M B Patil: ಕಾನೂನು ಪ್ರಕಾರವೇ ಜಿಂದಾಲ್‌ ಕಂಪನಿಗೆ ಜಮೀನು: ಎಂ.ಬಿ. ಪಾಟೀಲ್ - Vistara News

ಕರ್ನಾಟಕ

M B Patil: ಕಾನೂನು ಪ್ರಕಾರವೇ ಜಿಂದಾಲ್‌ ಕಂಪನಿಗೆ ಜಮೀನು: ಎಂ.ಬಿ. ಪಾಟೀಲ್

M B Patil: ಸರ್ಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ ಎಂದು ಸಚಿವ ಎಂ‌.ಬಿ. ಪಾಟೀಲ್ ತಿಳಿಸಿದ್ದಾರೆ.

VISTARANEWS.COM


on

MB Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರ್ಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರ್ಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ. ಪಾಟೀಲ್ (M B Patil) ಸಮರ್ಥಿಸಿಕೊಂಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರ್ಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್‌ಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳ‌ ಕಾಲ ಇದನ್ನು ವೃಥಾ ಎಳೆದಾಡಿದ್ದೇವೆ’ ಎಂದಿದ್ದಾರೆ.

ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ಸರ್ಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ ಎಂದು ನುಡಿದರು.

ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ ಎಂದು ಹೇಳಿದರು.

ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್‌ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ

ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ‌.ಬಿ. ಪಾಟೀಲ್‌ ಹೇಳಿದ್ದಾರೆ.

ಮುಡಾ ಹಗರಣದ ನೆಪದಲ್ಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ನುಡಿದಿದ್ದಾರೆ.

ಇದನ್ನೂ ಓದಿ | MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

ಟಿ.ಜೆ. ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್.ಡಿ. ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

Shreyas Patel: ಕಾಂಗ್ರೆಸ್‌ ಸಂಸದ ಶ್ರೇಯಸ್‌ ಎಂ. ಪಟೇಲ್‌ ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ಹೈಕೋರ್ಟ್‌ ಅನ್ನು ಕೋರಿದ್ದಾರೆ.

VISTARANEWS.COM


on

Shreyas Patel
Koo

ಬೆಂಗಳೂರು: ಹಾಸನ ಸಂಸದ ಶ್ರೇಯಸ್‌ ಪಟೇಲ್‌ (Shreyas Patel) ಆಯ್ಕೆ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್‌ ಅವರಿಂದ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ಶ್ರೇಯಸ್‌ ಪಟೇಲ್‌ಗೆ ನೊಟೀಸ್ ಜಾರಿ ಮಾಡಿ, ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿಕೆ ಮಾಡಿದೆ.

ಸಂಸದರಾಗಿ ಶ್ರೇಯಸ್‌ ಎಂ. ಪಟೇಲ್‌ ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಆದಾಯದ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ | Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Prajwal Revanna Case
Prajwal Revanna Case

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Student Missing: ಓದಿಲ್ಲ ಎಂದು ಬೈದದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಅದೇ ರೀತಿ ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Karnataka Weather Forecast : ಹಾವೇರಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಭಾರಿ ಮಳೆಯಿಂದಾಗಿ (Rain News) ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಜೀವ ಭಯದಲ್ಲೇ ದಾಟುತ್ತಿದ್ದಾರೆ.

VISTARANEWS.COM


on

By

karnataka weather forecast
Koo

ಹಾವೇರಿ: ಭಾರಿ ಮಳೆಗೆ (Rain News) ಕೆರೆ ಕೋಡಿ ಬಿದ್ದು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ. ಸುಮಾರು 30 ಹೆಚ್ಚು ಮನೆಗಳಿಗೆ ಕೆರೆ ನೀರು ನುಗ್ಗಿದೆ. ಹಾವೇರಿಯ ಹಿರೇಕೇರೂರು ತಾಲೂಕಿನ ಕಚವಿ ಗ್ರಾಮವು ಜಲಾವೃತಗೊಂಡಿದೆ. ಕೊಪ್ಪದ ಕೆರೆ ಕೋಡಿ ಬಿದ್ದು ಕಚವಿ ಗ್ರಾಮದತ್ತ ನೀರು (Karnataka Weather Forecast) ನುಗ್ಗಿದೆ.

