ಕರ್ನಾಟಕ
Hassan News: ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹಠಾತ್ ಸಾವು; ವೈದ್ಯರ ವಿರುದ್ಧ ಆಕ್ರೋಶ
Hassan News: ವೈದ್ಯರ ನಿರ್ಲಕ್ಷ್ಯದ ವಿರುದ್ಧ ಮೃತ ವ್ಯಕ್ತಿಯ ಸಂಬಂಧಿಕರು ಬೇಲೂರು ತಾಲೂಕು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಹಾಸನ: ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹಠಾತ್ ಸಾವಿಗೀಡಾಗಿರುವ ಘಟನೆ ಜಿಲ್ಲೆಯ (Hassan News) ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯದಲ್ಲಿ ನಡೆದಿದೆ. ಆದರೆ, ವೈದ್ಯರ ನಿರ್ಲಕ್ಷ್ಯವೇ ವ್ಯಕ್ತಿಯ ಸಾವಿಗೆ ಕಾರಣ ಎಂದು ಆರೋಪಿಸಿ ಸಂಬಂಧಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾ ರಾತ್ರಿ ಹೃದಯಾಘಾತದಿಂದ ಹೆಬ್ಬಾಳು ಗ್ರಾಮದ ಶಿವಣ್ಣ (60) ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಎದೆ ನೋವಿನಿಂದ ಆಸ್ಪತ್ರೆಗೆ ಬಂದಾಗ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡದೆ ವೈದ್ಯರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಅರವಳಿಕೆ ತಜ್ಞ ಅಮಾನತು, ವೈದ್ಯಾಧಿಕಾರಿಗೆ ನೋಟಿಸ್
ಸ್ಥಳಕ್ಕೆ ಡಿಎಚ್‌ಒ ಡಾ.ಶಿವಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ವೈದ್ಯನ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಅರವಳಿಕೆ ತಜ್ಞ ಡಾ.ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ತಾಲೂಕು ವೈದ್ಯಾಧಿಕಾರಿ ಹಾಗೂ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್ ನೋಟೀಸ್ ನೀಡುವುದಾಗಿ ಡಿಎಚ್ಒ ತಿಳಿಸಿದ್ದಾರೆ.
ಇದನ್ನೂ ಓದಿ | Living together : ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯ ನಡುವೆ ಜಗಳ; ಕತ್ತು ಹಿಸುಕಿ ಕೊಲೆ ಮಾಡಿ ಪ್ರಿಯಕರ
ಡಾ.ಹರ್ಷ ಅಮಾನತು ಮಾಡಿದ ಬಳಿಕ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಅಸಮದಾನ ಹೊರಹಾಕಿದ ಬೇಲೂರು ಶಾಸಕ ಎಚ್.ಕೆ.ಸುರೇಶ್ ಅವರು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ, ಹೋರಾಟ ಹಿಂಪಡೆಯಿರಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರು ಪ್ರತಿಭಟನೆ ಹಿಂಪಡೆದರು.
ಕರ್ನಾಟಕ
Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?
Bangalore Bandh: ಕಾವೇರಿ ನೀರು ಬಿಡುಗಡೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಯಕರನ್ನು ಬಂಧಿಸಿದ್ದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ ಎಂದು ಕೇಳಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಿದವರು ಮತ್ತು ಬೆಂಬಲ ನೀಡಿದ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸುತ್ತಿರುವ (Protesters and Leaders deatained) ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (HD Kumaraswamy) ಕೆಂಡಾಮಂಡಲರಾಗಿದ್ದಾರೆ.
ಮೇಕೆದಾಟು ಪಾದಯಾತ್ರೆ ಮಾಡಿದವರು ಈಗ ಕಾವೇರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಇದು ಕನ್ನಡಿಗರ ಸರ್ಕಾರವೋ, ಸ್ಟಾಲಿನ್‌ನ ಬಾಡಿಗೆ ಸರ್ಕಾರವೋ? ಕಾಂಗ್ರೆಸ್ ಡಿಎಂಕೆಯ ಬಿ ಟೀಮಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು_ಬಂದ್ ಕಾವೇರಿ_ನಮ್ಮದು ಎಂಬ ಹ್ಯಾಷ್ ಟ್ಯಾಗ್‌ನಲ್ಲಿ ಅವರು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಒಂದು ನ್ಯಾಯವೇ
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?- ಎಂದು ಕುಮಾರಸ್ವಾಮಿ ಕೇಳಿದ್ದಾರೆ.
ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ಮಾಡಬಾರದೇ?
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?
ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಿ ಎಂದ ಎಚ್‌ಡಿಕೆ
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್ ಪೊಲೀಸ್ ವಶಕ್ಕೆ
ರಾತ್ರೋರಾತ್ರಿ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಪೊಲೀಸರು
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಹಿಂದೆ ಬಂದ್ ವೇಳೆ ಗಲಾಟೆಗೆ ಕಾರಣರಾಗಿದ್ದ ಕೆಲವು ನಾಯಕರು ಮತ್ತು ರೌಡಿ ಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದರು.
ʻʻಹಳೆ ಪ್ರಕರಣಗಳಲ್ಲಿ ಇನ್ವಾಲ್ ಆಗಿದ್ದ ರೌಡಿಶೀಟರ್‌ಗಳನ್ನು ಕಸ್ಟಡಿಗೆ ತಗೊಂಡಿದ್ದೇವೆ. ನಿನ್ನೆ ರಾತ್ರಿನೇ ಹಳೆ ಕೇಸ್ ಗಳಲ್ಲಿ ಭಾಗಿಯಾಗಿದ್ದ 150 ಜನರನ್ನ ವಶಕ್ಕೆ ಪಡೆದಿದ್ದೇವೆ. ಅದು ಇವತ್ತು ತುಂಬಾನೇ ಹೆಲ್ಪ್ ಆಗಿದೆ. ಬೆಳಗ್ಗೆ 4 ಘಂಟೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಒಂದಷ್ಟು ಲೀಡರ್‌ಗಳನ್ನು ವಶಕ್ಕೆ ಪಡೆದಿದ್ದೇವೆ. ಎಲ್ಲಾ ರೀತಿಯ ಭದ್ರತೆ ವಹಿಸಿದ್ದೇವೆʼʼ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಜಲಸಂರಕ್ಷಣಾ ಸಮಿತಿಯ ಕುರುಬೂರು ಶಾಂತ ಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಎಲ್ಲ ನಾಯಕರನ್ನು ಫ್ರೀಡಂ ಪಾರ್ಕ್‌ಗೆ ತಂದು ಬಿಡಲಾಗುತ್ತಿದ್ದು, ಅಲ್ಲಿಂದ ಹೊರಗೆ ಹೋಗಲು ಬಿಡುತ್ತಿಲ್ಲ.
ತುಮಕೂರು
Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು
ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ (Road Accident). ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ತುಮಕೂರು: ಕಾರಿಗೆ ಲಾರಿ ಡಿಕ್ಕಿಯಾದ (lorry car crash) ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ (Road Accident) ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28) ಹಾಗೂ ಶಿವಕುಮಾರ್ ಸಾವಿಗೀಡಾದವರು. ಉಜ್ವಲ್ ಕೃಷ್ಣ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎಂಬ ಮಾಹಿತಿ ದೊರೆತಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಟೋಗೆ ಶಾಲಾ ಬಸ್ ಡಿಕ್ಕಿ, ಐವರ ದುರ್ಮರಣ
ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ ಪಲ್ಟಿಯಾಗಿ 10 ಜನರಿಗೆ ಗಾಯ
ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident : ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸವಾರರು ದಾರುಣ ಸಾವು
ಕರ್ನಾಟಕ
Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್, ಬಾಯ್ ಬಾಯ್ ಎಂದ ಕಂಡಕ್ಟರ್
Bangalore Bandh: ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಬರುವ ಬಸ್‌ಗಳು ಗಡಿಭಾಗದಿಂದಲೇ ಮರಳುತ್ತಿವೆ. ಯಾವುದೇ ಸಮಸ್ಯೆ ಬೇಡ ಎಂದು ಮುನ್ನೆಚ್ಚರಿಕೆ ವಹಿಸುತ್ತಿವೆ.
