Site icon Vistara News

Road Accident : ಪ್ರತ್ಯೇಕ ಕಡೆ ಅಪಘಾತ; ಪಲ್ಟಿ ಹೊಡೆದ ಲಾರಿ, ಕಾರು

Road Accident

ಚಾಮರಾಜನಗರ: ಮೈಸೂರು-ಚಾಮರಾಜನಗರ ರಸ್ತೆಯ ಪಣ್ಯದಹುಂಡಿ ಸಮೀಪ ಓಮಿನಿಯೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನ ಕೈಗೆ ಏಟಾಗಿದ್ದು, ಮಹಿಳೆಗೆ ಗಂಭೀರ ಗಾಯವಾಗಿದೆ. ಕುಟುಂಬಸ್ಥರೊಂದಿಗೆ ದೇವಸ್ಥಾನಕ್ಕೆ ತೆರಳುವಾಗ ಈ ಅವಘಡ (Road Accident) ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಒಮ್ಮೆಲೆ ಕಾರು ಪಲ್ಟಿಯಾಗಿದೆ.

ಓಮಿನಿ ಕಾರು ಬದನಗುಪ್ಪೆ ಗ್ರಾಮದ ಬಸವ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಕಾರಲ್ಲಿ ಸಿಲುಕಿ ನರಳಾಡುತ್ತಿದ್ದವರನ್ನು ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ರವಾನಸಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಲ್ಟಿ ಹೊಡೆದ ಓಮಿನಿ ಕಾರು

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಅವೈಜ್ಞಾನಿಕ ರಸ್ತೆಗೆ ಉರುಳಿ ಬಿದ್ದ ಲಾರಿ

ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಅಮದಳ್ಳಿ ಗ್ರಾಮದ ಬಳಿ ಅವೈಜ್ಞಾನಿಕ ರಸ್ತೆಯಿಂದಾಗಿ ಹೆದ್ದಾರಿಯಲ್ಲಿ ಲಾರಿಯೊಂದು ಉರುಳಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ.

ಲಾರಿಯಲ್ಲಿ ಗೋವಾದಿಂದ ಬೆಂಗಳೂರಿಗೆ ಪೇಪರ್ ಬಂಡಲ್ ಸಾಗಿಸಲಾಗುತ್ತಿತ್ತು. ತಿರುವಿನಲ್ಲಿ ಸೂಚನಾ ಫಲಕ ಇಲ್ಲದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಆಗಿದೆ. ಸ್ಥಳೀಯರು ಚಾಲಕನ ಸಹಾಯಕ್ಕೆ ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version