Site icon Vistara News

Love Failure | ಮನನೊಂದು ನೇಣಿಗೆ ಕೊರಳೊಡ್ಡಿದ ಸಿದ್ದಾಪುರದ ವಿದ್ಯಾರ್ಥಿ

karwar suicide

ಸಿದ್ದಾಪುರ: ವಿಪರೀತ ತಲೆನೋವಿನಿಂದ ನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಸಗಾರದಲ್ಲಿ ನಡೆದಿದೆ. ಆದರೆ, ಪ್ರೇಮ ವೈಫಲ್ಯವೂ (Love Failure) ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಜಯಸೂರ್ಯ ಮಂಜುನಾಥ್ ನಾಯ್ಕ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸಿದ್ದಾಪುರ ತಾಲೂಕಿನ ಕೋಲಸಿರ್ಸಿ ಸರ್ಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿ ಉತ್ತಮ ಕ್ರೀಡಾಪಟು ಆಗಿದ್ದ. ಕಳೆದ ಕೆಲ ದಿನಗಳಿಂದ ಈತನಿಗೆ ವಿಪರೀತ ತಲೆ ನೋವು ಕಾಣಿಸಿಕೊಂಡು ಶಿರಸಿಯ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎನ್ನಲಾಗಿದೆ.

ಭಾನುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | Death News | ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

Exit mobile version