Site icon Vistara News

Sadashiva Swamiji Passes Away: ಮಾದಾಪಟ್ಟಣ ವಿರಕ್ತ ಮಠದ ಪೀಠಾಧ್ಯಕ್ಷ ಸದಾಶಿವ ಸ್ವಾಮೀಜಿ ಲಿಂಗೈಕ್ಯ

Sadashiva Swamiji Passes Away

#image_title

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಮಾದಾಪಟ್ಟಣದಲ್ಲಿರುವ ವಿರಕ್ತ ಮಠದ ಪೀಠಾಧ್ಯಕ್ಷರಾದ ಸದಾಶಿವ ಸ್ವಾಮೀಜಿ (೭೯) ಅವರು ಸೋಮವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಯವರು ಲಿಂಗೈಕ್ಯರಾಗಿರುವುದಕ್ಕೆ ಅಪಾರ ಭಕ್ತರು ಕಂಬನಿ ಮಿಡಿದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಲಿಂಗೈಕ್ಯರಾಗಿದ್ದಾರೆ. ಮಂಗಳವಾರ (ಫೆಬ್ರವರಿ ೭) ಮಾದಾಪಟ್ಟಣದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ.

ಇದನ್ನೂ ಓದಿ: Veera Mahanta Shivacharya Swamiji | ದೋರನಹಳ್ಳಿಯ ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Exit mobile version