ಆನೇಕಲ್ ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು (Cauvery water Dispute) ಎಂದು ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ, ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಸ್‌ಗಳು (Tamilnadu-Bangalore bus) ಗಡಿ ಭಾಗದಿಂದಲೇ ಹಿಂದಕ್ಕೆ ಮರಳುತ್ತಿವೆ (Buses returning from border).
ತಮಿಳುನಾಡು-ಕರ್ನಾಟಕ ಗಡಿಭಾಗವಾದ ಅತ್ತಿಬೆಲೆಯಲ್ಲಿ (Attibele Border) ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಕಡೆಯಿಂದ ಬರುತ್ತಿರುವ ಬಸ್‌ಗಳು ಅತ್ತಿ ಬೆಲೆಯ ಗಡಿ ಭಾಗದಿಂದಲೆ ವಾಪಸ್ ತೆರಳುತ್ತಿವೆ. ಹೀಗೆ ತಿರುಗಿಸಿಕೊಂಡು ಹೋಗುವಾಗ ತಮಿಳುನಾಡು ಬಸ್ಸಿನ ಕಂಡಕ್ಟರ್ ಅವರು ಒಬ್ಬರು ಕರ್ನಾಟಕದವರ ಕಡೆಗೆ ಕೈ ಬೀಸಿ ಬಾಯ್ ಬಾಯ್ ಎನ್ನುತ್ತಲೇ ಶುಭ ಹಾರೈಸಿದ್ದು ಕಂಡುಬಂತು.
ತಮಿಳುನಾಡಿನಿಂದ ಬರುವ ಬಸ್ ಗಳು ಗಡಿಭಾಗದವರೆಗೆ ಪ್ರಯಾಣಿಕರನ್ನ ಬಿಟ್ಟು ಅಲ್ಲಿಂದ ವಾಪಸ್ ಆದರೆ, ಇತ್ತ ಅತ್ತಿಬೆಲೆಯಿಂದ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಬೆಂಗಳೂರಿನತ್ತ ಬರುತ್ತಿದ್ದಾರೆ.
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ಸಹ ಅತ್ತಿಬೆಲೆ ಗಡಿಭಾಗದವರೆಗೆ ಮಾತ್ರ ಸಂಚಾರ ಮಾಡುತ್ತಿವೆ. ಅಲ್ಲಿಂದ ಆಚೆಗೆ ತಮಿಳುನಾಡಿನ ಬಸ್‌ಗಳನ್ನೇ ಆಶ್ರಯಿಸುತ್ತಿದ್ದಾರೆ.
ಇದನ್ನೂ ಓದಿ : Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು
ಹೇಗೆ ನಡೆಯುತ್ತಿದೆ ಬೆಂಗಳೂರು ಬಂದ್?
ಕಾವರಿ ನೀರಿನ ವಿಚಾರದಲ್ಲಿ (Cauvery protest) ಕನ್ನಡಿಗರಿಗೆ ಆಗಿರುವ ಅನ್ಯಾಯ ಹಾಗೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು ಬಂದ್ (Bangalore Bandh) ಇಂದು ಮುಂಜಾನೆಯಿಂದ ಆರಂಭವಾಗಿದೆ.
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮತ್ತು ಇತರ ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ (Bangalore Bandh) ಆಚರಿಸುತ್ತಿದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹಾಗೂ ಜೆಡಿಎಸ್ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.
