಳಿಸಿದೆ ಎನ್ನಲಾಗಿದೆ.

ಹಾಗಂತ ಸಿಐಡಿ ತನಿಖೆಗೂ ಈ ವಿಡಿಯೊ ಸಿಕ್ಕಿಲ್ಲ. ಅದನ್ನು ತಕ್ಷಣವೇ ಡಿಲೀಟ್‌ ಮಾಡಲಾಗಿದೆ. ಅದನ್ನು ರಿಟ್ರೀವ್‌ ಮಾಡಲು ಕೂಡಾ ಆಗಿಲ್ಲ. ಅದನ್ನು ಬೇರೆ ಯಾರಿಗೂ ಹಂಚಿದಂತಿಲ್ಲ ಎಂದು ಚಾರ್ಜ್‌ಶೀಟ್‌ನಲ್ಲಿ ಇದೆ ಎನ್ನಲಾಗಿದೆ.

ಪ್ರಾಂಕ್‌ ಎಂದ ಕಾಂಗ್ರೆಸ್‌ಗೆ ಇದು ಮುಖಭಂಗ ಎಂದ ಬಿಜೆಪಿ

ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ಹಿಂದೂ ಯುವತಿಯರ ವಿಡಿಯೋ ಪ್ರಕರಣವನ್ನು ‘Prank’ ಎಂದು ರಾಜ್ಯದ ಜನತೆಯ ಕಿವಿ ಮೇಲೆ ಹೂವಿಡಲು ಷಡ್ಯಂತ್ರ ರಚನೆ ಮಾಡಿದ್ದ ಕಾಂಗ್ರೆಸ್‌ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಪೊಲೀಸರು ತನಿಖೆ ಮಾಡುವ ಮುನ್ನವೇ ಪ್ರಕರಣಕ್ಕೆ ಕ್ಲೀನ್ ಚಿಟ್ ಕೊಟ್ಟು ಜಿಹಾದಿಗಳಿಗೆ ರಕ್ಷಣೆ ನೀಡಲು ಮುಂದಾಗಿತ್ತು ಕಾಂಗ್ರೆಸ್ ಸರ್ಕಾರ ಹಾಗೂ ಅಸಮರ್ಥ ಗೃಹ ಸಚಿವ ಡಾ. ಜಿ. ಪರಮೇಶ್ವರ್‌. ಆದರೆ, ಸಿಐಡಿ ತನಿಖೆಯಲ್ಲಿ ಜಿಹಾದಿ ಕೃತ್ಯದ ಸತ್ಯ ಹೊರಬಂದಿದೆ. ಮಜಾವಾದಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕರ್ನಾಟಕದಲ್ಲಿ ಜಿಹಾದಿ ಕೃತ್ಯಗಳು ಹೆಚ್ಚಾಗಿವೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಇದನ್ನೂ ಓದಿ | Physical Abuse: ಲೈಂಗಿಕ ದೌರ್ಜನ್ಯವಾದ್ರೆ ಅಡ್ಜಸ್ಟ್‌ ಮಾಡ್ಕೋ; ಇದು ಅಕ್ಕಮಹಾದೇವಿ ಮಹಿಳಾ ವಿವಿಯ ಕಾಮಕಾಂಡ

ಉಡುಪಿ ಪ್ರಕರಣ, ವಿಧಾನಸೌಧದ ಪಾಕ್ ಘೋಷಣೆ ಪ್ರಕರಣ, ಭಯೋತ್ಪಾದಕರ ಬಂಧನ ಸೇರಿದಂತೆ ಹಲವು ಪ್ರಕರಣಗಳನ್ನು ಮುಚ್ಷಿ ಹಾಕಲು ಹೋಗಿ ಪಾ’ಕೈ’ಸ್ತಾನ್ ಸರ್ಕಾರ ಸಿಕ್ಕಿಬಿದ್ದಿದೆ. ಇನ್ನಾದರೂ ಕಾಂಗ್ರೆಸ್ ಸರ್ಕಾರಕ್ಕೆ ಮರ್ಯಾದೆ ಇದ್ದರೆ, ಪ್ರಕರಣಗಳ ದಿಕ್ಕು ತಪ್ಪಿಸುವ ಬದಲು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಆಡಳಿತ ನಡೆಸುವ ಯೋಗ್ಯತೆ ದಮ್ಮು ತಾಕತ್ತು ಇಲ್ಲದಿದ್ದರೆ ಮನೆಗೆ ನಡೆಯಬೇಕು! ಎಂದು #AntiHinduCongress#UdupiHorror ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅದು ಟ್ವೀಟ್‌ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

Latest

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

VISTARANEWS.COM


on

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

Continue Reading

Latest

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

VISTARANEWS.COM


on

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಜೈಲು ವಾಸ ಅನುಭವಿಸುತ್ತಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದು, ದೀರ್ಘಕಾಲದ ಕಾನೂನು ಹೋರಾಟದ ನಂತರ ಅವರಿಗೆ ತಾತ್ಕಾಲಿಕ ಜಯ ಸಿಕ್ಕಂತಾಗಿದೆ.

