ಕರ್ನಾಟಕ
Mad Love : ಮದುವೆ ಮನೆಗೆ ನುಗ್ಗಿ ಪಾಗಲ್ ಪ್ರೇಮಿಯ ಹುಚ್ಚಾಟ; ಅರ್ಧದಲ್ಲೇ ನಿಂತು ಹೋಯಿತು ಹುಡುಗಿ ಮದುವೆ
ಎಸ್ಸೆಸ್ಸೆಲ್ಸಿ ಕ್ಲಾಸ್‌ಮೇಟ್ ಮತ್ತೆ ಪರಿಚಯವಾದಾಗ ಅವಳಿಗೆ ತನ್ನ ಮೇಲೆ ಪ್ರೀತಿ ಇದೆ ಎಂದು ತಪ್ಪಾಗಿ ತಿಳಿದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮದುವೆಗೆ ಹೋಗಿ ಗಲಾಟೆ ಮಾಡಿದ್ದಾನೆ. ಈಗ ಮದುವೆ ನಿಂತು ಹೋಗಿದೆ. ಅವನು ಕತ್ತು ಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ.
ದೇವನಹಳ್ಳಿ: ಹುಚ್ಚು ಪ್ರೇಮಿಯೊಬ್ಬ ಕಲ್ಯಾಣ ಮಂಟಪಕ್ಕೆ ನುಗ್ಗಿ, ನಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಬೇರೊಬ್ಬ ಮದುವೆಯಾಗುತ್ತಿದ್ದಾನೆ ಎಂದು ಗಲಾಟೆ ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯದಲ್ಲಿ ಸಂಭವಿಸಿದೆ. ಹುಡುಗಿಯ ಕಡೆಯವರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಅದರೆ, ನಿಜಾಂಶವನ್ನು ವಿಮರ್ಶಿಸದೆ ಹುಡುಗನ ಕಡೆಯವರು ಮದುವೆಯನ್ನೇ ರದ್ದುಪಡಿಸಿ ತೆರಳಿದ್ದಾರೆ.
ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯುತ್ತಿತ್ತು. ಬುಧವಾರ ಸಂಜೆಯಿಂದಲೇ ಮದುವೆ ಸಂಭ್ರಮವಿತ್ತು. ಸಂಜೆ ಆರತಕ್ಷತೆ ನಡೆದು ಗುರುವಾಗ ಮದುವೆ ನಡೆಯಲಿತ್ತು.
ಈ ನಡುವೆ, ಬುಧವಾರ ರಾತ್ರಿ ಬೆಂಗಳೂರಿನ ನಿತೀಶ್ ಎಂಬ ಯುವಕನೊಬ್ಬ ಬಂದು ಹುಚ್ಚಾಟ ಮಾಡಿದ್ದಾನೆ. ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆಯಾಗ್ತಿದ್ದಾಳೆ ಅಂತ ಗಲಾಟೆ ಮಾಡಿದ ಆಗ ಮದುವೆ ನಿಲ್ಲಿಸಿ ಎಂದು ಸದ್ದು ಮಾಡಿದ್ದಾನೆ. ಹುಚ್ಚಾಟ ಮಾಡಿದ ಯುವಕನಿಗೆ ಮದುವೆ ಮನೆಯಲ್ಲಿದ್ದವರು ಸರಿಯಾಗಿ ಹೊಡೆದು ಬುದ್ಧಿ ಕಲಿಸಿದ್ದಾರೆ.
ನಿಜಕ್ಕೂ ಪ್ರೀತಿ ಇತ್ತಾ? ಹುಚ್ಚಾಟಕ್ಕೆ ಕಾರಣವೇನು?
ಮದುವೆಯಾಗಬೇಕಿದ್ದ ಯುವತಿ ಮತ್ತು ಈ ಯುವಕ ಹತ್ತನೇ ತರಗತಿಯಲ್ಲಿ ಸಹಪಾಠಿಗಳಾಗಿದ್ದರು. ಈ ನಡುವೆ ಕೆಲವರು 10ನೇ ತರಗತಿಯ ಸಹಪಾಠಿಗಳ ವಾಟ್ಸ್ ಆಪ್ ಗ್ರೂಪ್ ಒಂದನ್ನು ಆರಂಭಿಸಿದ್ದರು. ಇದರ ಮೂಲಕ ಇವರಿಗೆ ಮತ್ತೆ ಪರಿಚಯವಾಗಿದೆ. ಹಳೆ ಸ್ನೇಹದಿಂದ ಹುಡುಗಿ ಆತ್ಮೀಯವಾಗಿಯೇ ಮಾತನಾಡಿದ್ದಾಳೆ ಎನ್ನಲಾಗಿದೆ. ಆದರೆ, ಇದನ್ನೇ ಪ್ರೀತಿ ಎಂದು ತಿಳಿದುಕೊಂಡ ಆತ ಮನಸಿನಲ್ಲೇ ಮಂಡಿಗೆ ತಿನ್ನಲು ಶುರು ಮಾಡಿದ್ದ. ಜತೆಗೆ ಮದುವೆಯಾಗುವಂತೆ ಒತ್ತಾಯಿಸಲು ಶುರು ಮಾಡಿದ್ದ. ಆದರೆ, ಆಕೆ ಇದನ್ನು ನಿರಾಕರಿಸಿದ್ದಳು.
ಈ ನಡುವೆ, ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿತ್ತು. ಮದುವೆ ದಿನವೂ ಹತ್ತಿರ ಬಂತು. ಮದುವೆಯ ವಿಚಾರವನ್ನು ಯಾರಿಂದಲೋ ತಿಳಿದ ಆತ ಕಲ್ಯಾಣ ಮಂಟಪಕ್ಕೆ ಬಂದು ಗಲಾಟೆ ಮಾಡಿದ್ದಾನೆ.
ಅಷ್ಟೇ ಅಲ್ಲ, ಗಲಾಟೆಯ ನಡುವೆ ಚಾಕುವಿನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದಾನೆ. ಹೊಡೆತ ಮತ್ತು ಆತ್ಮಹತ್ಯೆ ಯತ್ನದಿಂದ ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ವಿಕ್ಟೋರಿಯಾ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ನಡುವೆ, ಗಲಾಟೆ ಹಿನ್ನೆಲೆಯಲ್ಲಿ ಹುಡುಗಿಯ ಮದುವೆ ಮುರಿದು ಬಿದ್ದಿದೆ. ರಾತ್ರಿ ಗಲಾಟೆಯ ಬಳಿಕ ಹುಡುಗನ ಕಡೆಯವರು ಬೆಳಗ್ಗೆಯೇ ಮನೆ ಖಾಲಿ ಮಾಡಿಕೊಂಡು ಹೋಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : Murder Case: ಬೆಂಗಳೂರಿನಲ್ಲಿ ಯುವತಿಯ ಬರ್ಬರ ಕೊಲೆ; ಪ್ರೀತಿ ನಿರಾಕರಿಸಿದ್ದಕ್ಕೆ 16 ಬಾರಿ ಚಾಕು ಇರಿದ ಪಾಗಲ್ ಪ್ರೇಮಿ
ಕರ್ನಾಟಕ
Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ
ಎಂಟು ವರ್ಷದ ಬಾಲಕನೊಬ್ಬನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ (Mysterious death). ಯಾರೋ ದುಷ್ಕರ್ಮಿಗಳು ಕೊಂದು ಎಸೆದಿರುವ ಶಂಕೆ ಇದೆ.
ಹುಬ್ಬಳ್ಳಿ: ಇಲ್ಲಿನ ದೊಡ್ಡ ಮನಿ ಕಾಲೊನಿಯ ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆತನನ್ನು ಕೊಲೆ ಮಾಡಿ ಎಸೆದಿರುವ (Mysterious death) ಸಂಶಯವಿದೆ.
ನದೀಮ್ ಹಸನಸಾಬ್ ಹುಬ್ಬಳ್ಳಿ (8) ಮೃತ ಬಾಲಕ. ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಈ ಹುಡುಗನಿಗಾಗಿ ಎಲ್ಲ ಕಡೆ ಹುಡುಕಾಟ ನಡೆದಿತ್ತು. ಪೋಷಕರು ಪೊಲೀಸರಿಗೂ ದೂರು ನೀಡಿದ್ದರು. ಆದರೆ, ಎಲ್ಲೂ ಆತ ಪತ್ತೆಯಾಗಿರಲಿಲ್ಲ.
ಶುಕ್ರವಾಗ ಕುರುಚಲು ಗಿಡಗಳಿರುವ ನಿರ್ಜನ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದ್ದು, ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
ಮೂರನೇ ತರಗತಿಯಲ್ಲಿ ಓದುತ್ತಿರುವ ಈ ಹುಡುಗನಿಗೆ ಶಾಲೆಗೆ ರಜೆ ಸಿಕ್ಕಿದೆ. ಹೀಗಾಗಿ ಆತ ಘಂಟಿಕೇರಿಯಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಸಂಜೆಯವರೆಗೂ ಆಟವಾಡುತ್ತಿದ್ದ ಆತ ಇದ್ದಕ್ಕಿದ್ದಂತೆಯೇ ನಾಪತ್ತೆಯಾಗಿದ್ದ. ಶುಕ್ರವಾರ ಮನೆಯಿಂದ ಸ್ವಲ್ಪ ದೂರದಲ್ಲಿರುವ ದೊಡ್ಡಮನಿ ಕಾಲನಿಯ ಪಾಳುಬಿದ್ದ ಜಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಎಸೆದಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆಯಾದರೂ ಇಷ್ಟು ಸಣ್ಣ ಹುಡುಗನನ್ನು ಯಾಕೆ ಕೊಲೆ ಮಾಡಿದರು ಎಂಬ ಸಂಶಯವಿದೆ. ಕುಟುಂಬದ ವಿವರಗಳು, ಈ ಭಾಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಹಂತಕರನ್ನು ಪತ್ತೆ ಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಕಾಂತಾರ’ ಚಿತ್ರದ ದೃಶ್ಯ ಕಳಿಸಿ ಕೊಲೆ ಬೆದರಿಕೆ! ದೂರು ದಾಖಲು
ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಕುಣಿಗಲ್‌ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್‌ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್ ಕುಮಾರ್ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್‌ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು
ಕರ್ನಾಟಕ
Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೇಡಹಳ್ಳಿಯಲ್ಲಿ ವಾರದ ಹಿಂದೆ ಸಂಭವಿಸಿದ ಗ್ಯಾಸ್ ಲೀಕೇಜ್ ಪ್ರಕರಣದಲ್ಲಿ ಗಾಯಗೊಂಡಿದ್ದವರು ದಿನಕ್ಕೊಬ್ಬರಂತೆ ಸಾಯುತ್ತಿದ್ದು, ಈಗ ಸಾವಿನ ಸಂಖ್ಯೆ ಏಳಕ್ಕೇರಿದೆ.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಳೆದ ಭಾನುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆ (Fire tragedy) ಪ್ರಕರಣವೊಂದು ಏಳು ಮಂದಿಯ ಪ್ರಾಣವನ್ನೇ ಕಸಿದಿದೆ. ಸಾವನ್ನಪ್ಪಿದವರೆಲ್ಲರೂ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರಾಗಿರುವುದರಿಂದ ಆರು ದಿನಗಳ ಕಳೆದರೂ ಇದರ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.
ಹೊಸಕೋಟೆ ತಾಲೂಕಿನ ಮೇಡಹಳ್ಳಿಯಲ್ಲಿ ಕಳೆದ ಭಾನುವಾರ ಶೆಡ್ ಒಂದರಲ್ಲಿ ರಾತ್ರಿ ಅನಿಲ ಸೋರಿಕೆ ಆಗಿದ್ದು, ರಾತ್ರಿ ಯಾರೋ ಕರೆಂಟ್ ಹಾಕಿದಾಗ ಬೆಂಕಿ ಹತ್ತಿಕೊಂಡು ಎಂಟು ಮಂದಿಗೆ ಬೆಂಕಿಯ ಗಾಯಗಳಾಗಿದ್ದವು. ಆರಂಭಿಕ ಹಂತದಲ್ಲಿ ಇದೇನೂ ತುಂಬ ದೊಡ್ಡ ಅವಘಡದಂತೆ ಕಾಣಿಸಿರಲಿಲ್ಲ. ಆದರೆ, ದಿನ ಕಳೆದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಒಬ್ಬೊಬ್ಬರಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಈಗ ಎಂಟು ಮಂದಿಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರನ್ನು ಕರೆದುಕೊಂಡು ಬಂದು ಇಲ್ಲಿ ಕಾಮಗಾರಿಗಳಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ಒಂದು ಶೆಡ್‌ನಲ್ಲಿ ವಾಸವಾಗಿರಲು ವ್ಯವಸ್ಥೆ ಮಾಡಲಾಗಿತ್ತು. ಕಳೆದ ಭಾನುವಾರ ರಾತ್ರಿಯೂ ಈ ಕಾರ್ಮಿಕರು ಮೇಡಹಳ್ಳಿಯ ಅಂತಹುದೇ ಒಂದು ಶೆಡ್‌ನಲ್ಲಿ ಮಲಗಿದ್ದರು. ಹೊರಗಡೆ ಊಟ ಮಾಡಿಕೊಂಡು ಬಂದು ಅವರು ಇಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಯಾವುದೋ ಕಾರಣದಿಂದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿತ್ತು.
ನಡುವೆ ರಾತ್ರಿ ಯಾರೋ ಲೈಟ್ ಆನ್ ಮಾಡಿದಾಗ ಸೋರಿಕೆಯಾದ ಅನಿಲದಿಂದಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಮಲಗಿದ್ದವರಿಗೆಲ್ಲ ಸುಟ್ಟ ಗಾಯಗಳಾಗಿತ್ತು. ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಆರೋಗ್ಯವಾಗಿದ್ದಾರೆ ಎಂಬಂತೆ ಕಂಡುಬಂದ ಇವರ ದೇಹದ ಒಳಗೆ ಬೆಂದ ಗಾಯಗಳು ಘಾಸಿಗೊಳಿಸಿತ್ತು. ಹೀಗಾಗಿ ದಿನ ಕಳೆದಂತೆ ಒಬ್ಬೊಬ್ಬರೇ ಪ್ರಾಣ ಕಳೆದುಕೊಳ್ಳಲಾರಂಭಿಸಿದ್ದಾರೆ. ಶುಕ್ರವಾರ ಏಳನೇ ಸಾವು ಸಂಭವಿಸಿದೆ.
ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತ ಕಾರ್ಮಿಕರು. ಈ ಘಟನೆಗೆ ಸಂಬಂಧಿಸಿ ಅರವಿಂದ ಗುಪ್ತಾ, ಮತ್ತು ಬಾಸ್ಕರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಿಂದ, ಬಿಹಾರದಿಂದ ಕಾರ್ಮಿಕರನ್ನು ಕರೆತರುವ ಲೇಬರ್ ಕಂಟ್ರಾಕ್ಟರ್‌ಗಳು ಮತ್ತು ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸಕ್ಕಾಗಿ ಕರೆತಂದು ಸೂಕ್ತ ಮೂಲ ಸೌಕರ್ಯ ನೀಡದ ಕಾರಣ ಅವಘಡ ಸಂಭವಿಸಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
ಕರ್ನಾಟಕ
Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಅರಕಲಗೂಡು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.
ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.
ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಗೋಪಾಲಕೃಷ್ಣ ರಾಜೀನಾಮೆ
ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.
ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ
ಕರ್ನಾಟಕ
Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ
Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.
ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.
ಕಾಂಗ್ರೆಸ್‌ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ7 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ16 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್23 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ19 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್19 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