Site icon Vistara News

Lokayukta Raid: ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ, ಬೆಸ್ಕಾಂ ಇಇ ಮನೆಯಲ್ಲಿ ಕೋಟಿ ಕೋಟಿ ಪತ್ತೆ

lokayukta raid in channakeshava

ಬೆಂಗಳೂರು: ರಾಜಧಾನಿ ಸೇರಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ತಂಡಗಳು ಮಿಂಚಿನ ದಾಳಿ (Lokayukta Raid) ನಡೆಸಿವೆ. ರಾಜ್ಯದ 63ಕ್ಕೂ ಹೆಚ್ಚು ಕಡೆ ಮುಂಜಾನೆ ಅಧಿಕಾರಿಗಳು ಏಳುವ ಮೊದಲೇ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ಸುಮಾರು 13 ಅಧಿಕಾರಿಗಳಿಗೆ ಸೇರಿದ 63ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಹಾಗೂ ಪರಿಶೀಲನೆ ನಡೆದಿದೆ. ದಾಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ. ಆದಾಯಕ್ಕೂ ಮೀರಿದ ಅಧಿಕ ಆಸ್ತಿ ಸಂಗ್ರಹಿಸಿದ (corrupt officers) ಸಂಬಂಧ ದಾಳಿ ನಡೆಸಿ ದಾಖಲೆ ಹಾಗೂ ಆಸ್ತಿಗಳ ಪರಿಶೀಲನೆ ಮಾಡಲಾಗುತ್ತಿದೆ.

ಬೆಂಗಳೂರಿನ ಮೂರು ಕಡೆ, ಕಲಬುರಗಿ, ಬೀದರ್-2 ಕಡೆ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ಒಂದೊಂದು ಕಡೆ ರೈಡ್‌ ಮಾಡಲಾಗಿದೆ.

ಚನ್ನಕೇಶವ

ಬೆಂಗಳೂರಿನ ಜಯನಗರದ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಚನ್ನಕೇಶವ ಅವರ ಜಕ್ಕೂರು ಸಮೀಪದ ಮನೆ ಮೇಲೆ‌ ದಾಳಿ ನಡೆಸಲಾಗಿದೆ. ಚನ್ನಕೇಶವರ ಅಮೃತ್ ಹಳ್ಳಿ ನಿವಾಸದ ಮೇಲೆ ದಾಳಿ ನಡೆಸಿದಾಗ ಚೆನ್ನಕೇಶವ ಮತ್ತು ಅವರ ಪತ್ನಿ ಹೆಸರಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. 6 ಲಕ್ಷ ನಗದು. ಚಿನ್ನ 3 ಕೆಜಿ, 28 ಕೆ.ಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರಾಭರಣ ಹಾಗೂ 5 ಲಕ್ಷ ಮೌಲ್ಯದ 7 ಪುರಾತನ ವಸ್ತುಗಳು ದೊರೆತಿವೆ. ಪತ್ತೆಯಾದ ವಸ್ತುಗಳ ಮೌಲ್ಯ ಸುಮಾರು ₹ 1.5 ಕೋಟಿ ಎನ್ನಲಾಗಿದೆ.

ಜಯನಗರ ಡಿವಿಷನ್‌ಗೆ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ಚನ್ನಕೇಶವ ಅಪಾರ್ಟ್ಮೆಂಟ್ ಹಾಗೂ ಕಮರ್ಷಿಯಲ್ ಬಿಲ್ಡಿಂಗ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಲು ಲಕ್ಷ‌ಲಕ್ಷ ಲಂಚ ಪಡೆಯುತ್ತಿದ್ದರು ಎಂಬ ಆರೋಪವಿದೆ. ಹೆಚ್ಚು ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಕಾರಣ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಚನ್ನಕೇಶವಗೆ ಸೇರಿದ ಏಳು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈತ ಐಷಾರಾಮಿ ಅಪಾರ್ಟ್ಮೆಂಟ್‌ನಲ್ಲಿ ವಾಸ ಮಾಡುತ್ತಿದ್ದಾನೆ.

ಪ್ರಭುಲಿಂಗ ಮಾನಕರ್

ಯಾದಗಿರಿ ಡಿಎಚ್‌ಓ ಆಗಿರುವ ಡಾ. ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದ ಮೇಲೆ, ಯಾದಗಿರಿ ನಗರದ ಬಾಡಿಗೆ ಮನೆ ಮೇಲೆ ಲೋಕಾಯುಕ್ತ DYSP ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಅವರ ಮೇಲಿದೆ.

ಇನ್ನೂ ಯಾರ ಮೇಲೆ ದಾಳಿ?

ಇತ್ತೀಚೆಗೆ ತಾನೇ ಲೋಕಾಯುಕ್ತ ತಂಡಗಳು 11 ಅಧಿಕಾರಿಗಳ ಮನೆಗಳಿಗೆ ದಾಳಿ ನಡೆಸಿದ್ದವು. ಹಬ್ಬದ ವೇಳೆಯಲ್ಲಿ ಅಭರಣ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಕೂಡ ದಾಳಿ ನಡೆಸಿತ್ತು.

ಇದನ್ನೂ ಓದಿ: Lokayukta Raid: ಬೆಂಗಳೂರಿನ 11 ಕಡೆ ಲೋಕಾಯುಕ್ತ ದಾಳಿ; ಭೂ ಮಾಪನ ಇಲಾಖೆ ಕಚೇರಿಗಳಲ್ಲಿ ಶೋಧ

Exit mobile version