ಬೆಂಗಳೂರು: ಲೋಕಾಯುಕ್ತಕ್ಕೆ ಹಿಂದೆ ಇದ್ದ ಅಧಿಕಾರವನ್ನು ಮರುಸ್ಥಾಪನೆ ಮಾಡಬೇಕು ಎಂಬ ಹೈಕೋರ್ಟ್ ಆದೇಶಕ್ಕೆ ಆಮ್ ಆದ್ಮಿ ಪಾರ್ಟಿ ಸಂತೋಷ ವ್ಯಕ್ತಪಡಿಸಿದೆ. ಶುಕ್ರವಾರ ಆಪ್ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಎದುರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ಮಾತನಾಡಿದ ಆಮ್ ಆದ್ಮಿ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು, ʻʻಲೋಕಾಯುಕ್ತ ಸ್ಟ್ರಾಂಗ್ ಆಗಿದ್ದಾಗ ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಮಗ, ಆನಂದ್ ಸಿಂಗ್ ಸೇರಿ ಹಲವರು ಜೈಲಿಗೆ ಹೋಗಿದ್ದರು. ಲೋಕಾಯುಕ್ತಕ್ಕೆ ಜಸ್ಟಿಸ್ ವೆಂಕಟಾಚಲ ಹಾಗು ಸಂತೋಷ್ ಹೆಗ್ಡೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಲಾಭ ಆಗಿತ್ತು ಎಂದರು.
ಆಮ್ ಆದ್ಮಿ ಪಕ್ಷದ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ನಿವೃತ್ತ ಕೆಎಎಸ್ ಅಧಿಕಾರಿ ಮಥಾಯ್ ಸೇರಿ ಐವತ್ತಕ್ಕೂ ಹೆಚ್ಚು ಮುಖಂಡರು ಹಾಗು ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ| ಸಿಬಿ ರದ್ದು ವಿರುದ್ಧ ಸು.ಕೋರ್ಟ್‌ಗೆ ಹೋದರೆ ಅಧಿಕಾರ ಕಳೆದುಕೊಳ್ಳೋದು ಗ್ಯಾರಂಟಿ ಎಂದ ಸಂತೋಷ್ ಹೆಗ್ಡೆ