ದಾವಣಗೆರೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ಅವರು ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ, ಆದರೆ ಪಕ್ಷ ಸಂಘಟನೆ ಮಾಡುವುದಿಲ್ಲ ಎಂದು ಹೇಳಿಲ್ಲ. ಅವರು ಇನ್ನೊಂದು ಬಾರಿ ಚುನಾವಣೆಗೆ ಸ್ಪರ್ಧಿಸಬೇಕು. ಇದು ಎಲ್ಲ ಶಾಸಕರ ಇಂಗಿತವಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಯಡಿಯೂರಪ್ಪ ಹೆಸರು ಕೇಳುತ್ತಲೇ ಭಾವುಕರಾದ ಅವರು ನಗರದಲ್ಲಿ ಶನಿವಾರ ಮಾತನಾಡಿ, ಜಾತ್ಯತೀತ ವ್ಯಕ್ತಿ, ಮಾಸ್ ಲೀಡರ್ ಯಡಿಯೂರಪ್ಪ ಪಕ್ಷವನ್ನು ಕಟ್ಟಿ ಬೆಳೆಸಿದರು. ನೂರಾರು ಪಾದಯಾತ್ರೆ ಮಾಡಿದ್ದಾರೆ. ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅವರು ಸಂಕಲ್ಪ ಮಾಡಿದ್ದಾರೆ. ರಾಜ್ಯಾದ್ಯಂತ ಅವರು ಪ್ರವಾಸ ಮಾಡಿ ಪಕ್ಷದ ಬಲವರ್ಧನೆಗಾಗಿ ಕೆಲಸ ಮಾಡುತ್ತಾರೆ ಎಂದರು.
ಚುನಾವಣೆ ಸ್ಪರ್ಧಿಸಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಇದು ನೂರಕ್ಕೆ ನೂರು ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಪರೂಪಕ್ಕೆ ಸತ್ಯ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ | ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಯಾರ‍್ಯಾರು ಏನೇನು ಹೇಳಿದರು?