ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣಾರ್ಹತೆಯ ಕುರಿತ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವುದಿಲ್ಲ ಎಂದು ತಿಳಿದುಬಂದಿದೆ.
ಈ ಹಿಂದೆ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ವಿಚಾರಣೆಯನ್ನು ನ.23ಕ್ಕೆ ಮುಂದೂಡಲಾಗಿತ್ತು. ನ್ಯಾ. ಕೆ.ಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ಇದನ್ನು ಮುಂದೂಡಿತ್ತು. ಆದರೆ ಇಂದು ನ್ಯಾ. ಕೆ.ಎಂ ಜೋಸೆಫ್ ಬೇರೊಂದು ಪ್ರಕರಣದಲ್ಲಿ ಸಾಂವಿಧಾನಿಕ ಪೀಠದಲ್ಲಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕೇಸ್ ವಿಚಾರಣೆ ನಡೆಯುತ್ತಿಲ್ಲ. ಮುಂದಿನ ವಿಚಾರಣೆ ಯಾವತ್ತು ಎಂಬ ಬಗ್ಗೆಯೂ ಪ್ರಸ್ತಾಪಿಸಿಲ್ಲ.
1956ರ ರಾಜ್ಯ ಪುನರ್ವಿಂಗಡನಾ ಕಾಯ್ದೆಯನ್ನೇ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ಈ ಗಡಿ ವಿವಾದದ ಅರ್ಜಿ ವಿಚಾರಣೆ(Maintainability)ಯನ್ನು ಸುಪ್ರೀಂ ಕೋರ್ಟ್ ನಡೆಸಬೇಕೇ ಅಥವಾ ಬೇಡವೇ ಎಂಬುದರ ಕುರಿತೇ ಇತ್ಯರ್ಥವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಕಾನೂನು ತಂಡಗಳನ್ನು ಸಿದ್ಧಪಡಿಸಲಾಗಿತ್ತು.
ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಗಡಿ ವಿವಾದ, ಮಹಾರಾಷ್ಟ್ರದ ಹತಾಶ ಯತ್ನ