Site icon Vistara News

Electric shock: ಜಮೀನಿನಲ್ಲಿ ಅಳವಡಿಸಿದ್ದ ತಂತಿಗೆ ಅಕ್ರಮ ವಿದ್ಯುತ್‌ ಸಂಪರ್ಕ; ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

water heater that fell on the body Mother and son die of Electric shock

ರಾಮನಗರ: ಮಾಗಡಿ (Magadi) ತಾಲೂಕಿನ ಬಾಚೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ತಗುಲಿ‌ ಶಾಕ್‌ (Electric shock) ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಆನಂದ್ (48) ಮೃತಪಟ್ಟ ವ್ಯಕ್ತಿ. ಇವರು ತಮ್ಮ ಜಮೀನಿನಲ್ಲಿ ಕಟ್ಟಿದ್ದ ಹಸು ಕಾಣಿಸದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಅಲ್ಲೆಲ್ಲೂ ಕಾಣಿಸಲಿಲ್ಲ. ಈ ಹಿನ್ನೆಲೆಯಲ್ಲಿ ಬಹಳವೇ ಹುಡುಕಾಟ ನಡೆಸಿದರೂ ಕಾಣಿಸಲಿಲ್ಲ. ಹೀಗಾಗಿ ಅವರು ಪಕ್ಕದ ಜಮೀನಿನಲ್ಲಿ ಇರಬಹುದೇ ಎಂದು ನೋಡಲು ಹೋಗಿದ್ದಾರೆ.

ಪಕ್ಕದ ಜಮೀನಿನಲ್ಲಿ ಹಾಕಲಾಗಿದ್ದ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕೊಡಲಾಗಿತ್ತು. ಈ ವಿಷಯ ತಿಳಿಯದ ಆನಂದ್‌ ತಂತಿಯನ್ನು ಸ್ಪರ್ಶ ಮಾಡಿದ್ದಾರೆ. ಇದರಿಂದ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಆನಂದ್ ಸಾವಿಗೆ ಕಾರಣ ಎಂದು ಕುಟುಂಬಸ್ಥರ ದೂರು ನೀಡಿದ್ದಾರೆ. ಸೂಕ್ತ ಪರಿಹಾರ ನೀಡುವಂತೆಯೂ ಆಗ್ರಹಿಸಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: SSC MTS Recruitment 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಎಂಟಿಎಸ್‌ ಹುದ್ದೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಚಾವ್‌ ಆಗಿತ್ತು ಆನೆ

ಈ ರೀತಿ ಜಮೀನುಗಳಲ್ಲಿ ಬೇಲಿಗಳಿಗೆ ಅಕ್ರಮ ವಿದ್ಯುತ್‌ ಸಂಪರ್ಕ ನೀಡುವ ಪ್ರಕರಣಗಳು ಆಗಾಗ ಕಂಡುಬರತ್ತಲೇ ಇವೆ. ಇದರಿಂದ ಸಾಕಷ್ಟು ಸಾವು-ನೋವುಗಳೂ ಸಂಭವಿಸುತ್ತಿದ್ದು, ಸೂಕ್ತ ಜಾಗೃತಿ ಮೂಡಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಇದೇ ರೀತಿಯಾಗಿ ಚಾಮರಾಜನಗರ ಜಿಲ್ಲೆಯಲ್ಲಿಯೂ ಈಚೆಗೆ ಪ್ರಕರಣ ನಡೆದಿತ್ತು. ಆನೆಯೊಂದು ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿತ್ತು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರ ಹರಸಹಾಸದಿಂದ ಬದುಕುಳಿದಿತ್ತು. ಗುಂಡ್ಲುಪೇಟೆ ತಾಲೂಕು ಬರಗಿ ಸಮೀಪ ಬಂಡೀಪುರ ಓಂಕಾರ ಅರಣ್ಯ ವಲಯದ ವ್ಯಾಪ್ತಿಯ ಜಮೀನೊಂದರಲ್ಲಿ ಈ ಪ್ರಕರಣ ನಡೆದಿತ್ತು.

ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕಾಡಾನೆಯೊಂದನ್ನು ಬದುಕಿಸುವಲ್ಲಿ ಯಶಸ್ವಿಯಾಗಿದ್ದ ಬಂಡೀಪುರ ಅರಣ್ಯ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ತಮ್ಮ ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದು ಹೀಗೆ

ಕಾಡಾನೆಗೆ ನೀಡಲಾಗುತ್ತಿದ್ದ ಚಿಕಿತ್ಸೆಯ ದೃಶ್ಯಗಳುಳ್ಳ ಫೋಟೊಗಳ ಸಹಿತ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಇದನ್ನು ನೋಡಿ ನನಗೆ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ನಿಜಕ್ಕೂ ಶ್ಲಾಘನೀಯ” ಎಂದು ಕೊಂಡಾಡಿದ್ದಾರೆ.

ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಭೂಪೇಂದ್ರ ಯಾದವ್‌ ಅವರು ಈ ಇಡೀ ಸಂಗತಿಯನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಾಕಿ ಶ್ಲಾಘನೆ ವ್ಯಕ್ತಪಡಿಸಿದ್ದರು. “ಬಂಡೀಪುರ ಹುಲಿ ರಕ್ಷಿತಾರಣ್ಯದ ಸಿಬ್ಬಂದಿಯ ಸಕಾಲಿಕ ಕ್ರಮದಿಂದಾಗಿ ವಿದ್ಯುತ್ ಸ್ಪರ್ಶದಿಂದ ಪ್ರಾಣಾಪಾಯದಿಂದ ನರಳುತ್ತಿದ್ದ ಆನೆಯನ್ನು ರಕ್ಷಿಸಲಾಗಿದೆ ಎಂಬ ವಿಷಯ ತಿಳಿದು ನನಗೆ ತುಂಬಾ ಸಂತೋಷವಾಗಿದೆ. ಹೆಣ್ಣು ಆನೆಯನ್ನು ಮತ್ತೆ ಮೀಸಲು ಪ್ರದೇಶಕ್ಕೆ ಬಿಡಲಾಗಿದೆ. ಜತೆಗೆ ಅದರ ಮೇಲೆ ನಿರಂತರ ನಿಗಾ ಇಡಲಾಗುತ್ತಿದೆ ಎಂದು ಭೂಪೇಂದ್ರ ಯಾದವ್‌ ಬರೆದುಕೊಂಡಿದ್ದರು.

ಸಚಿವ ಭೂಪೇಂದ್ರ ಯಾದವ್‌ ಮಾಡಿರುವ ಈ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿರುವ ಪ್ರಧಾನಿ, ಖುಷಿಯೊಂದಿಗೆ ಒಂದೆರೆಡು ಸಾಲುಗಳನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Amit Shah: ಮೋದಿ ವಿರುದ್ಧ ರಾಹುಲ್‌ ಗಾಂಧಿ ಸಮರ್ಥ ಪ್ರಧಾನಿ ಅಭ್ಯರ್ಥಿಯೇ? ಅಮಿತ್‌ ಶಾ ಉತ್ತರ ಏನು?

ಏನಿದು ಪ್ರಕರಣ?

ಗುಂಡ್ಲುಪೇಟೆ ತಾಲೂಕು ಬರಗಿ ಸಮೀಪ ಬಂಡೀಪುರ ಓಂಕಾರ ಅರಣ್ಯ ವಲಯದ ವ್ಯಾಪ್ತಿಯ ಜಮೀನೊಂದರಲ್ಲಿ ಅಕ್ರಮವಾಗಿ ಎಳೆಯಲಾಗಿದ್ದ ವಿದ್ಯುತ್ ತಂತಿ ಬೇಲಿಗೆ ತಾಗಿ ಕಾಡಾನೆಯೊಂದು ಕುಸಿದುಬಿದ್ದಿತ್ತು. ಅದಕ್ಕೆ ತೀವ್ರವಾಗಿ ವಿದ್ಯುತ್‌ ಆಘಾತವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕಾಡಾನೆಯನ್ನು ಬದುಕಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯಕೀಯ ತಂಡವು ಹರಸಾಹಸವನ್ನೇ ಪಟ್ಟಿದ್ದವು. ಸತತ ನಾಲ್ಕು ಗಂಟೆಗಳ ಚಿಕಿತ್ಸೆಯ ತರುವಾಯ ಕಾಡಾನೆಯು ಜೀವ ಉಳಿಸಿಕೊಂಡಿತ್ತು.

Exit mobile version