karnataka Weather Forecast
karnataka weather Forecast

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೊಪ್ಪದ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮದತ್ತ ಹರಿದು ಬಂದಿದೆ. ಕಚವಿ ಗ್ರಾಮಸ್ಥರ ಬದುಕು ಬೀದಿಗೆ ಬಿದಿದ್ದು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಪೂರ್ತಿ ನೀರು ಹೊರ ಹಾಕಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ಆದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಗ್ರಾಮದ ವಯೋವೃದ್ದರು, ವಾಹನ ಸವಾರರರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ.

karnataka weather Forecast
karnataka weather Forecast

ಬಳ್ಳಾರಿಯಲ್ಲಿ ಭತ್ತದ ಬೆಳೆಗೆ ಹಾನಿ

ಮಳೆಯಿಂದ ಹಳ್ಳಗಳು ತುಂಬಿ ನೀರು ಹರಿದು ಭತ್ತದ ಬೆಳೆಗೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಜಾಲಿಹಾಳ್ ಗ್ರಾಮದ ನಾಲ್ಕು ಹಳ್ಳಗಳ ರೈತರು ಜರ್ಜರಿತರಾಗಿದ್ದಾರೆ. ಭಾರಿ ಮಳೆಗೆ ಹಳ್ಳಗಳು ಹರಿದ ಪರಿಣಾಮ 500 ಎಕರೆ ಭತ್ತ ಜಲಾವೃತಗೊಂಡಿದೆ. ಜಾಲಿಹಾಳ್ ಗ್ರಾಮದ ಸುತ್ತ ಕಟ್ರಳ್ಳ, ಕೈಮುರುಕನಹಳ್ಳ, ಗಂಗಮ್ಮನಹಳ್ಳ, ಈರ್ಲಹಳ್ಳಗಳು ಹರಿಯುತ್ತಿದೆ. ಭತ್ತ ನಾಟಿ ಮಾಡಿದ ಕೆಲ ದಿನಗಳಿಂದ ಭರ ಸಿಡಿಲಾಗಿ ಎರಗಿದ ಹಳ್ಳದ ನೀರಿನಿಂದ ಲಕ್ಷಾಂತರ ರೂ.ಗಳು ನಷ್ಟವಾಗಿದೆ.

ರಸ್ತೆಯ ಮೇಲೂ ಹಳ್ಳ ಹರಿದು ಜಾಲಿಹಾಳ್ ಮತ್ತು ಕಾರೇಕಲ್ಲು ಮಧ್ಯದ ರಸ್ತೆ ಕೊಚ್ಚಿ ಹೋಗಿದೆ. ಎಕರೆಗೆ 15 ರಿಂದ 20 ಸಾವಿರ ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದರು. ಕಳೆದ ಐದಾರು ದಿನಗಳಿಂದ ರೈತರ ಗದ್ದೆಯಲ್ಲಿ ನೀರು ಹರಿದಿದ್ದರಿಂದ ಭತ್ತದ ಸಸಿಗಳು ಕೊಳೆತು ಹೋಗಿದೆ.

ಇದನ್ನೂ ಓದಿ: Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ತುಂಬಿ ಹರಿಯುತ್ತಿರುವ ಕರಡಿ ಗ್ರಾಮದ ಹಳ್ಳ

ಬಾಗಲಕೋಟೆಯ ಇಳಕಲ್ಲ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕರಡಿ ಗ್ರಾಮದ ಹಳ್ಳ ತುಂಬಿ ಹರಿದಿದೆ. ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿರುವ ಪರಿಣಾಮ ಕರಡಿ ಗ್ರಾಮಸ್ಥರ ಸಂಚಾರಕ್ಕೆ ಅಡತಡೆಯಾಗಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದ ನೀರಲ್ಲೇ ನಡೆದು ಗ್ರಾಮಕ್ಕೆ ಹೋಗುವಂತಾಗಿದೆ. ಪುಟ್ಟ ಮಗು ಹೊತ್ತು ಹಳ್ಳ ದಾಟೋಕೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಸುರಿದಾಗ ಕರಡಿ, ದಾಸಬಾಳ , ಪಾಲತಿ , ಕೊಣ್ಣೂರ ಹುನಗುಂದ ಸಂಪರ್ಕ ಕಡಿತಗೊಂಡಿದೆ. ಶೀಘ್ರ ಮೇಲ್ಸೇತುವೆ ಕಾರ್ಯ ಮುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಳೆ ಅಬ್ಬರದ ಜತೆಗೆ ಭೂ ಕಂಪನದ ಅನುಭವ

