ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಖನೌಗೆ ಹಾರಾಟ ಆರಂಭಿಸಿದ ಕೆಲವೇ ನಿಮಿಷದಲ್ಲಿ ಏರ್ ಏಷ್ಯಾ ವಿಮಾನ (Air Asia Flight) ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಹತ್ತೇ ನಿಮಿಷದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಗಿದೆ.
“ಐ5-2472 ವಿಮಾನವು ಶನಿವಾರ ಬೆಳಗ್ಗೆ 6.45ರ ಸುಮಾರಿಗೆ ಟೇಕ್ ಆಫ್ ಆಗಿದೆ. ಇದು 9 ಗಂಟೆ ಸುಮಾರಿಗೆ ಲಖನೌ ತಲುಪಬೇಕಿತ್ತು. ಆದರೆ, ಟೇಕಾಫ್ ಆದ ಹತ್ತೇ ನಿಮಿಷದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಲಾಗಿದೆ. ಆದರೆ, ವಿಮಾನದಲ್ಲಿದ್ದವರ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ” ಎಂದು ಏರ್ ಏಷ್ಯಾ ವಿಮಾನಯಾನ ಸಂಸ್ಥೆ ತಿಳಿಸಿದೆ.
ವಿಮಾನದಲ್ಲಿ ಸಣ್ಣ ಪ್ರಮಾಣದ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಪ್ರಕರಣದ ಕುರಿತು ತನಿಖೆ ನಡೆಸಲಾಗತ್ತಿದೆ. ಎಮರ್ಜನ್ಸಿ ಲ್ಯಾಂಡಿಂಗ್‌ನಿಂದಾಗಿ ಪ್ರಯಾಣಿಕರು ತುಸು ಆತಂಕಕ್ಕೊಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Air India: ಯುಎಸ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್ನಲ್ಲಿ ತುರ್ತು ಭೂಸ್ಪರ್ಶ