ಮಡಿಕೇರಿ: ‘ಚಾರಿತ್ರಿಕ ದಾಖಲೆಗಳಲ್ಲಿ ಕೊಡಗು ಜಿಲ್ಲೆಯ ಇತಿಹಾಸ’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಪದ್ಮಶ್ರೀ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಇತಿಹಾಸ ವಿಭಾಗ ಇವರ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಚಾರ ಸಂಕಿರಣದ ಅಂಗವಾಗಿ ಏರ್ಪಡಿಸಿದ್ದ ಅಜಯ್ ರಾವ್ ಅವರ ನಾಣ್ಯಗಳ ಪ್ರದರ್ಶನವನ್ನು ಅತಿಥಿಗಳಿಂದ ಉದ್ಘಾಟಿಸಿ ವೀಕ್ಷಿಸಿಸಲಾಯಿತು.
ತನ್ನದೇ ಆದ ಸಂಸ್ಕೃತಿಯನ್ನು ಹೊಂದಿರುವ ಕೊಡಗನ್ನು ವಿಭಿನ್ನ ರಾಜ ಮನೆತನಗಳು ಆಳ್ವಿಕೆ ಮಾಡಿವೆ. ರಮ್ಯಾ ರಮಣೀಯ ಸೌಂದರ್ಯವನ್ನು ಹೊಂದಿರುವ ಕೊಡಗು ವಿಶೇಷ ಸಂಸ್ಕೃತಿಯ ಮೂಲಕ ದೇಶದಲ್ಲಿ ಗುರುತಿಸಿಕೊಂಡಿದೆ. ಕೊಡಗಿನ ವಿಶೇಷ ಕಲೆಯಾದ ಉಮ್ಮತ್ತಾಟ್‌ನಿಂದ ದೇಶ, ವಿದೇಶದಲ್ಲಿ ಹೆಸರು ಮಾಡಿದೆ ಎಂದರು.
ಇದನ್ನೂ ಓದಿ | Kannada New Movie: ‘ಹೊಂದಿಸಿ ಬರೆಯಿರಿ’ ಟ್ರೈಲರ್ ಬಿಡುಗಡೆಗೊಳಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಕೊಡಗಿನ ಮಕ್ಕಳು ಕೊಡಗಿನ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಕೊಡಗಿಗೆ ಏಳಿಗೆ ತರುವಲ್ಲಿ ಯಶಸ್ವಿಯಾಗಬೇಕು ಎಂದು ಪದ್ಮಶ್ರೀ ವಿಜೇತೆ ಐಮುಡಿಯಂಡ ರಾಣಿ ಮಾಚಯ್ಯ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ | DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ
ಮೈಸೂರಿನ ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಮಾತನಾಡಿ, ಚಾರಿತ್ರಿಕ ದಾಖಲೆ ಸಂಗ್ರಹಿಸಲು ಪ್ರತ್ಯೇಕ ಸಂಸ್ಥೆಯ ರಚನೆಯಾಗಬೇಕು. ಚಾರಿತ್ರಿಕ ದಾಖಲೆಗಳಿಂದಲೇ ಮುಂದಿನ ಪೀಳಿಗೆಯ ಅಭಿವೃದ್ಧಿ ಸಾಧ್ಯ. ಭಾರತಕ್ಕೆ ರಾಜ್ಯ ಪತ್ರಾಗಾರ ಇಲಾಖೆಯು ಒಂದು ಕೋಟಿ ಹತ್ತು ಲಕ್ಷ ದಾಖಲೆಗಳನ್ನು ಒದಗಿಸುವುದರಲ್ಲಿ ಮೇಲುಗೈ ಸಾಧಿಸಿರುವುದು ಒಂದು ವಿಶೇಷ ಸಂಗತಿಯಾಗಿದೆ ಎಂದು ಹೇಳಿದರು.