ಸುಮಾರು 102 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಗಂಭೀರ ಆರೋಪದ ಮೇಲೆ 2025ರ ಮಾರ್ಚ್ 3ರಂದು ಡಿಆರ್​​ಐ (DRI) ಅಧಿಕಾರಿಗಳು ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠವು ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ, ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ (COFEPOSA) ಕಾಯ್ದೆಯ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿದ್ದರಿಂದ, ನಟಿಗೆ ಕಳೆದ ಒಂದು ವರ್ಷದಿಂದ ಜಾಮೀನು ಸಿಗದೆ ಜೈಲಿನಲ್ಲೇ ಉಳಿಯುವಂತಾಗಿತ್ತು.

ಇದೀಗ ಒಂದು ವರ್ಷದ ಕಠಿಣ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದ್ದು, ರನ್ಯಾ ರಾವ್ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ. ಹಗರಣದ ಆಳ ಮತ್ತು ವ್ಯಾಪ್ತಿ ದೊಡ್ಡದಾಗಿರುವುದರಿಂದ ತನಿಖಾ ಸಂಸ್ಥೆಗಳು ತನಿಖೆಯನ್ನು ಮುಂದುವರಿಸಿವೆ. ಸದ್ಯಕ್ಕೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದರೂ, ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪಾಲಿಸಬೇಕಿದೆ. ಈ ಹೈಪ್ರೊಫೈಲ್ ಪ್ರಕರಣವು ಚಿತ್ರರಂಗದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.

Continue Reading

Latest

ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

VISTARANEWS.COM


on

BJP State President B Y Vijayendra latest statement in bengaluru

ಬೆಂಗಳೂರು: ರಾಜ್ಯಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.


ಈ ಕುರಿತು ಎಕ್ಸ್‌ ಖಾತೆಯಲ್ಲಿ ತಮ್ಮ ಹೇಳಿಕೆಯನ್ನು ಪೋಸ್ಟ್‌ ಮಾಡಿರುವ ಅವರು, ಕಳೆದ ವರ್ಷ ಎರಡು ತಿಂಗಳ ಅವಧಿಗೆ ಗ್ರಹಲಕ್ಷ್ಮಿ ಹಣವನ್ನೇ ನುಂಗಿ ಹಾಕಿದ ರಾಜ್ಯ ಸರ್ಕಾರ ಈ ವರ್ಷ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.


ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.


ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ, ಮುಸ್ಲಿಮರ ತುಷ್ಟಿಕರಣ ಹೀಗೆ ಹಲವು ಆಂತರಿಕ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿ ಹೋಗಿದ್ದಾರೆ. ಇದರ ನೇರ ಪರಿಣಾಮ ರಾಜ್ಯದ ಜನರ ಮೇಲೆ ಉಂಟಾಗುತ್ತಿದೆ.


ಸರ್ಕಾರಿ ನೌಕರರಿಗೆ ಸಂಬಳವನ್ನೇ ಕೊಡಲು ಸಾಧ್ಯವಾಗದ ಈ ಸರಕಾರ ಈ ವರ್ಷ ಬಿರು ಬೇಸಿಗೆ ಹಾಗೂ ಬರದ ಛಾಯೆಯಲ್ಲಿ ಈಗಾಗಲೇ ಬಸವಳಿದು ಹೋಗಿರುವ ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ.


ಪ್ರತಿಪಕ್ಷವಾಗಿ ಬಿಜೆಪಿ ಸರ್ಕಾರವನ್ನು ಬಡಿದೆಬ್ಬಿಸಿ ಕುಡಿಯುವ ನೀರಿಗೂ ಪರಿತಪಿಸುತ್ತಿರುವ ಜನ , ಜಾನುವಾರು ನೆರವಿಗೆ ಮುಂದಾಗುವಂತೆ ಹೋರಾಟ ನಡೆಸಲು ಬದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Continue Reading
Advertisement
Latest13 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest14 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest14 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest15 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest15 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest15 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest16 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest16 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest17 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ17 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