Site icon Vistara News

Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ

Man killed in attack with deadly weapons near Kaveripatnam

ಬೆಂಗಳೂರು ಗ್ರಾಮಾಂತರ: ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾವೇರಿಪಟ್ಟಣಂ ಬಳಿಯ ಕೃಷ್ಣಗಿರಿ ಡ್ಯಾಂ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಕೊಲೆ (Murder Case) ಮಾಡಿದೆ.

ಪ್ರೇಮ ಪ್ರಕರಣದಲ್ಲಿ ಯುವಕನ್ನು ಮೂವರು ಯುವಕರ ತಂಡ ಕೊಲೆ ಮಾಡಿದೆ. ಇತ್ತೀಚೆಗೆ ಯುವತಿಯನ್ನು ಪ್ರೀತಿಸಿ ಮೃತ ಯುವಕ ಮದುವೆಯಾಗಿದ್ದ. ಹೀಗಾಗಿ ಯುವತಿ ಕಡೆಯವರಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೃಷ್ಣಗಿರಿ ಡ್ಯಾಂ ಸರ್ವಿಸ್ ರಸ್ತೆಯಲ್ಲಿ ಯುವಕ ಹೋಗುತ್ತಿದ್ದಾಗ ಅಡ್ಡಗಟ್ಟಿರುವ ಆರೋಪಿಗಳು, ತಲ್ವಾರ್‌ನಿಂದ ಹಲ್ಲೆ ನಡೆಸಿದ್ದರಿಂದ ತಲೆ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿ ಯುವಕ ಮೃತಪಟ್ಟಿದ್ದಾನೆ. ಕೊಲೆಯ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ

ಬೆಂಗಳೂರು: ಕಳೆದ ಜನವರಿ 10 ರಂದು ನಾಗವಾರ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಲೋಹಿತ್ ಎಂಬುವವರು ತಮ್ಮ ಬೈಕ್‌ನಲ್ಲಿ ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್ ಜತೆ ಬೈಕ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನಾಗವಾರ ಬಳಿ ಮೆಟ್ರೊ ಪಿಲ್ಲರ್ ಬೈಕ್ ಮೇಲೆ ಬಿದ್ದು ತಾಯಿ ತೇಜಸ್ವಿನಿ ಹಾಗೂ ಮಗ ವಿಹಾನ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮೃತ ತೇಜಸ್ವಿನಿ ಪತಿ ಲೋಹಿತ್ ಗೋವಿಂದಪುರ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ | Road accident : ಬೈಕ್‌- ಲಾರಿ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು

ಲೋಹಿತ್ ನೀಡಿದ ದೂರಿನನ್ವಯ ಸೈಟ್ ಎಂಜಿನಿಯರ್, ಮೆಟ್ರೊ ಕಂಟ್ರಾಕ್ಟರ್, ಸೈಟ್ ಇಂಚಾರ್ಜ್, ಬಿಎಂಆರ್‌ಸಿಎಲ್ ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಗೋವಿಂದಪುರ ಪೊಲೀಸರು ಪೂರ್ಣಗೊಳಿಸಿದ್ದಾರೆ. ಕೇಸ್ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಗೋವಿಂದಪುರ ಪೊಲೀಸರ ವರದಿಯನ್ನು ಖುದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಮುಖ ಅಂಶಗಳನ್ನು ಪರಿಶೀಲನೆ ಮಾಡಲಿದ್ದಾರೆ. ಪೊಲೀಸರು ಪ್ರಮುಖವಾಗಿ ಎರಡು ಅಂಶಗಳ ಮೇಲೆ ಒತ್ತು ಕೊಟ್ಟು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

ಮೆಟ್ರೋ ಪಿಲ್ಲರ್ ದುರಂತದಲ್ಲಿ ಮೊದಲಿಗೆ ಮೆಟ್ರೋ ಪಿಲ್ಲರ್‌ನ ಪ್ಲಾನ್ ಹಾಗೂ ಎಕ್ಸಿಕ್ಯೂಟಿಂಗ್. ಪಿಲ್ಲರ್ ಬಳಿ ಕೈಗೊಂಡಿದ್ದ ಸುರಕ್ಷತಾ ಕ್ರಮಗಳು. ಸುರಕ್ಷತೆ ಕೈಗೊಳ್ಳಲು ನಿರ್ಲಕ್ಷ್ಯ ಕೈಗೊಂಡಿರುವುದು ಬೆಳಕಿಗೆ ಬಂದಿದೆ. ಸುರಕ್ಷತಾ ಕ್ರಮ ಕೈಗೊಳ್ಳುವ ಅಧಿಕಾರ ಪ್ರಾಜೆಕ್ಟ್ ಮ್ಯಾನೇಜರ್‌ಗೆ ಇದ್ದು ಪ್ರಾಜೆಕ್ಟ್ ಹೆಡ್‌ಗೆ ಎಲ್ಲರನ್ನೂ ನಿರ್ಧರಿಸುವ ಅಧಿಕಾರವಿದೆ. ಆದರೆ, ಸುರಕ್ಷತಾ ಮುತುವರ್ಜಿ ವಹಿಸದೇ ದುರ್ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಹೀಗೆ ಸುಮಾರು 9 ಮಂದಿ ಅಧಿಕಾರಿಗಳನ್ನು ಹೊಣೆಯಾಗಿಸಿ ತನಿಖೆ ನಡೆಸಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

Exit mobile version