ಶುಕ್ರವಾರ ಕೊಡಗು, ಹಾಸನ, ಮೈಸೂರು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಹೆಬ್ಬಾಲೆ ಸಮೀಪ, ಸೂಳೆಕೋಟೆ, ಅಡಗೂರು‌‌ ಹಾಗೂ ಕಣಗಾಲು ಹಾಗೂ ಕುಶಾಲನಗರ ಜ್ಞಾನಭಾರತಿ ಶಾಲೆ ಹಿಂಭಾಗ, ಭಸವತ್ತೂರು ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಶುಕ್ರವಾರ ಮುಂಜಾನೆ 6.30ರ ಸಮಯಕ್ಕೆ 2ರಿಂದ3 ಸೆಕೆಂಡ್ ಭೂಮಿ ಕಂಪಿಸಿದೆ. ಭೂಕಂಪನ ಹಿನ್ನೆಲೆಯಲ್ಲಿ ಕೆಲಕಾಲ ಜನರು ಆತಂಕಗೊಂಡರು.

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

39 ವರ್ಷದ ಅನಿವಾಸಿ ಭಾರತೀಯ ಮಹಿಳೆಯ ಜನನಾಂಗದ ಮೂಲಕ ಹೊರಗೆ ಹಿಗ್ಗಿಕೊಂಡಿದ್ದ ಗರ್ಭಕೋಶವನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ಯಥಾಸ್ಥಿತಿಯಲ್ಲಿ ಇರಿಸಲು ಯಶಸ್ವಿಯಾಗಿದೆ. ಇದು ಅಪರೂಪದ ಶಸ್ತ್ರ ಚಿಕಿತ್ಸೆಯಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಸ್ತ್ರೀರೋಗ-ಆಂಕೊಲಾಜಿ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಹಿರಿಯ ಸಲಹೆಗಾರರಾದ ಡಾ. ರುಬಿನಾ ಶಾನವಾಜ್ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Fortis Hospital
Koo

ಬೆಂಗಳೂರು: 39 ವರ್ಷದ ಅನಿವಾಸಿ ಭಾರತೀಯ ಮಹಿಳೆಗೆ ತನ್ನ ಜನನಾಂಗದ ಮೂಲಕ ಹೊರಗೆ ಹಿಗ್ಗಿಕೊಂಡಿದ್ದ ಗರ್ಭಕೋಶವನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ರೋಬೋಟಿಕ್‌ ಮೂಲಕ ಶಸ್ತ್ರಚಿಕಿತ್ಸೆಯ ನಡೆಸಿ ಯಥಾಸ್ಥಿತಿಗೆ ಪುನಃಸ್ಥಾಪಿಸಿದೆ.

ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಸ್ತ್ರೀರೋಗ-ಆಂಕೊಲಾಜಿ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಹಿರಿಯ ಸಲಹೆಗಾರರಾದ ಡಾ. ರುಬಿನಾ ಶಾನವಾಜ್ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.

