Mahesh Tenginakai to be fielded by BJP for Hubballi Dharwad centre Karnataka Election 2023 updates Karnataka Election 2023: ಹುಬ್ಬಳ್ಳಿ-ಧಾರವಾಡ ಕೇಂದ್ರಕ್ಕೆ ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ ಕಣಕ್ಕೆ?; ಶೆಟ್ಟರ್‌ಗೆ ಪ್ರತಿತಂತ್ರ - Vistara News

ಕರ್ನಾಟಕ

Karnataka Election 2023: ಹುಬ್ಬಳ್ಳಿ-ಧಾರವಾಡ ಕೇಂದ್ರಕ್ಕೆ ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ ಕಣಕ್ಕೆ?; ಶೆಟ್ಟರ್‌ಗೆ ಪ್ರತಿತಂತ್ರ

Assembly Election: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ಗುಡ್‌ಬೈ ಹೇಳಿರುವ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರನ್ನು ಕಣಕ್ಕಿಳಿಸುವ ತಯಾರಿಯನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

BJP releases third list of 10 candidates for Karnataka polls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದರಿಂದ ಅವರು ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲೇ ಈ ಕ್ಷೇತ್ರಕ್ಕೆ ಬಿಜೆಪಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರಿಗೆ ಪಕ್ಷದಿಂದ ಟಿಕೆಟ್‌ ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಈ ಕುರಿತು ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ನಿವಾಸದಲ್ಲಿ ಭಾನುವಾರ (ಏ.16) ರಹಸ್ಯ ಸಭೆ ನಡೆಸಲಾಗಿದ್ದು, ಈ ಚರ್ಚೆಯಲ್ಲಿ ‌ಮಹೇಶ್ ಟೆಂಗಿನಕಾಯಿ ಸಹ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ನತ್ತ ಜಗದೀಶ್‌ ಶೆಟ್ಟರ್‌?; ಹುಬ್ಬಳ್ಳಿಯಲ್ಲಿ ಕಾಯುತ್ತಿವೆ ಕೈ ಪಕ್ಷದ 2 ಹೆಲಿಕಾಪ್ಟರ್‌!

ಬಿಜೆಪಿ‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಮಹೇಶ್ ಟೆಂಗಿನಕಾಯಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಆಪ್ತರೂ ಆಗಿದ್ದಾರೆ. ಅಲ್ಲದೆ, ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಇದೀಗ ಶೆಟ್ಟರ್ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಟೆಂಗಿನಕಾಯಿ ಹಾದಿ ಸುಗಮವಾದಂತೆ ಆಗಿದೆ.

ಭಾನುವಾರ ಮತ್ತೊಂದು ಸಭೆ

ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿರುವ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು ಮತ್ತೊಂದು ಸಭೆ ನಡೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ನಿವಾಸದಲ್ಲಿ ಭಾನುವಾರ ಸಭೆ ನಡೆಸಲಾಗುತ್ತಿದ್ದು, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್,‌ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌, ಸಚಿವ ಗೋವಿಂದ ಕಾರಜೋಳ ಹಾಗೂ ಮಹೇಶ್ ಟೆಂಗಿನಕಾಯಿ ರಹಸ್ಯ ಸಭೆಯಲ್ಲಿ ಭಾಗಿಯಾಗಿದ್ದಾರೆನ್ನಲಾಗಿದೆ.

ಬಣಜಿಗ ಸಮುದಾಯದ ದಾಳ

ಮಹೇಶ್ ಟೆಂಗಿನಕಾಯಿ ಸಹ ಜಗದೀಶ್ ಶೆಟ್ಟರ್ ಅವರ ಸಮುದಾಯಕ್ಕೇ ಸೇರಿದವರಾಗಿದ್ದಾರೆ. ಇಬ್ಬರೂ ಲಿಂಗಾಯತ ಬಣಜಿಗ ಸಮಾಜದವರಾಗಿದ್ದರಿಂದ ಈಗ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ತಪ್ಪಿಸಲಾಗಿದೆ ಎಂಬ ಅಪಖ್ಯಾತಿಯಿಂದ ಹೊರಬರಲು ಸೂಕ್ತವಾದ ದಾರಿ ಇದುವೇ ಎಂಬ ತೀರ್ಮಾನಕ್ಕೆ ಬಿಜೆಪಿ ಪ್ರಮುಖರು ಬಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ಮತ್ತೊಬ್ಬ ಬಣಜಿಗ ನಾಯಕನಿಗೆ ಟಿಕೆಟ್ ಕೊಟ್ಟರೆ ಸಾರ್ವಜನಿಕವಾಗಿ ಯಾವುದೇ ರೀತಿಯ ಹಾನಿಯಾಗದಂತೆ ತಡೆಯಲು ತಂತ್ರವನ್ನು ಹೂಡಲಾಗುತ್ತಿದೆ ಎಂದು ಹೇಳಲಾಗಿದೆ.