ಮೆಟ್ರೋ ಎಂದಿನಂತೆ ಕಾರ್ಯಾಚರಿಸಿತು. ಮೆಟ್ರೋದ ಎಲ್ಲ ಲೈನ್‌ಗಳೂ ಪೂರ್ಣವಾಗಿ ಕಾರ್ಯಾಚರಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಬಸ್‌ಗಳು ಎಂದಿನಂತೆ ಸಂಚಾರಕ್ಕೆ ಸಿದ್ಧಚಾಗಿದ್ದರೂ ಜನ ಬೀದಿಗಿಳಿಯಲಿಲ್ಲ. ಸದ್ಯ ಬಸ್‌ಗಳ ಸಂಖ್ಯೆ ಇಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿ ತುಂಬಿ ತುಳುಕಿತು. ಮಧ್ಯಾಹ್ನ ಹಾಗೂ ಸಂಜೆ ವಿಮಾನ ಪ್ರಯಾಣದ ಸಮಯ ಹೊಂದಿದ್ದವರು ಕೂಡ, ಬಂದ್ ಜೋರಾದರೆ ಎಂಬ ಆತಂಕದಿಂದ ಮುಂಜಾನೆ ಆರು ಗಂಟೆಗೇ ನಿಲ್ದಾಣಕ್ಕೆ ಧಾವಿಸಿ ಬೀಡುಬಿಟ್ಟರು. ಯಾವುದೇ ವಿಮಾನ ಹಾರಾಟ ವ್ಯತ್ಯಯವಾಗಿಲ್ಲ. ಟ್ಯಾಕ್ಸಿ ಹಾಗೂ ಕ್ಯಾಬ್‌ಗಳು ಕಾರ್ಯಾಚರಿಸುತ್ತಿವೆ.
ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕೆಆರ್ ಮಾರ್ಕೆಟ್ ಇಂದು ಬಿಕೋ ಎನ್ನುತ್ತಿದೆ. ವಿರಳ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದೆ. ಬೀದಿ ಬದಿ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದ್ದು, ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಬೀದಿಬದಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಇಳಿಕೆಯಾಗಿದೆ. ಹೂ, ಸೊಪ್ಪು, ತರಕಾರಿ ವ್ಯಾಪಾರ ಕೂಡ ಡಲ್ ಆಗಿದೆ.
ಫ್ರೀಡಂ ಪಾರ್ಕ್‌ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆಯಾಗಿದ್ದು, ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾಕಾರರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ಗೆ ಖಾಲಿ ಬಿಂದಿಗೆ ಹಿಡಿದು ಬಂದ ಪ್ರತಿಭಟನಾಕಾರರು ಅರೆ ಬೆತ್ತಲೆಯಾಗಿ ಪ್ರತಿಭಟಿಸಿದರು. ಫ್ರೀಡಂ ಪಾರ್ಕ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ಹೋರಾಟ ಒಕ್ಕೂಟದಿಂದ ಟೌನ್ ಹಾಲ್‌ಗೆ ರ್ಯಾಲಿ ಏರ್ಪಡಿಸಲಾಗಿದ್ದು, ಅಲ್ಲಿಯೂ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಹೋರಾಟಗಾರರು ಬಾಪೂಜಿನಗರ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕ
Bangalore Bandh: ಬೆಂಗಳೂರು ಸ್ತಬ್ಧ: ರೈತರ ಅರೆಬೆತ್ತಲೆ ಪ್ರತಿಭಟನೆ, ಬಿಗಿ ಬಂದೋಬಸ್ತ್, ಶಾಲೆಗಳಿಗೆ ರಜೆ, ಬೀದಿಗಿಳಿಯದ ಜನ
ಬಿಜೆಪಿ ಹಾಗೂ ಜೆಡಿಎಸ್ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.
ಬೆಂಗಳೂರು: ಕಾವರಿ ನೀರಿನ ವಿಚಾರದಲ್ಲಿ (Cauvery protest) ಕನ್ನಡಿಗರಿಗೆ ಆಗಿರುವ ಅನ್ಯಾಯ ಹಾಗೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು ಬಂದ್ (Bangalore Bandh) ಇಂದು ಮುಂಜಾನೆಯಿಂದ ಆರಂಭವಾಗಿದೆ.
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮತ್ತು ಇತರ ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ (Bangalore Bandh) ಆಚರಿಸುತ್ತಿದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹಾಗೂ ಜೆಡಿಎಸ್ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.