ಇದನ್ನೂ ಓದಿ: Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

ಈ ಕುರಿತು ಮಾತನಾಡಿದ ಡಾ. ರುಬಿನಾ, ಎರಡು ಮಕ್ಕಳನ್ನು ಹೊಂದಿರುವ 39 ವರ್ಷದ ಎನ್‌ಆರ್‌ಐ ಮಹಿಳೆಗೆ ನಾಲ್ಕು ವರ್ಷಗಳ ಹಿಂದೆಯೇ ಗರ್ಭಕೋಶವು ಜನನಾಂಗದ ಮೂಲಕ ಹೊರಗೆ ಚಾಚಿಕೊಂಡಿತ್ತು. ಸಾಮಾನ್ಯವಾಗಿ ಋತುಬಂಧ ನಿಂತ ಬಳಿಕ ಈ ಸಮಸ್ಯೆ ಕೆಲವರಲ್ಲಿ ಕಾಣಿಸುತ್ತದೆ. ಆದರೆ ಇವರಿಗೆ ಋತುಬಂಧ ನಿಲ್ಲುವ ಮೊದಲೇ ಗರ್ಭಕೋಶ ಜನನಾಂಗದ ಮೂಲಕ ಚಾಚಿಕೊಂಡಿತ್ತು. ಈ ಸಮಸ್ಯೆಯಿಂದ ಇವರು ದಿನನಿತ್ಯದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟೇ ಅಲ್ಲ, ಕಿಬ್ಬೊಟ್ಟೆ ನೋವು, ಹೊಟ್ಟೆ ಉಬ್ಬುವಿಕೆಯಿಂದ ತೊಡೆಗಳ ಅಸ್ವಸ್ಥತೆ, ಮೂತ್ರ ವಿಸರ್ಜನೆ ಮಾಡುವುದು ಸಹ ಕಷ್ಟಕರವಾಗಿತ್ತು. ಕೆಲವರು ಇದಕ್ಕೆ ಗರ್ಭಕೋಶವನ್ನೇ ತೆಗೆದುಹಾಕುವ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳುತ್ತಾರೆ. ಆದರೆ, ಫೋರ್ಟಿಸ್‌ ಆಸ್ಪತ್ರೆಯಲ್ಲಿ ಕೆಳಗೆ ಜಾರಿದ ಗರ್ಭಕೋಶವನ್ನು ರೋಬೋಟಿಕ್‌ ಸಹಾಯದ ಮೂಲಕ ಮೇಲೆತ್ತುವ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅಂತೆಯೇ ಇವರಿಗೂ ಸಹ ಹಲವು ಆಸ್ಪತ್ರೆಗಳಲ್ಲಿ ಗರ್ಭಕೋಶವನ್ನು ತೆಗೆಸುವಂತೆಯೇ ಸಲಹೆ ನೀಡಲಾಗಿತ್ತು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಇವರಿಗೆ “ರೋಬೋಟ್-ಅಸಿಸ್ಟೆಡ್ ಸ್ಯಾಕ್ರೋ-ಹಿಸ್ಟರೊಪೆಕ್ಸಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಲಾಯಿತು. ಈ ಶಸ್ತ್ರಚಿಕಿತ್ಸೆಯ ಮೂಲಕ ಕೆಳಗೆ ಜಾರಲಾದ ಗರ್ಭಕೋಶವನ್ನು ಅದೇ ಸ್ಥಳದಲ್ಲಿ ಕೂರಿಸಲಾಯಿತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

Continue Reading

ಕರ್ನಾಟಕ

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Self Harming: ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬ್ಯಾಟರಾಯನಪುರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

VISTARANEWS.COM


on

Self Harming
Koo

ಬೆಂಗಳೂರು: ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮೂರನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Self Harming) ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಮೇಲಿಂದ ಯುವತಿ ಜಿಗಿಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಖಾಸಗಿ ಶಾಲೆಯಲ್ಲಿ‌ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ 3ನೇ ಅಂತಸ್ತಿನಿಂದ ಏಕಾಏಕಿ ಜಿಗಿದಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬ್ಯಾಟರಾಯನಪುರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral Video
Viral Video


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading
Advertisement
Shreyas Patel
ಕರ್ನಾಟಕ12 mins ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ17 mins ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Fortis Hospital
ಬೆಂಗಳೂರು32 mins ago

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

Self Harming
ಕರ್ನಾಟಕ42 mins ago

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Village Administrative Officer
ಉದ್ಯೋಗ53 mins ago

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Bomb threat to Wonderla Amusement Park in Urdu
ರಾಮನಗರ1 hour ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ1 hour ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು1 hour ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest1 hour ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್1 hour ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