ಬಣಜಿಗ ಲಿಂಗಾಯತ ಸಮುದಾಯದವರಾಗಿರುವ ಶೆಟ್ಟರ್‌ ಪಕ್ಷೇತರ ಇಲ್ಲವೇ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ಲಿಂಗಾಯತ ಸಮುದಾಯದವರಿಗೆ ತಪ್ಪು ಸಂದೇಶ ಹೋದಂತೆ ಆಗುತ್ತದೆ. ಈಗಾಗಲೇ ಲಿಂಗಾಯತ ಸಮುದಾಯದ ಹಿರಿಯ ನಾಯಕ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಸಲಾಗಿದೆ. ಈಗ ಮತ್ತೊಬ್ಬ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿರುವುದು ರಾಜ್ಯದಲ್ಲಿ ಬೇರೆಯದೇ ಸಂದೇಶವನ್ನು ರವಾನೆ ಮಾಡಿದಂತೆ ಆಗುತ್ತದೆ ಎಂಬ ಭಯ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಲಾಗುತ್ತಿದ್ದು, ಅದಕ್ಕೆ ಅಗತ್ಯ ತಂತ್ರಗಳನ್ನು ಹೆಣೆಯಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Karnataka Election 2023: ಜಗದೀಶ್‌ ಶೆಟ್ಟರ್‌ ಅಂತಹ ದೊಡ್ಡ ನಾಯಕರು ನಮ್ಮ ಪಕ್ಷಕ್ಕೆ ಬೇಡ: ಎಚ್.ಡಿ. ಕುಮಾರಸ್ವಾಮಿ

ಈ ಕಾರಣಕ್ಕಾಗಿಯೇ ಶೆಟ್ಟರ್‌ ಸಮುದಾಯದವರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದರೆ ಹುಬ್ಬಳ್ಳಿ – ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಸಹಿತ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳು ಚದುರಿಹೋಗದಂತೆ ಏನು ಮಾಡಬಹುದು ಎಂಬ ನಿಟ್ಟಿನಲ್ಲೂ ಬಿಜೆಪಿ ಚಿಂತನೆಯನ್ನು ನಡೆಸುತ್ತಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Bhavani Revanna: ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

VISTARANEWS.COM


on

bhavani revanna case
Koo

ಹಾಸನ: ನಿನ್ನೆ ಭವಾನಿ ರೇವಣ್ಣ (Bhavani revanna) ಅವರ ಜಾಮೀನು ಅರ್ಜಿ (bail plea) ರದ್ದಾಗಿದ್ದು, ಇಂದು ಅವರ ಬಂಧನ (Arrest) ಸಾಧ್ಯತೆ ಇದೆ. ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸಿನಲ್ಲಿ (kidnap case) ಎಸ್‌ಐಟಿಗೆ (SIT) ಭವಾನಿ ರೇವಣ್ಣ ಬೇಕಾಗಿದ್ದು, ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ಹೊಳೆನರಸೀಪುರದ ಮನೆಯಲ್ಲೂ, ಬೆಂಗಳೂರಿನ ಮನೆಯಲ್ಲೂ ಕಾಣಿಸಿಕೊಂಡಿಲ್ಲ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಿನ್ನೆ ರದ್ದಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದ್ದು, ಅದಕ್ಕಾಗಿ ಎಸ್ಐಟಿ ಬಲೆ ಬೀಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್ಐಟಿ ಟೀಂ ಆಗಮಿಸಲಿದೆ. ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು.

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ಬೆಂಗಳೂರು

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

KCET Result 2024 : ಇಂಜಿನಿಯರಿಂಗ್‌ (Engineering) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಕೆ-ಸಿಇಟಿ (Karnataka CET 2024) ಪರೀಕ್ಷೆ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಬಹುತೇಕ ಜೂನ್‌ ಮೊದಲ ವಾರವೇ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

By

KCET Result 2024
Koo

ಬೆಂಗಳೂರು: 2024ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (CET Result) ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಇದೀಗ ಇವರೆಲ್ಲರ ಭವಿಷ್ಯವು ಜೂನ್‌ ಮೊದಲ ವಾರದಲ್ಲೇ (KCET Result 2024) ನಿರ್ಧಾರವಾಗಲಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳ ಚಿತ್ತ ಸಿಇಟಿ ಫಲಿತಾಂಶದತ್ತ ನೆಟ್ಟಿದೆ.

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ಇದನ್ನೂ ಓದಿ: Liquor Ban : ಡ್ರೈ ಡೇ ಎಫೆಕ್ಟ್‌; ನಾಳೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್‌

ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5 ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿತ್ತು.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

India Yamaha: ಬೆಂಗಳೂರಿನಲ್ಲಿ ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್‌ನ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದೆ.ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Yamaha has opened a new Blue Square outlet in Bengaluru
Koo

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (India Yamaha Motor Pvt Ltd) ಪ್ರೈ. ಲಿಮಿಟೆಡ್, ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದ್ದು, ಈ ಔಟ್‌ಲೆಟ್ 7,100 ಚದರ ಅಡಿಯಷ್ಟು ವಿಶಾಲವಾಗಿದೆ. ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಬ್ಲೂ ಸ್ಕ್ವೇರ್ ಔಟ್‌ಲೆಟ್ ಯಮಹಾ ಬ್ರ್ಯಾಂಡ್‌ನ ಹುಮ್ಮಸ್ಸನ್ನು ದಾಟಿಸುತ್ತದೆ ಮತ್ತು ಗ್ರಾಹಕರಿಗೆ ಸಂಪೂರ್ಣ ಸೇವೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ವೈಯಕ್ತೀಕರಿಸಿದ ವಿಧಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದ್ದು, ಪ್ರತಿಯೊಬ್ಬ ಗ್ರಾಹಕರು ತೃಪ್ತಿಕರ ಸೇವೆ ಪಡೆಯಲಿದ್ದಾರೆ. ಈ ವಿಶೇಷವಾದ ಔಟ್‌ಲೆಟ್‌ಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಅನುವು ಮಾಡಿಕೊಟ್ಟಿರುವ ಬ್ರ್ಯಾಂಡ್ ಗ್ರಾಹಕರಿಗೆ ಯಮಹಾ ರೇಸಿಂಗ್ ಜಗತ್ತಿಗೆ ಪ್ರವೇಶಿಸುವ ಅವಕಾಶವನ್ನೂ ನೀಡುತ್ತಿದೆ.

ಇದನ್ನೂ ಓದಿ: Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಈ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರತಿಯೊಂದು ವಿಭಾಗವನ್ನೂ ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ಜಾಗತಿಕ ಬ್ರ್ಯಾಂಡ್‌ ಆದ ಯಮಹಾ ಜತೆಗೆ ಸಂಬಂಧ ಹೊಂದುವ ಹೆಮ್ಮೆಯ ಭಾವವನ್ನು ಮೂಡಿಸುವಂತೆ ಚಿಂತನಶೀಲವಾಗಿ ರಚಿಸಲಾಗಿದೆ. ಯಮಹಾ, ಬ್ರ್ಯಾಂಡ್‌ನ ಹೆಮ್ಮೆಯ ರೇಸಿಂಗ್ ಪರಂಪರೆಯನ್ನು ಪ್ರತಿನಿಧಿಸುವ “ಬ್ಲೂ (ನೀಲಿ)” ಬಣ್ಣ ಮತ್ತು ಗ್ರಾಹಕರು ಯಮಹಾದ ಹರ್ಷದಾಯಕ ಮತ್ತು ಸೊಗಸಾದ ಶ್ರೇಣಿಯ ದ್ವಿಚಕ್ರ ವಾಹನಗಳೊಂದಿಗೆ ಸಂಪರ್ಕ ಸಾಧಿಸಲು ರಚಿಸಲಾದ ಪ್ಲಾಟ್‌ಫಾರ್ಮ್ ಅನ್ನು ಸಂಕೇತಿಸುವ “ಸ್ಕ್ವೇರ್” ಸಂಯೋಜನೆಯ ಮೂಲಕ ಗ್ರಾಹಕರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿದೆ.

