ಗಂಗಾವತಿ: ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಬಳಿ ಇರುವ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯ ಅಂಜನಾದ್ರಿ (Anjanadri) ಪರ್ವತಕ್ಕೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶನಿವಾರ ಭೇಟಿ ನೀಡಿದರು.
570ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹೊಂದಿರುವ ಅಂಜನಾದ್ರಿ ಪರ್ವತವನ್ನು ದೇವೇಂದ್ರ ಫಡ್ನವಿಸ್ ಅವರು ಹತ್ತುವ ಬದಲಿಗೆ ಬೆಟ್ಟದ ಕೆಳಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯಿಂದ ಫಡ್ನವಿಸ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದನ್ನೂ ಓದಿ: IT Raid : ಮೈಸೂರು, ಬೆಂಗಳೂರಲ್ಲಿ ಐಟಿ ದಾಳಿ; 20 ಕೋಟಿ ಮೌಲ್ಯದ ನಗ, ನಗದು ಸೀಜ್
ಬಳಿಕ ಮಾತನಾಡಿದ ದೇವೇಂದ್ರ ಫಡ್ನವಿಸ್, ಚುನಾವಣೆ ಬಳಿಕ ಮತ್ತೊಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತೇನೆ. ಪ್ರಶಾಂತ ವಾತಾವರಣದಲ್ಲಿರುವ ಅಂಜನಾದ್ರಿ ದೇಗುಲ ಮನಸಿಗೆ ಆಹ್ಲಾದವನ್ನು ನೀಡುತ್ತದೆ ಎಂದು ಬಣ್ಣಿಸಿದರು.
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ, ದೆಹಲಿಯ ವಿಪಕ್ಷ ನಾಯಕ, ಬಿಜೆಪಿ ಶಾಸಕ ಅಜಯ್ ಮಹರ್ ಸೇರಿದಂತೆ ಸಂಘ ಪರಿವಾರದ ಮುಖಂಡರು ಸಾಥ್ ನೀಡಿದರು.