ಹಾಸನ: ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹಠಾತ್ ಸಾವಿಗೀಡಾಗಿರುವ ಘಟನೆ ಜಿಲ್ಲೆಯ (Hassan News) ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯದಲ್ಲಿ ನಡೆದಿದೆ. ಆದರೆ, ವೈದ್ಯರ ನಿರ್ಲಕ್ಷ್ಯವೇ ವ್ಯಕ್ತಿಯ ಸಾವಿಗೆ ಕಾರಣ ಎಂದು ಆರೋಪಿಸಿ ಸಂಬಂಧಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾ ರಾತ್ರಿ ಹೃದಯಾಘಾತದಿಂದ ಹೆಬ್ಬಾಳು ಗ್ರಾಮದ ಶಿವಣ್ಣ (60) ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಎದೆ ನೋವಿನಿಂದ ಆಸ್ಪತ್ರೆಗೆ ಬಂದಾಗ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡದೆ ವೈದ್ಯರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಅರವಳಿಕೆ ತಜ್ಞ ಅಮಾನತು, ವೈದ್ಯಾಧಿಕಾರಿಗೆ ನೋಟಿಸ್
ಸ್ಥಳಕ್ಕೆ ಡಿಎಚ್‌ಒ ಡಾ.ಶಿವಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ವೈದ್ಯನ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಅರವಳಿಕೆ ತಜ್ಞ ಡಾ.ಹರ್ಷ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ತಾಲೂಕು ವೈದ್ಯಾಧಿಕಾರಿ ಹಾಗೂ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್ ನೋಟೀಸ್ ನೀಡುವುದಾಗಿ ಡಿಎಚ್ಒ ತಿಳಿಸಿದ್ದಾರೆ.
ಇದನ್ನೂ ಓದಿ | Living together : ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯ ನಡುವೆ ಜಗಳ; ಕತ್ತು ಹಿಸುಕಿ ಕೊಲೆ ಮಾಡಿ ಪ್ರಿಯಕರ
ಡಾ.ಹರ್ಷ ಅಮಾನತು ಮಾಡಿದ ಬಳಿಕ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಅಸಮದಾನ ಹೊರಹಾಕಿದ ಬೇಲೂರು ಶಾಸಕ ಎಚ್.ಕೆ.ಸುರೇಶ್ ಅವರು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ, ಹೋರಾಟ ಹಿಂಪಡೆಯಿರಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರು ಪ್ರತಿಭಟನೆ ಹಿಂಪಡೆದರು.