ಮೆಟ್ರೋ ಎಂದಿನಂತೆ ಕಾರ್ಯಾಚರಿಸಿತು. ಮೆಟ್ರೋದ ಎಲ್ಲ ಲೈನ್‌ಗಳೂ ಪೂರ್ಣವಾಗಿ ಕಾರ್ಯಾಚರಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಬಸ್‌ಗಳು ಎಂದಿನಂತೆ ಸಂಚಾರಕ್ಕೆ ಸಿದ್ಧಚಾಗಿದ್ದರೂ ಜನ ಬೀದಿಗಿಳಿಯಲಿಲ್ಲ. ಸದ್ಯ ಬಸ್‌ಗಳ ಸಂಖ್ಯೆ ಇಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿ ತುಂಬಿ ತುಳುಕಿತು. ಮಧ್ಯಾಹ್ನ ಹಾಗೂ ಸಂಜೆ ವಿಮಾನ ಪ್ರಯಾಣದ ಸಮಯ ಹೊಂದಿದ್ದವರು ಕೂಡ, ಬಂದ್ ಜೋರಾದರೆ ಎಂಬ ಆತಂಕದಿಂದ ಮುಂಜಾನೆ ಆರು ಗಂಟೆಗೇ ನಿಲ್ದಾಣಕ್ಕೆ ಧಾವಿಸಿ ಬೀಡುಬಿಟ್ಟರು. ಯಾವುದೇ ವಿಮಾನ ಹಾರಾಟ ವ್ಯತ್ಯಯವಾಗಿಲ್ಲ. ಟ್ಯಾಕ್ಸಿ ಹಾಗೂ ಕ್ಯಾಬ್‌ಗಳು ಕಾರ್ಯಾಚರಿಸುತ್ತಿವೆ.
ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕೆಆರ್ ಮಾರ್ಕೆಟ್ ಇಂದು ಬಿಕೋ ಎನ್ನುತ್ತಿದೆ. ವಿರಳ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದೆ. ಬೀದಿ ಬದಿ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದ್ದು, ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಬೀದಿಬದಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಇಳಿಕೆಯಾಗಿದೆ. ಹೂ, ಸೊಪ್ಪು, ತರಕಾರಿ ವ್ಯಾಪಾರ ಕೂಡ ಡಲ್ ಆಗಿದೆ.
ಫ್ರೀಡಂ ಪಾರ್ಕ್‌ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆಯಾಗಿದ್ದು, ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾಕಾರರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ಗೆ ಖಾಲಿ ಬಿಂದಿಗೆ ಹಿಡಿದು ಬಂದ ಪ್ರತಿಭಟನಾಕಾರರು ಅರೆ ಬೆತ್ತಲೆಯಾಗಿ ಪ್ರತಿಭಟಿಸಿದರು. ಫ್ರೀಡಂ ಪಾರ್ಕ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ಹೋರಾಟ ಒಕ್ಕೂಟದಿಂದ ಟೌನ್ ಹಾಲ್‌ಗೆ ರ್ಯಾಲಿ ಏರ್ಪಡಿಸಲಾಗಿದ್ದು, ಅಲ್ಲಿಯೂ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಹೋರಾಟಗಾರರು ಬಾಪೂಜಿನಗರ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜಧಾನಿಯ ಬಹುತೇಕ ಶಾಲೆಗಳು ಇಂದು ರಜೆ ಘೋಷಿಸಿವೆ. ಮಲ್ಲೇಶ್ವರಂ, ರಾಜಾಜಿನಗರ, ಕೆಂಗೇರಿ ಮುಂತಾದ ಕಡೆಗಳಲ್ಲಿ ಖಾಸಗಿ ಶಾಲೆಗಳು ರಜೆ ಘೋಷಿಸಿದವು.
ಇದನ್ನೂ ಓದಿ: Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
-
Live News3 hours ago
Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
-
ವಿದೇಶ20 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ18 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ13 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ14 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
ದೇಶ11 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
South Cinema17 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ21 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?