Site icon Vistara News

Lokayukta warning | ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್

Lokayukta B.S. Patil shivamogga

ಶಿವಮೊಗ್ಗ : ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ (Lokayukta warning) ನೀಡಿದರು.

ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಶುಕ್ರವಾರ (ಜ.೬) ನಡೆಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆಯು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಲು ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಯಮಿತವಾಗಿ ಈ ಕುರಿತು ವಿಚಾರಣೆಯನ್ನು ನಡೆಸಲಾಗುವುದು. ಶಿವಮೊಗ್ಗ ಜಿಲ್ಲೆಯೆಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 6 ಸಾವಿರಕ್ಕೂ ಅಧಿಕ ಕೆರೆಗಳಿದ್ದು, ಅವುಗಳ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು. ಇದೇ ರೀತಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತ ವರದಿಯನ್ನು ಪ್ರತ್ಯೇಕವಾಗಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ | Indira Gandhi killers | ಇಂದಿರಾ ಗಾಂಧಿ ಹಂತಕರ ಪುಣ್ಯತಿಥಿಯಲ್ಲಿ ಅಕಾಲಿ ದಳದ ನಾಯಕ ಬಾದಲ್ ಭಾಗಿ!

ಉದ್ಯೋಗ ಖಾತ್ರಿ

ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಈ ಕುರಿತು 5 ಲಕ್ಷ ಪ್ರಕರಣಗಳು ಲೋಕಾಯುಕ್ತದ ಮುಂದಿವೆ. ಯುದ್ಧೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಜಾರಿಯ ಸರಿಯಾದ ದಾಖಲೆಗಳನ್ನು ನಿರ್ವಹಿಸದ ಪಿಡಿಒಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆ ಅನುಷ್ಠಾನ ಸಮರ್ಪಕವಾಗಿ ನಿರ್ವಹಿಸದಿದ್ದರೆ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ | Urvashi Rautela | ನಟಿ ಊರ್ವಶಿ ರೌಟೇಲಾಗೆ ಹಿಗ್ಗಾಮುಗ್ಗಾ ಜಾಡಿಸಿದ ಪಂತ್​ ಅಭಿಮಾನಿಗಳು

ವಸತಿ ಯೋಜನೆ ಅನುಷ್ಠಾನ

ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ದೂರುಗಳ ವಿಚಾರಣೆಯನ್ನು ಮಾಡಲಾಗುತ್ತಿದೆ. ಇದೇ ರೀತಿ ನೀರಾವರಿ, ಕೃಷಿ, ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಇಲಾಖೆಗಳು ಜನ ಕಲ್ಯಾಣ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪಟ್ಟಿ ಸಿದ್ಧಪಡಿಸಲು ಸೂಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಸ್ತುತ ಪೂರ್ಣ ಪ್ರಮಾಣದ ಅಧಿಕಾರಿ ಸಿಬ್ಬಂದಿಯಿದ್ದು, ನ್ಯಾಯಾಂಗ ವಿಭಾಗ, ಪೊಲೀಸ್ ವಿಭಾಗ, ಆಂತರಿಕ ಗುಪ್ತಚರ ವಿಭಾಗ, ಆಡಳಿತ ವಿಭಾಗ, ತಾಂತ್ರಿಕ ವಿಭಾಗ ಕಾರ್ಯ ನಿರ್ವಹಿಸುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಜನ ಕಂಟಕರಾಗಿರುವ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಅದರ ಪ್ರಕಾರ ದಾಳಿಗಳನ್ನು ನಡೆಸಿ ಭ್ರಷ್ಟ ವ್ಯವಸ್ಥೆಯನ್ನು ಮಟ್ಟ ಹಾಕಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವೂ ನಡೆಯಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ | KPSC CBRT Exam | ಕೆಪಿಎಸ್‌ಸಿಯ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ನಾಳೆ ಮಾಕ್‌ ಟೆಸ್ಟ್‌

ಎಚ್ಚರಿಕೆ

ಜನರು ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಕೈಜೋಡಿಸಬೇಕು. ಇದೇ ವೇಳೆ ಕೆಲವರು ಸುಳ್ಳು ದೂರುಗಳನ್ನು ದಾಖಲಿಸಿ ವಸೂಲಿ ದಂಧೆಗೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತಹ ಪ್ರಕರಣಗಳಲ್ಲಿ ಲೋಕಾಯುಕ್ತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪ, ಲೋಕಾಯುಕ್ತ ಡಿ.ವೈ.ಎಸ್.ಪಿ. ಮೃತ್ಯುಂಜಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | VIrat kohli | ಮೊದಲ ಬಾರಿ ಕೊಹ್ಲಿಯ ಪುತ್ರಿ ವಾಮಿಕಾಳ ಮುಖ ನೋಡಿದ ಅಭಿಮಾನಿಗಳು ಫುಲ್​ ಖುಷ್​, ಎಲ್ಲಿ ಸಿಕ್ಕಿದಳು ಪುಟಾಣಿ?

Exit mobile version