Site icon Vistara News

ಕೆಂಪೇಗೌಡರ ಮೃತ್ತಿಕೆ ಸಂಗ್ರಹ ರಥಯಾತ್ರೆ | ರಥದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

death1

ರಾಮನಗರ: ಇಲ್ಲಿನ ಮಾಗಡಿ ತಾಲೂಕಿನ ಬಸವನಗುಡಿಪಾಳ್ಯದಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ರಥದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಪ್ರಕರಣ ನಡೆದಿದೆ. ಎಸ್.ಬ್ಯಾಡರಹಳ್ಳಿ ಗ್ರಾಮದ ಶ್ರೀನಿವಾಸ್ (29) ಮೃತ ದುರ್ದೈವಿ.

ಮೃತ ಶ್ರೀನಿವಾಸ್‌

ಪೂಜಾಕುಣಿತ ಆದ ಬಳಿಕ ರಥದ ಮೇಲೆ ವಿಶ್ರಾಂತಿ ಪಡೆಯಲು ಹೋಗಿದ್ದಾರೆ. ಈ ವೇಳೆ ಶ್ರೀನಿವಾಸ್‌ ಜಾರಿ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಮಾನ ನಿಲ್ದಾಣದ ಭುವನಹಳ್ಳಿ ಬಳಿ ಸುಮಾರು 84 ಕೋಟಿ ರೂಪಾಯಿ ವೆಚ್ಚದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಕೆಂಪೇಗೌಡರ ಮೂರ್ತಿಯ ಸುತ್ತ ಸುಮಾರು 23 ಎಕರೆಯಲ್ಲಿ ಉದ್ಯಾನ ನಿರ್ಮಾಣವಾಗಲಿದೆ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಪೂರಕವಾಗಿ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನ ನಡೆಯುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಮೃತ್ತಿಕೆ ಸಂಗ್ರಹ ಮಾಡಲಾಗುತ್ತಿದೆ.

ಇದನ್ನೂ ಓದಿ | Negligence | ಅವಳಿ ಮಕ್ಕಳ ಸಹಿತ ತಾಯಿ ಸಾವು; ತಾಯಿ ಕಾರ್ಡ್ ಇಲ್ಲವೆಂದು ವಾಪಸ್‌ ಕಳಿಸಿದ ಸರ್ಕಾರಿ ಆಸ್ಪತ್ರೆ

Exit mobile version