Site icon Vistara News

Kasturirangan Report | ವರದಿ ವಿರೋಧಿಸಿ ಕೇಂದ್ರಕ್ಕೆ ಪತ್ರ; ಜೆ.ಸಿ. ಮಾಧುಸ್ವಾಮಿ

ಬೆಂಗಳೂರು: ಕಸ್ತೂರಿರಂಗನ್‌ ವರದಿ (Kasturirangan Report) ಆಧರಿಸಿ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ‌ಸ್ಪಷ್ಟಪಡಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಏನಿದು ಕಸ್ತೂರಿರಂಗನ್‌ ವರದಿ?

ಈ ಹಿಂದೆ ಕಸ್ತೂರಿರಂಗನ್‌ ನೇತೃತ್ವದ ಸಮಿತಿಯು ಪಶ್ಚಿಮ ಘಟ್ಟಗಳನ್ನು ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಅಧಿಸೂಚಿಸುವ ಬಗ್ಗೆ ವರದಿಯನ್ನು ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರವು ರಾಜ್ಯದ ಅಭಿಪ್ರಾಯವನ್ನೂ ಕೇಳಿತ್ತು. ಆದರೆ, ಈ ವರದಿ ಬಗ್ಗೆ ಮಲೆನಾಡು ಭಾಗದ ಶಾಸಕರ ಸಹಿತ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿರಂಗನ್‌ ವರದಿಯನ್ನು ವಿರೋಧಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿರುವ ಜನವಸತಿಗಳನ್ನು ಖಾಲಿ ಮಾಡಿಸಲು ಸಾಧ್ಯವಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಲಕ್ಷಾಂತರ ಮಂದಿಯ ಜೀವನ ಹಾಳಾಗುತ್ತದೆ. ಹೀಗಾಗಿ ಈ ವರದಿಯನ್ನು ವಿರೋಧಿಸಿ ಪತ್ರದ ಮೂಲಕ ಕೇಂದ್ರಕ್ಕೆ ಸ್ಪಷ್ಟಪಡಿಸಲಾಗುವುದು ಎಂದು ಹೇಳಿದರು.

ಅನಂತ್‌ಕುಮಾರ್‌ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್

ಜು.22 ಕೇಂದ್ರದ ಮಾಜಿ ಸಚಿವ ಅನಂತ್‌ಕುಮಾರ್‌ ಅವರ ಹುಟ್ಟುಹಬ್ಬವಾಗಿದ್ದು, ಆ ದಿನ ಅವರ ಹೆಸರಿನಲ್ಲಿ ಒಂದು ಒಳ್ಳೆಯ ಕೆಲಸಕ್ಕೆ ಚಾಲನೆ ನೀಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕುಂದಾನ ಹೋಬಳಿ ಹೆಗ್ಗನಹಳ್ಳಿ ಗ್ರಾಮದಲ್ಲಿ ಸಂಶೋಧನಾ ತರಬೇತಿ ನೀಡುವ ನಿಟ್ಟಿನಲ್ಲಿ ಅನಂತಕುಮಾರ್ ಪ್ರತಿಷ್ಠಾನಕ್ಕೆ 3.10 ಎಕರೆ ಮಂಜೂರು ಮಾಡಲಾಗಿದೆ. ಸಂಶೋಧನಾ ಕೇಂದ್ರದ ಮೂಲಕ ಹಸಿರು ಜೀವನ ಶೈಲಿ ಅಳವಡಿಕೆ ಮತ್ತು ಸ್ವಸ್ಥ ಸಮಾಜ ನಿರ್ಮಾಣ ಮಾಡುವುದಾಗಿ ಮಾಧುಸ್ವಾಮಿ ತಿಳಿಸಿದರು.

ಸಂಪುಟದ ಇತರ ಪ್ರಮುಖ ನಿರ್ಣಯಗಳು:

ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ: ವರದಿ ಕೈಬಿಡುವಂತೆ ಕಾನೂನು ಹೋರಾಟ

Exit mobile version