ಹುಬ್ಬಳ್ಳಿ: ವ್ಯಕ್ತಿಯೊಬ್ಬ ಕುಡಿತದ ಮತ್ತಿನಲ್ಲಿ ಹೆಂಡತಿ, ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ (Crime News) ನಡೆಸಿದ ಬಳಿಕ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿಯ ಸುಳ್ಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಕ್ಕೀರಪ್ಪ ಮಾದರ ಎಂಬಾತನೇ ಈ ರೀತಿ ಹಲ್ಲೆ ಮಾಡಿ ಸಾವಿಗೆ ಶರಣಾದವನು.
ಪತ್ನಿ ಮುದುಕವ್ವ ಹಾಗೂ ಇಬ್ಬರು ಮಕ್ಕಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಪಕ್ಕೀರಪ್ಪ ಬಳಿಕ ಮತ್ತು ಇಳಿದ ಮೇಲೆ ಪರಿಸ್ಥಿತಿಯನ್ನು ಎದುರಿಸಲಾಗದೆ ಪ್ರಾಣ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪತ್ನಿ ಮುದುಕವ್ವ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಮಕ್ಕಳಾದ ಶ್ರಾವಣಿ (8), ಶ್ರೇಯಸ್ (6), ಸೃಷ್ಟಿ (4) ತಲೆ, ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಬೊಲೆರೋ ಡಿಕ್ಕಿಯಾಗಿ ಪಾದಚಾರಿ ಮೃತ್ಯು
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಬೊಲೆರೋ ಪಿಕಪ್ ವಾಹನ ಡಿಕ್ಕಿಯಾಗಿ ಪಾದಚಾರಿ ನೇಮಿರಾಜ (೫೫) ಎಂಬುವವರು ಮೃತಪಟ್ಟಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Road Accident : ಶಿವಮೊಗ್ಗದಲ್ಲಿ ಖಾಸಗಿ ಬಸ್-ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವು