ಬೆಂಗಳೂರು: ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ, ಅತಿ ವಿಶಿಷ್ಟ ಸೇವಾ ಪದಕ ಮತ್ತು ಪರಮ ವಿಶಿಷ್ಟ ಸೇವಾ ಪದಕಗಳಿಂದ ಪುರಸ್ಕೃತರಾಗಿದ್ದ ವಿ.ಎಂ. ಪಾಟೀಲ್ ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು.
ಲೆಫ್ಟಿನೆಂಟ್ ಜನರಲ್ ವಿ.ಎಂ.ಪಾಟೀಲ್ ಅವರು 1962ರ ಭಾರತ-ಚೀನಾ ಯುದ್ಧ ಮತ್ತು 1965ರ ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಎರಡೂ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಿಯೆಟ್ನಾಂ, ಲಾವೋಸ್, ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳಲ್ಲಿ ಮೊದಲ ರಕ್ಷಣಾ ಸಲಹೆಗಾರರಾಗಿದ್ದರು. ಅಷ್ಟೇ ಅಲ್ಲ, ಇರಾನ್-ಇರಾಕ್ನಲ್ಲಿದ್ದ ವಿಶ್ವಸಂಸ್ಥೆಯ ಸೇನಾ ವೀಕ್ಷಕರ ಗುಂಪಿನ(Military Observers Group) ಕಮಾಂಡರ್ ಕೂಡ ಆಗಿದ್ದರು. ಅಖಿಲ ಭಾರತೀಯ ಪೂರ್ವ ಸೈನಿಕ ಸೇವಾ ಪರಿಷತ್ತಿನ ಅಧ್ಯಕ್ಷರಾಗಿಯೂ ಮತ್ತು ಫೋರಮ್ ಫಾರ್ ಇಂಟಿಗ್ರೇಟೆಡ್ ನ್ಯಾಶನಲ್ ಸೆಕ್ಯೂರಿಟಿ (ಸಮಗ್ರ ರಾಷ್ಟ್ರೀಯ ಭದ್ರತೆ ಫೋರಮ್)ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಹಿರಿಯ ಸೇನಾಧಿಕಾರಿ ವಿ.ಎಂ. ಪಾಟೀಲ್ ನಿಧನಕ್ಕೆ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸಿದ್ಧ ಎಂದಿದ್ದ ಸೇನಾ ಜನರಲ್ರನ್ನು ಅಪಹಾಸ್ಯ ಮಾಡಿದ ಬಾಲಿವುಡ್ ನಟಿ ರಿಚಾ ಚಡ್ಡಾ