Site icon Vistara News

Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

Man hacked to death with deadly weapons

#image_title

ಬೆಂಗಳೂರು: ನಗರದ ಜ್ಞಾನಭಾರತಿ ಸಮೀಪದ ಮಂಗನಹಳ್ಳಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ (Murder Case) ಮಾಡಿರುವ ಘಟನೆ ನಡೆದಿದೆ. ದಿನೇಶ್ (46) ಮೃತರು.

ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ದಿನೇಶ್‌ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು, ಶ್ವಾನದಳ ಹಾಗೂ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹದ ಭಾಗಗಳು ಪತ್ತೆ

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದ ವಿ.ಸಿ ನಾಲೆಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹದ ಭಾಗಗಳು ಪತ್ತೆಯಾಗಿವೆ. 40 ವರ್ಷದ ವ್ಯಕ್ತಿಯ ಕತ್ತರಿಸಿದ ಎರಡು ಕಾಲುಗಳು -ಕೈಗಳು ಸೊಂಟದ ಕೆಳಗಿನ ಭಾಗ ಪತ್ತೆಯಾಗಿದ್ದು, ಮುಂಡ ಸೇರಿ ಸೊಂಟದ ಮೇಲ್ಭಾಗದ ನಾಪತ್ತೆಯಾಗಿದೆ. ಸ್ಥಳಕ್ಕೆ ಕೆರಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೈಕ್‌ಗೆ ವಾಹನ ಡಿಕ್ಕಿಯಾಗಿ ಸವಾರ ಸಾವು

ಕೊಪ್ಪಳ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಬಳಿ ನಡೆದಿದೆ. ಗುಡದೂರು ಗ್ರಾಮದ ನಿವಾಸಿ ಪ್ರಕಾಶ (34) ಮೃತ ವ್ಯಕ್ತಿ. ಸಂಜೆ ಬೈಕ್‌ನಲ್ಲಿ ತಾವರಗೇರಿ ಕಡೆ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ದುರಂತ ನಡೆದಿದೆ.

ಇದನ್ನೂ ಓದಿ | Murder Case : ಪತ್ನಿಯನ್ನು ಕೊಂದು ಫೇಸ್‌ಬುಕ್ ಸ್ಟೇಟಸ್‌ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ!

Exit mobile version