Site icon Vistara News

Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

MLC Dinesh Gooligowda discuss with Chaluvarayaswamy and Satish jarkiholi

ಬೆಳಗಾವಿ: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ (Elephant Arjuna) ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ (Elephant capture operation) ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅರ್ಜುನನ ಸೇವೆಯನ್ನು ಪರಿಗಣಿಸಿ ಪ್ರತಿ ವರ್ಷ ಮೈಸೂರು ದಸರೆಯಲ್ಲಿ ಮಾವುತರಿಗೆ “ಅರ್ಜುನ”ನ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ (MLC Dinesh Gooligowda) ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಿರುವ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ, ಅರ್ಜುನ ಆನೆಗೂ ಮೈಸೂರಿಗೂ ಅವಿನಾಭಾವ ಸಂಬಂಧ ಇದೆ. ಅಲ್ಲದೆ, ದಸರಾ ಜಂಬೂ ಸವಾರಿ ವೇಳೆ ಅರ್ಜುನನ ಕೊಡುಗೆ ಸಾಕಷ್ಟು ಇದೆ. ಆತ 8 ಬಾರಿ ನಾಡಿನ ಅಧಿ ದೇವತೆ, ತಾಯಿ ಚಾಮುಂಡೇಶ್ವರಿ ದೇವಿಯ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದ್ದಾನೆ. ರಾಜಗಾಂಭೀರ್ಯದಿಂದ ಕಾರ್ಯನಿರ್ವಹಿಸಿದ್ದಾನೆ ಎಂದು ಅರ್ಜುನನ ಕಾರ್ಯವೈಖರಿ ಬಗ್ಗೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ

ದಸರಾ ಮಾತ್ರವಲ್ಲದೆ ನೂರಾರು ಕಾಡಾನೆ ಕಾರ್ಯಾಚರಣೆಯಲ್ಲೂ ಭಾಗಿಯಾಗಿದ್ದಾನೆ. ಆಗ ಸಾಕಷ್ಟು ಸಂದರ್ಭದಲ್ಲಿ ಇತರ ಆನೆಗಳು, ಆನೆಯ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲಿ ಅವರ ಪ್ರಾಣವನ್ನು ಅರ್ಜುನ ಕಾಪಾಡಿದ್ದಾನೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ತಿಳಿಸಿದ್ದಾರೆ.

ಕಳೆದ 23 ವರ್ಷಗಳಿಂದ ಅರ್ಜುನನಿಗೂ ಹಾಗೂ ಮೈಸೂರು ದಸರೆಗೂ ಅವಿನಾಭಾವ ನಂಟು ಇತ್ತು. ಹೀಗಾಗಿ ಅರ್ಜುನನ ಹೆಸರು ಮೈಸೂರಿನ ದಸರೆಯ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವಂತಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿ ವರ್ಷ ಅರ್ಜುನನ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿಯನ್ನು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Belagavi Winter Session: ಸದನದಲ್ಲಿ ಎಲೆ ಚುಕ್ಕಿ ರೋಗ ಸದ್ದು; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಸಚಿವರ ಜತೆ ಶಾಸಕ ದಿನೇಶ್‌ ಗೂಳಿಗೌಡ ಚರ್ಚೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಬಳಿ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಚರ್ಚೆ ನಡೆಸಿದ್ದಾರೆ.

Exit mobile version