ಉದ್ಯಮ-ಪ್ರಧಾನ ಅನುಭವವನ್ನು ಒದಗಿಸುವುದರ ಜತೆಗೆ, ಈ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಬ್ಲೂ ಸ್ಟ್ರೀಕ್ಸ್ ರೈಡರ್‌ಗಳಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಯಮಹಾದ ವಿಶೇಷ ಬೈಕರ್ ಸಮುದಾಯದ ಸವಾರರು ಇತರ ಸವಾರರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಹೊಸ ಔಟ್‌ಲೆಟ್ ಸೇರಿದಂತೆ ಈಗ ಕರ್ನಾಟಕ ಮಾರುಕಟ್ಟೆಯಲ್ಲಿ ಯಮಹಾ 23 ಎಕ್ಸ್‌ಕ್ಲೂಸಿವ್ ಬ್ಲೂ ಸ್ಕ್ವೇರ್ ಶೋ ರೂಂಗಳನ್ನು ಹೊಂದಿದೆ.

ಯಮಹಾದ ಸೂಪರ್‌ಸ್ಪೋರ್ಟ್ ಆರ್3 (321ಸಿಸಿ), ಟಾರ್ಕ್-ರಿಚ್ ಎಂಟಿ -03 (321 ಸಿಸಿ) ಮತ್ತು ಮ್ಯಾಕ್ಸಿ-ಸ್ಪೋರ್ಟ್ಸ್ ಏರಾಕ್ಸ್(155 ಸಿಸಿ) ಮತ್ತು ಏರಾಕ್ಸ್ ವರ್ಷನ್ ಎಸ್ (155 ಸಿಸಿ)ಗಳನ್ನು ಬ್ಲೂ ಸ್ಕ್ವೇರ್ ಶೋರೂಮ್‌ಗಳ ಮೂಲಕ ವಿಶೇಷವಾಗಿ ಮಾರಾಟ ಮಾಡಲಾಗುತ್ತದೆ. ಈ ಪ್ರೀಮಿಯಂ ಔಟ್‌ಲೆಟ್‌ಗಳು ವೈಝಡ್‌ಎಫ್‌-ಆರ್‌15 ಎಂ (155 ಸಿಸಿ), ವೈಝಡ್‌ಎಫ್‌-ಆರ್‌15 ವಿ4 (155ಸಿಸಿ), ವೈಝಡ್‌ಎಫ್‌-ಆರ್‌15ಎಸ್ ವಿ3 (155 ಸಿಸಿ), ಎಂಟಿ-15 ವಿ2 (155 ಸಿಸಿ), ಬ್ಲೂ ಕೋರ್ ತಂತ್ರಜ್ಞಾನ ಆಧರಿತ ಮಾಡೆಲ್ ಗಳಾದ ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 4.0 (149 ಸಿಸಿ), ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಕ್ಸ್ (149 ಸಿಸಿ), ಮತ್ತು ಸ್ಕೂಟರ್ ಗಳಾದ ಫ್ಯಾಸಿನೋ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ ಸ್ಟ್ರೀಟ್ ರಾಲಿ 125 ಎಫ್ಐ ಹೈಬ್ರಿಡ್ (125 ಸಿಸಿ) ಮುಂತಾದ ನವೀಕರಿಸಿದ ಲೈನ್-ಅಪ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ಇದನ್ನೂ ಓದಿ: Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಹೆಚ್ಚು ಸಮಗ್ರವಾದ ಅನುಭವವನ್ನು ಒದಗಿಸುವ ಭರವಸೆಯನ್ನು ನೀಡುತ್ತಾ, ಈ ಪ್ರೀಮಿಯಂ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಯಮಹಾದ ನಿಜವಾದ ಆ್ಯಕ್ಸೆಸರೀಸ್‌ಗಳು, ಅಧಿಕೃತ ಉಡುಪುಗಳು ಮತ್ತು ಯಮಹಾ ನಿಜವಾದ ಬಿಡಿಭಾಗಗಳನ್ನು ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡುತ್ತವೆ.

Continue Reading
Advertisement
bhavani revanna case
ಪ್ರಮುಖ ಸುದ್ದಿ6 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು6 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ26 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ32 mins ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ1 hour ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ2 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ3 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ3 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ8 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