Site icon Vistara News

Bangalore Rain: ರಾಜಧಾನಿಯ ವಿವಿಧೆಡೆ ಧಾರಾಕಾರ ಮಳೆ; ಕೆರೆಯಂತಾದ ಮೆಜೆಸ್ಟಿಕ್‌ ಬಸ್‌ ನಿಲ್ದಾಣ

Heavy rains

ಬೆಂಗಳೂರು: ನಗರದ ವಿವಿಧೆಡೆ ಮಂಗಳವಾರ ರಾತ್ರಿ ಧಾರಾಕಾರ ಮಳೆ(Bangalore Rain) ಸುರಿಯಿತು. ಟೌನ್ ಹಾಲ್, ಮಾರುಕಟ್ಟೆ, ಮೆಜೆಸ್ಟಿಕ್, ಕಾರ್ಪೋರೇಷನ್, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ಹಲವು ಕಡೆಗಳಲ್ಲಿ ಬಿರುಸಿನ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಇನ್ನು ನಿರಂತರವಾಗಿ ಸುರಿದ ಮಳೆಗೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣ ಕೆರೆಯಂತಾಗಿತ್ತು. ಬಸ್‌ ನಿಲ್ದಾಣದಲ್ಲಿ ನೀರು ತುಂಬಿಕೊಂಡಿದ್ದರಿಂದ ಪ್ಲಾಟ್ ಫಾರ್ಮ್‌ಗಳಲ್ಲಿ ಬಸ್‌ ಹತ್ತಲು ಪ್ರಯಾಣಿಕರಿಗೆ ತೊಂದರೆಯಾಯಿತು. ಹಾಗೆಯೇ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸವಾರರು ಕಿರಿಕಿರಿ ಉಂಟಾಯಿತು.

ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಮಳೆ ನೀರು ನಿಂತಿರುವುದು.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಭಾರಿ ಮಳೆ ಸಾಧ್ಯತೆ ಇದೆ. ಸೆಪ್ಟೆಂಬರ್ 6 ಮತ್ತು 7ರಂದು ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬರಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ | Weather report : ಬೆಂಗಳೂರು ಗಡ ಗಡ ; ಉತ್ತರ ಕರ್ನಾಟಕ ಮಳೆಯಿಂದ ತತ್ತರ!

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ವ್ಯಾಪಕ ಮಳೆ ಬರಲಿದ್ದು, ಈ ಎರಡು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Exit mobile version